< ಯಾಕೋಬನು ಬರೆದ ಪತ್ರಿಕೆ 4 >

1 ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?
Whence wars and fightings among you? Do they not come hence, even from your lusts, which war in your members?
2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
You strongly desire, and have not; you kill, and are zealous, and can not obtain. You fight and war, but have not, because you ask not.
3 ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.
You ask, and do not receive, because you ask wickedly, that you may spend upon your lusts.
4 ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.
Adulterers, and adulteresses, do you not know that the friendship of the world is enmity against God? Whosoever, therefore, will be a friend of the world, is counted an enemy of God.
5 ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?
Do you think that the scripture speaks in vain? And does the spirit, who dwells in us, strongly incline to envy?
6 ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.
But he gives greater favor. For it says, "God resists the proud, but gives favor to the humble."
7 ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
Therefore, be subject to God. Resist the devil, and he will flee from you.
8 ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
Draw nigh to God, and he will draw nigh to you. Cleanse your hands, you sinners; and purify your hearts, you men of two minds.
9 ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
Be exceedingly afflicted, and mourn, and weep; and let your laughter be turned into mourning, and your joy into sadness.
10 ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.
Be humble in the presence of the Lord, and he will lift you up.
11 ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.
He who speaks against his brother, and condemns his brother, speaks against the law, and condemns the law. But if you condemn the law, you are not a doer of the law, but a judge.
12 ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?
There is one lawgiver, who is able to save, and to destroy. Who are you, that condemn another?
13 “ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ,” ಎನ್ನುವವರೇ ಕೇಳಿರಿ.
Come, now, you who say, To-day, or to-morrow, we will go to such a city, and will abide there one year, and traffic in merchandise, and get gain;
14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
who do not know what shall be to-morrow. For what is your life? It is, indeed, a smoke, which appears for a little while, and then vanishes away.
15 ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.
Instead of which, you ought to say, If the Lord will, we shall live, and do this, or that.
16 ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.
But now you boast in your proud speeches: all such boasting is evil.
17 ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
Wherefore, to him who know how to do good, and does it not, to him it is sin.

< ಯಾಕೋಬನು ಬರೆದ ಪತ್ರಿಕೆ 4 >