< ಯೆರೆಮೀಯನು 19 >

1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,
כֹּ֚ה אָמַ֣ר יְהוָ֔ה הָל֛וֹךְ וְקָנִ֥יתָ בַקְבֻּ֖ק יוֹצֵ֣ר חָ֑רֶשׂ וּמִזִּקְנֵ֣י הָעָ֔ם וּמִזִּקְנֵ֖י הַכֹּהֲנִֽים׃
2 ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
וְיָצָ֙אתָ֙ אֶל־גֵּ֣יא בֶן־הִנֹּ֔ם אֲשֶׁ֕ר פֶּ֖תַח שַׁ֣עַר החרסות וְקָרָ֣אתָ שָּׁ֔ם אֶת־הַדְּבָרִ֖ים אֲשֶׁר־אֲדַבֵּ֥ר אֵלֶֽיךָ׃
3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.
וְאָֽמַרְתָּ֙ שִׁמְע֣וּ דְבַר־יְהוָ֔ה מַלְכֵ֣י יְהוּדָ֔ה וְיֹשְׁבֵ֖י יְרֽוּשָׁלִָ֑ם כֹּֽה־אָמַר֩ יְהוָ֨ה צְבָא֜וֹת אֱלֹהֵ֣י יִשְׂרָאֵ֗ל הִנְנִ֨י מֵבִ֤יא רָעָה֙ עַל־הַמָּק֣וֹם הַזֶּ֔ה אֲשֶׁ֥ר כָּל־שֹׁמְעָ֖הּ תִּצַּ֥לְנָה אָזְנָֽיו׃
4 ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,
יַ֣עַן ׀ אֲשֶׁ֣ר עֲזָבֻ֗נִי וַֽיְנַכְּר֞וּ אֶת־הַמָּק֤וֹם הַזֶּה֙ וַיְקַטְּרוּ־בוֹ֙ לֵאלֹהִ֣ים אֲחֵרִ֔ים אֲשֶׁ֧ר לֹֽא־יְדָע֛וּם הֵ֥מָּה וַאֲבֽוֹתֵיהֶ֖ם וּמַלְכֵ֣י יְהוּדָ֑ה וּמָֽלְא֛וּ אֶת־הַמָּק֥וֹם הַזֶּ֖ה דַּ֥ם נְקִיִּֽם׃
5 ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
וּבָנ֞וּ אֶת־בָּמ֣וֹת הַבַּ֗עַל לִשְׂרֹ֧ף אֶת־בְּנֵיהֶ֛ם בָּאֵ֖שׁ עֹל֣וֹת לַבָּ֑עַל אֲשֶׁ֤ר לֹֽא־צִוִּ֙יתִי֙ וְלֹ֣א דִבַּ֔רְתִּי וְלֹ֥א עָלְתָ֖ה עַל־לִבִּֽי׃ פ
6 ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.
לָכֵ֞ן הִנֵּֽה־יָמִ֤ים בָּאִים֙ נְאֻם־יְהוָ֔ה וְלֹא־יִקָּרֵא֩ לַמָּק֨וֹם הַזֶּ֥ה ע֛וֹד הַתֹּ֖פֶת וְגֵ֣יא בֶן־הִנֹּ֑ם כִּ֖י אִם־גֵּ֥יא הַהֲרֵגָֽה׃
7 “‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.
וּ֠בַקֹּתִי אֶת־עֲצַ֨ת יְהוּדָ֤ה וִירוּשָׁלִַ֙ם֙ בַּמָּק֣וֹם הַזֶּ֔ה וְהִפַּלְתִּ֤ים בַּחֶ֙רֶב֙ לִפְנֵ֣י אֹֽיְבֵיהֶ֔ם וּבְיַ֖ד מְבַקְשֵׁ֣י נַפְשָׁ֑ם וְנָתַתִּ֤י אֶת־נִבְלָתָם֙ לְמַֽאֲכָ֔ל לְע֥וֹף הַשָּׁמַ֖יִם וּלְבֶהֱמַ֥ת הָאָֽרֶץ׃
8 ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
וְשַׂמְתִּי֙ אֶת־הָעִ֣יר הַזֹּ֔את לְשַׁמָּ֖ה וְלִשְׁרֵקָ֑ה כֹּ֚ל עֹבֵ֣ר עָלֶ֔יהָ יִשֹּׁ֥ם וְיִשְׁרֹ֖ק עַל־כָּל־מַכֹּתֶֽהָ׃
9 ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’
וְהַֽאֲכַלְתִּ֞ים אֶת־בְּשַׂ֣ר בְּנֵיהֶ֗ם וְאֵת֙ בְּשַׂ֣ר בְּנֹתֵיהֶ֔ם וְאִ֥ישׁ בְּשַׂר־רֵעֵ֖הוּ יֹאכֵ֑לוּ בְּמָצוֹר֙ וּבְמָצ֔וֹק אֲשֶׁ֨ר יָצִ֧יקוּ לָהֶ֛ם אֹיְבֵיהֶ֖ם וּמְבַקְשֵׁ֥י נַפְשָֽׁם׃
10 “ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು,
וְשָׁבַרְתָּ֖ הַבַּקְבֻּ֑ק לְעֵינֵי֙ הָֽאֲנָשִׁ֔ים הַהֹלְכִ֖ים אוֹתָֽךְ׃
11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.
וְאָמַרְתָּ֨ אֲלֵיהֶ֜ם כֹּה־אָמַ֣ר ׀ יְהוָ֣ה צְבָא֗וֹת כָּ֣כָה אֶשְׁבֹּ֞ר אֶת־הָעָ֤ם הַזֶּה֙ וְאֶת־הָעִ֣יר הַזֹּ֔את כַּאֲשֶׁ֤ר יִשְׁבֹּר֙ אֶת־כְּלִ֣י הַיּוֹצֵ֔ר אֲשֶׁ֛ר לֹֽא־יוּכַ֥ל לְהֵרָפֵ֖ה ע֑וֹד וּבְתֹ֣פֶת יִקְבְּר֔וּ מֵאֵ֥ין מָק֖וֹם לִקְבּֽוֹר׃
12 ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
כֵּֽן־אֶעֱשֶׂ֞ה לַמָּק֥וֹם הַזֶּ֛ה נְאֻם־יְהוָ֖ה וּלְיֽוֹשְׁבָ֑יו וְלָתֵ֛ת אֶת־הָעִ֥יר הַזֹּ֖את כְּתֹֽפֶת׃
13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’”
וְהָי֞וּ בָּתֵּ֣י יְרוּשָׁלִַ֗ם וּבָתֵּי֙ מַלְכֵ֣י יְהוּדָ֔ה כִּמְק֥וֹם הַתֹּ֖פֶת הַטְּמֵאִ֑ים לְכֹ֣ל הַבָּתִּ֗ים אֲשֶׁ֨ר קִטְּר֜וּ עַל־גַּגֹּֽתֵיהֶם֙ לְכֹל֙ צְבָ֣א הַשָּׁמַ֔יִם וְהַסֵּ֥ךְ נְסָכִ֖ים לֵאלֹהִ֥ים אֲחֵרִֽים׃ פ
14 ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ:
וַיָּבֹ֤א יִרְמְיָ֙הוּ֙ מֵֽהַתֹּ֔פֶת אֲשֶׁ֨ר שְׁלָח֧וֹ יְהוָ֛ה שָׁ֖ם לְהִנָּבֵ֑א וַֽיַּעֲמֹד֙ בַּחֲצַ֣ר בֵּית־יְהוָ֔ה וַיֹּ֖אמֶר אֶל־כָּל־הָעָֽם׃ ס
15 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’”
כֹּֽה־אָמַ֞ר יְהוָ֤ה צְבָאוֹת֙ אֱלֹהֵ֣י יִשְׂרָאֵ֔ל הִנְנִ֨י מבי אֶל־הָעִ֤יר הַזֹּאת֙ וְעַל־כָּל־עָרֶ֔יהָ אֵ֚ת כָּל־הָ֣רָעָ֔ה אֲשֶׁ֥ר דִּבַּ֖רְתִּי עָלֶ֑יהָ כִּ֤י הִקְשׁוּ֙ אֶת־עָרְפָּ֔ם לְבִלְתִּ֖י שְׁמ֥וֹעַ אֶת־דְּבָרָֽי׃

< ಯೆರೆಮೀಯನು 19 >