< ಯೆರೆಮೀಯನು 10 >
1 ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.
१यहोवा यह कहता है, हे इस्राएल के घराने जो वचन यहोवा तुम से कहता है उसे सुनो।
2 ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.
२“अन्यजातियों की चाल मत सीखो, न उनके समान आकाश के चिन्हों से विस्मित हो, इसलिए कि अन्यजाति लोग उनसे विस्मित होते हैं।
3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.
३क्योंकि देशों के लोगों की रीतियाँ तो निकम्मी हैं। मूरत तो वन में से किसी का काटा हुआ काठ है जिसे कारीगर ने बसूले से बनाया है।
4 ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
४लोग उसको सोने-चाँदी से सजाते और हथौड़े से कील ठोंक-ठोंककर दृढ़ करते हैं कि वह हिल-डुल न सके।
5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.
५वे ककड़ी के खेत में खड़े पुतले के समान हैं, पर वे बोल नहीं सकतीं; उन्हें उठाए फिरना पड़ता है, क्योंकि वे चल नहीं सकतीं। उनसे मत डरो, क्योंकि, न तो वे कुछ बुरा कर सकती हैं और न कुछ भला।”
6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.
६हे यहोवा, तेरे समान कोई नहीं है; तू महान है, और तेरा नाम पराक्रम में बड़ा है।
7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.
७हे सब जातियों के राजा, तुझ से कौन न डरेगा? क्योंकि यह तेरे योग्य है; अन्यजातियों के सारे बुद्धिमानों में, और उनके सारे राज्यों में तेरे समान कोई नहीं है।
8 ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.
८वे मूर्ख और निर्बुद्धि है; मूर्तियों से क्या शिक्षा? वे तो काठ ही हैं!
9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.
९पत्तर बनाई हुई चाँदी तर्शीश से लाई जाती है, और ऊफाज से सोना। वे कारीगर और सुनार के हाथों की कारीगरी हैं; उनके पहरावे नीले और बैंगनी रंग के वस्त्र हैं; उनमें जो कुछ है वह निपुण कारीगरों की कारीगरी ही है।
10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.
१०परन्तु यहोवा वास्तव में परमेश्वर है; जीवित परमेश्वर और सदा का राजा वही है। उसके प्रकोप से पृथ्वी काँपती है, और जाति-जाति के लोग उसके क्रोध को सह नहीं सकते।
11 “ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’”
११तुम उनसे यह कहना, “ये देवता जिन्होंने आकाश और पृथ्वी को नहीं बनाया वे पृथ्वी के ऊपर से और आकाश के नीचे से नष्ट हो जाएँगे।”
12 ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.
१२उसी ने पृथ्वी को अपनी सामर्थ्य से बनाया, उसने जगत को अपनी बुद्धि से स्थिर किया, और आकाश को अपनी प्रवीणता से तान दिया है।
13 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.
१३जब वह बोलता है तब आकाश में जल का बड़ा शब्द होता है, और पृथ्वी की छोर से वह कुहरे को उठाता है। वह वर्षा के लिये बिजली चमकाता, और अपने भण्डार में से पवन चलाता है।
14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.
१४सब मनुष्य मूर्ख और ज्ञानरहित हैं; अपनी खोदी हुई मूरतों के कारण सब सुनारों की आशा टूटती है; क्योंकि उनकी ढाली हुई मूरतें झूठी हैं, और उनमें साँस ही नहीं है।
15 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.
१५वे व्यर्थ और ठट्ठे ही के योग्य हैं; जब उनके दण्ड का समय आएगा तब वे नाश हो जाएँगीं।
16 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.
१६परन्तु याकूब का निज भाग उनके समान नहीं है, क्योंकि वह तो सब का सृजनहार है, और इस्राएल उसके निज भाग का गोत्र है; सेनाओं का यहोवा उसका नाम है।
17 ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.
१७हे घेरे हुए नगर की रहनेवाली, अपनी गठरी भूमि पर से उठा!
18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”
१८क्योंकि यहोवा यह कहता है, “मैं अब की बार इस देश के रहनेवालों को मानो गोफन में रखकर फेंक दूँगा, और उन्हें ऐसे-ऐसे संकट में डालूँगा कि उनकी समझ में भी नहीं आएगा।”
19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.
१९मुझ पर हाय! मेरा घाव चंगा होने का नहीं। फिर मैंने सोचा, “यह तो रोग ही है, इसलिए मुझ को इसे सहना चाहिये।”
20 ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.
२०मेरा तम्बू लूटा गया, और सब रस्सियाँ टूट गई हैं; मेरे बच्चे मेरे पास से चले गए, और नहीं हैं; अब कोई नहीं रहा जो मेरे तम्बू को ताने और मेरी कनातें खड़ी करे।
21 ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.
२१क्योंकि चरवाहे पशु सरीखे हैं, और वे यहोवा को नहीं पुकारते; इसी कारण वे बुद्धि से नहीं चलते, और उनकी सब भेड़ें तितर-बितर हो गई हैं।
22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
२२सुन, एक शब्द सुनाई देता है! देख, वह आ रहा है! उत्तर दिशा से बड़ा हुल्लड़ मच रहा है ताकि यहूदा के नगरों को उजाड़ कर गीदड़ों का स्थान बना दे।
23 ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.
२३हे यहोवा, मैं जान गया हूँ, कि मनुष्य का मार्ग उसके वश में नहीं है, मनुष्य चलता तो है, परन्तु उसके डग उसके अधीन नहीं हैं।
24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.
२४हे यहोवा, मेरी ताड़ना कर, पर न्याय से; क्रोध में आकर नहीं, कहीं ऐसा न हो कि मैं नाश हो जाऊँ।
25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.
२५जो जाति तुझे नहीं जानती, और जो तुझ से प्रार्थना नहीं करते, उन्हीं पर अपनी जलजलाहट उण्डेल; क्योंकि उन्होंने याकूब को निगल लिया, वरन्, उसे खाकर अन्त कर दिया है, और उसके निवास-स्थान को उजाड़ दिया है।