< ಯೆರೆಮೀಯನು 17 >

1 “ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.
The sin of Judah is recorded with a pen of iron, and with the sharp point of a jewel it is cut on their hearts of stone, and on the horns of their altars for a sign to them:
2 ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.
Their altars and their wood pillars under every branching tree, on the high hills and the mountains in the field.
3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
I will give your wealth and all your stores to be taken away in war without a price, because of your sins in every part of your land.
4 ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”
And your hand will have to let go your heritage which I gave you; and I will make you a servant to your haters in a land which is strange to you: for you have put my wrath on fire with a flame which will go on burning for ever.
5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.
This is what the Lord has said: Cursed is the man who puts his faith in man, and makes flesh his arm, and whose heart is turned away from the Lord.
6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
For he will be like the brushwood in the upland, and will not see when good comes; but his living-place will be in the dry places in the waste land, in a salt and unpeopled land.
7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.
A blessing is on the man who puts his faith in the Lord, and whose hope the Lord is.
8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”
For he will be like a tree planted by the waters, pushing out its roots by the stream; he will have no fear when the heat comes, but his leaf will be green; in a dry year he will have no care, and will go on giving fruit.
9 ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?
The heart is a twisted thing, not to be searched out by man: who is able to have knowledge of it?
10 “ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”
I the Lord am the searcher of the heart, the tester of the thoughts, so that I may give to every man the reward of his ways, in keeping with the fruit of his doings.
11 ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.
Like the partridge, getting eggs together but not producing young, is a man who gets wealth but not by right; before half his days are ended, it will go from him, and at his end he will be foolish.
12 ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
A seat of glory, placed on high from the first, is our holy place.
13 ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.
O Lord, the hope of Israel, all who give you up will be put to shame; those who go away from you will be cut off from the earth, because they have given up the Lord, the fountain of living waters.
14 ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.
Make me well, O Lord, and I will be well; be my saviour, and I will be safe: for you are my hope.
15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.
See, they say to me, Where is the word of the Lord? let it come now.
16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
As for me, I have not said; Let the day of trouble come to them quickly; and I have not been hoping for the death-giving day; you have knowledge of what came from my lips; it was open before you.
17 ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.
Be not a cause of fear to me: you are my safe place in the day of evil.
18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.
Let them be put to shame who are attacking me, but let me not be shamed; let them be overcome with fear, but let me not be overcome: send on them the day of evil, and put them to destruction twice over.
19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,
This is what the Lord has said to me: Go and take your place in the doorway of Benjamin, where the kings of Judah come in and by which they go out, and in all the doorways of Jerusalem;
20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
And say to them, Give ear to the word of the Lord, you kings of Judah, and all the people of Jerusalem who come in by these doors:
21 ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.
This is what the Lord has said: See to yourselves, that you take up no weight on the Sabbath day, or take it in through the doors of Jerusalem;
22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.
And take no weight out of your houses on the Sabbath day, or do any work, but keep the Sabbath day holy, as I gave orders to your fathers;
23 ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.
But they gave no attention and would not give ear, but they made their necks stiff so that they might not give ear and might not get teaching.
24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,
And it will be, that if with all care you give ear to me, says the Lord, and take no weight through the doorways of this town on the Sabbath day, but keep the Sabbath day holy and do no work in it;
25 ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.
Then through the doors of this town there will come kings and princes, seated on the seat of David, going in carriages and on horseback, they and their princes, and the men of Judah and the people of Jerusalem: and this town will keep its place for ever.
26 ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.
And they will come from the towns of Judah, and from the places round about Jerusalem, and from the land of Benjamin, and from the lowlands, and from the mountains, and from the South, with burned offerings and offerings of beasts and meal offerings and perfume and offerings of praise, to the house of the Lord.
27 ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’”
But if you do not give ear to me, to keep the Sabbath day holy, and to let no weight be lifted and taken through the doors of Jerusalem on the Sabbath day: then I will put a fire in its doorways, burning up the great houses of Jerusalem, and it will never be put out.

< ಯೆರೆಮೀಯನು 17 >