< ಯೆರೆಮೀಯನು 14 >
1 ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:
乾旱の事につきてヱレミヤにのぞみしヱホバの言は左のごとし
2 “ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.
ユダは悲むその門は傾き地にたふれて哭くヱルサレムの咷は上る
3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
その侯伯等は僕をつかはして水を汲しむ彼ら井にいたれども水を見ず空き器をもちて歸り恥かつ憂へてその首をおほふ
4 ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
地に雨ふらずして土燥裂たるにより農夫は恥て首を掩ふ
5 ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ.
また野にある麀は子をうみて之を棄つ草なければなり
6 ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”
野の驢馬は童山のうへにたちて山犬のごとく喘ぎ草なきによりて目眩む
7 ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.
ヱホバよ我儕の罪われらを訟へて證をなすとも願くは汝の名の爲に事をなし給へ我儕の違背はおほいなり我儕汝に罪を犯したり
8 ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
イスラエルの企望なる者その艱るときに救ひたまふ者よ汝いかなれば此地に於て他邦人のごとくし一夜寄宿の旅客のごとくしたまふや
9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.
汝いかなれば呆てをる人のごとくし救をなすこと能はざる勇士のごとくしたまふやヱホバよ汝は我らの間にいます我儕は汝の名をもて稱へらるる者なり我らを棄たまふ勿れ
10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”
ヱホバこの民にかくいひたまへり彼らかく好んでさまよひ其足を禁めざればヱホバ彼らを悦ばずいまその愆をおぼえ其罪を罰すべし
11 ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.
ヱホバまた我にいひたまひけるは汝この民のために恩をいのる勿れ
12 ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.
彼ら斷食するとも我その呼龥をきかず燔祭と素祭を献るとも我これをうけず却てわれ劍と饑饉と疫病をもて彼らを滅すべし
13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.
われいひけるは嗚呼主ヱホバよみよ預言者たちはこの民にむかひ汝ら劍を見ざるべし饑饉は汝らにきたらじわれ此處に鞏固なる平安を汝らにあたへんといへり
14 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ヱホバ我にいひたまひけるは預言者等は我名をもて詭を預言せりわれ之を遣さず之に命ぜずまた之にいはず彼らは虛誕の默示と卜筮と虛きことと己の心の詐を汝らに預言せり
15 ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
この故にかの吾が遣さざるに我名をもて預言して劍と饑饉はこの地にきたらじといへる預言者等につきてヱホバかくいふこの預言者等は劍と饑饉に滅さるべし
16 ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.
また彼等の預言をうけし民は饑饉と劍によりてヱルサレムの街に擲棄られんこれを葬る者なかるべし彼等とその妻および其子その女みな然りそはわれ彼らの惡をその上に斟げばなり
17 “ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.
汝この言を彼らに語るべしわが目は夜も晝もたえず涙を流さんそは我民の童女大なる滅と重き傷によりて亡さるればなり
18 ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’”
われ出て畑にゆくに劍に死る者あり我邑にいるに饑饉に艱むものあり預言者も祭司もみなその地にさまよひて知ところなし
19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.
汝はユダを悉くすてたまふや汝の心はシオンをきらふや汝いかなれば我儕を撃て愈しめざるか我ら平安を望めども善ことあらず又醫さるる時を望むに却て驚懼あり
20 ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.
ヱホバよ我らはおのれの惡と先祖の愆を知るわれら汝に罪を犯したり
21 ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.
汝の名のために我らを棄たまふ勿れ汝の榮の位を辱めたまふ勿れ汝のわれらに立し契約をおぼえて毀りたまふなかれ
22 ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.
異邦の虛き物の中に雨を降せうるものあるや天みづから白雨をくだすをえんや我らの神ヱホバ汝これを爲したまふにあらずや我ら汝を望むそは汝すべて此等を悉く作りたまひたればなり