< ಯೆರೆಮೀಯನು 2 >

1 ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:
וַיְהִ֥י דְבַר־יְהוָ֖ה אֵלַ֥י לֵאמֹֽר׃
2 “ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.
הָלֹ֡ךְ וְקָֽרָאתָ֩ בְאָזְנֵי֙ יְרוּשָׁלַ֜͏ִם לֵאמֹ֗ר כֹּ֚ה אָמַ֣ר יְהוָ֔ה זָכַ֤רְתִּי לָךְ֙ חֶ֣סֶד נְעוּרַ֔יִךְ אַהֲבַ֖ת כְּלוּלֹתָ֑יִךְ לֶכְתֵּ֤ךְ אַחֲרַי֙ בַּמִּדְבָּ֔ר בְּאֶ֖רֶץ לֹ֥א זְרוּעָֽה׃
3 ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’” ಎಂದು ಯೆಹೋವ ದೇವರು ಹೇಳುತ್ತಾರೆ.
קֹ֤דֶשׁ יִשְׂרָאֵל֙ לַיהוָ֔ה רֵאשִׁ֖ית תְּבוּאָתֹ֑ה כָּל־אֹכְלָ֣יו יֶאְשָׁ֔מוּ רָעָ֛ה תָּבֹ֥א אֲלֵיהֶ֖ם נְאֻם־יְהוָֽה׃ פ
4 ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.
שִׁמְע֥וּ דְבַר־יְהוָ֖ה בֵּ֣ית יַעֲקֹ֑ב וְכָֽל־מִשְׁפְּחֹ֖ות בֵּ֥ית יִשְׂרָאֵֽל׃
5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?
כֹּ֣ה ׀ אָמַ֣ר יְהוָ֗ה מַה־מָּצְא֨וּ אֲבֹותֵיכֶ֥ם בִּי֙ עָ֔וֶל כִּ֥י רָחֲק֖וּ מֵעָלָ֑י וַיֵּֽלְכ֛וּ אַחֲרֵ֥י הַהֶ֖בֶל וַיֶּהְבָּֽלוּ׃
6 ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.
וְלֹ֣א אָמְר֔וּ אַיֵּ֣ה יְהוָ֔ה הַמַּעֲלֶ֥ה אֹתָ֖נוּ מֵאֶ֣רֶץ מִצְרָ֑יִם הַמֹּולִ֨יךְ אֹתָ֜נוּ בַּמִּדְבָּ֗ר בְּאֶ֨רֶץ עֲרָבָ֤ה וְשׁוּחָה֙ בְּאֶ֙רֶץ֙ צִיָּ֣ה וְצַלְמָ֔וֶת בְּאֶ֗רֶץ לֹֽא־עָ֤בַר בָּהּ֙ אִ֔ישׁ וְלֹֽא־יָשַׁ֥ב אָדָ֖ם שָֽׁם׃
7 ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.
וָאָבִ֤יא אֶתְכֶם֙ אֶל־אֶ֣רֶץ הַכַּרְמֶ֔ל לֶאֱכֹ֥ל פִּרְיָ֖הּ וְטוּבָ֑הּ וַתָּבֹ֙אוּ֙ וַתְּטַמְּא֣וּ אֶת־אַרְצִ֔י וְנַחֲלָתִ֥י שַׂמְתֶּ֖ם לְתֹועֵבָֽה׃
8 ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.
הַכֹּהֲנִ֗ים לֹ֤א אָֽמְרוּ֙ אַיֵּ֣ה יְהוָ֔ה וְתֹפְשֵׂ֤י הַתֹּורָה֙ לֹ֣א יְדָע֔וּנִי וְהָרֹעִ֖ים פָּ֣שְׁעוּ בִ֑י וְהַנְּבִיאִים֙ נִבְּא֣וּ בַבַּ֔עַל וְאַחֲרֵ֥י לֹֽא־יֹועִ֖לוּ הָלָֽכוּ׃
9 “ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
לָכֵ֗ן עֹ֛ד אָרִ֥יב אִתְּכֶ֖ם נְאֻם־יְהוָ֑ה וְאֶת־בְּנֵ֥י בְנֵיכֶ֖ם אָרִֽיב׃
10 ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. ಅಂಥದ್ದು ಉಂಟೋ ಎಂದು ನೋಡಿರಿ.
כִּ֣י עִבְר֞וּ אִיֵּ֤י כִתִּיִּים֙ וּרְא֔וּ וְקֵדָ֛ר שִׁלְח֥וּ וְהִֽתְבֹּונְנ֖וּ מְאֹ֑ד וּרְא֕וּ הֵ֥ן הָיְתָ֖ה כָּזֹֽאת׃
11 ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
הַהֵימִ֥יר גֹּוי֙ אֱלֹהִ֔ים וְהֵ֖מָּה לֹ֣א אֱלֹהִ֑ים וְעַמִּ֛י הֵמִ֥יר כְּבֹודֹ֖ו בְּלֹ֥וא יֹועִֽיל׃
12 ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ.
שֹׁ֥מּוּ שָׁמַ֖יִם עַל־זֹ֑את וְשַׂעֲר֛וּ חָרְב֥וּ מְאֹ֖ד נְאֻם־יְהוָֽה׃
13 “ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.
כִּֽי־שְׁתַּ֥יִם רָעֹ֖ות עָשָׂ֣ה עַמִּ֑י אֹתִ֨י עָזְב֜וּ מְקֹ֣ור ׀ מַ֣יִם חַיִּ֗ים לַחְצֹ֤ב לָהֶם֙ בֹּארֹ֔ות בֹּארֹת֙ נִשְׁבָּרִ֔ים אֲשֶׁ֥ר לֹא־יָכִ֖לוּ הַמָּֽיִם׃
14 ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?
הַעֶ֙בֶד֙ יִשְׂרָאֵ֔ל אִם־יְלִ֥יד בַּ֖יִת ה֑וּא מַדּ֖וּעַ הָיָ֥ה לָבַֽז׃
15 ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
עָלָיו֙ יִשְׁאֲג֣וּ כְפִרִ֔ים נָתְנ֖וּ קֹולָ֑ם וַיָּשִׁ֤יתוּ אַרְצֹו֙ לְשַׁמָּ֔ה עָרָ֥יו נִצְּתָה (נִצְּת֖וּ) מִבְּלִ֥י יֹשֵֽׁב׃
16 ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
גַּם־בְּנֵי־נֹ֖ף וְתַחְפְּנֵס (וְתַחְפַּנְחֵ֑ס) יִרְע֖וּךְ קָדְקֹֽד׃
17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?
הֲלֹוא־זֹ֖את תַּעֲשֶׂה־לָּ֑ךְ עָזְבֵךְ֙ אֶת־יְהוָ֣ה אֱלֹהַ֔יִךְ בְּעֵ֖ת מֹולִיכֵ֥ךְ בַּדָּֽרֶךְ׃
18 ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?
וְעַתָּ֗ה מַה־לָּךְ֙ לְדֶ֣רֶךְ מִצְרַ֔יִם לִשְׁתֹּ֖ות מֵ֣י שִׁחֹ֑ור וּמַה־לָּךְ֙ לְדֶ֣רֶךְ אַשּׁ֔וּר לִשְׁתֹּ֖ות מֵ֥י נָהָֽר׃
19 ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
תְּיַסְּרֵ֣ךְ רָעָתֵ֗ךְ וּמְשֻֽׁבֹותַ֙יִךְ֙ תֹּוכִחֻ֔ךְ וּדְעִ֤י וּרְאִי֙ כִּי־רַ֣ע וָמָ֔ר עָזְבֵ֖ךְ אֶת־יְהוָ֣ה אֱלֹהָ֑יִךְ וְלֹ֤א פַחְדָּתִי֙ אֵלַ֔יִךְ נְאֻם־אֲדֹנָ֥י יְהוִ֖ה צְבָאֹֽות׃
20 “ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.
כִּ֣י מֵעֹולָ֞ם שָׁבַ֣רְתִּי עֻלֵּ֗ךְ נִתַּ֙קְתִּי֙ מֹוסְרֹתַ֔יִךְ וַתֹּאמְרִ֖י לֹ֣א אֶעֱבֹד (אֶעֱבֹ֑ור) כִּ֣י עַֽל־כָּל־גִּבְעָ֞ה גְּבֹהָ֗ה וְתַ֙חַת֙ כָּל־עֵ֣ץ רַעֲנָ֔ן אַ֖תְּ צֹעָ֥ה זֹנָֽה׃
21 ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?
וְאָֽנֹכִי֙ נְטַעְתִּ֣יךְ שֹׂרֵ֔ק כֻּלֹּ֖ה זֶ֣רַע אֱמֶ֑ת וְאֵיךְ֙ נֶהְפַּ֣כְתְּ לִ֔י סוּרֵ֖י הַגֶּ֥פֶן נָכְרִיָּֽה׃
22 ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
כִּ֤י אִם־תְּכַבְּסִי֙ בַּנֶּ֔תֶר וְתַרְבִּי־לָ֖ךְ בֹּרִ֑ית נִכְתָּ֤ם עֲוֹנֵךְ֙ לְפָנַ֔י נְאֻ֖ם אֲדֹנָ֥י יְהוִֽה׃
23 “ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.
אֵ֣יךְ תֹּאמְרִ֞י לֹ֣א נִטְמֵ֗אתִי אַחֲרֵ֤י הַבְּעָלִים֙ לֹ֣א הָלַ֔כְתִּי רְאִ֤י דַרְכֵּךְ֙ בַּגַּ֔יְא דְּעִ֖י מֶ֣ה עָשִׂ֑ית בִּכְרָ֥ה קַלָּ֖ה מְשָׂרֶ֥כֶת דְּרָכֶֽיהָ׃
24 ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು.
פֶּ֣רֶה ׀ לִמֻּ֣ד מִדְבָּ֗ר בְּאַוַּ֤ת נַפשֹׁו (נַפְשָׁהּ֙) שָׁאֲפָ֣ה ר֔וּחַ תַּאֲנָתָ֖הּ מִ֣י יְשִׁיבֶ֑נָּה כָּל־מְבַקְשֶׁ֙יהָ֙ לֹ֣א יִיעָ֔פוּ בְּחָדְשָׁ֖הּ יִמְצָאֽוּנְהָ׃
25 ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.
מִנְעִ֤י רַגְלֵךְ֙ מִיָּחֵ֔ף וּגֹורֹנֵךְ (וּגְרֹונֵ֖ךְ) מִצִּמְאָ֑ה וַתֹּאמְרִ֣י נֹואָ֔שׁ לֹ֕וא כִּֽי־אָהַ֥בְתִּי זָרִ֖ים וְאַחֲרֵיהֶ֥ם אֵלֵֽךְ׃
26 “ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.
כְּבֹ֤שֶׁת גַּנָּב֙ כִּ֣י יִמָּצֵ֔א כֵּ֥ן הֹבִ֖ישׁוּ בֵּ֣ית יִשְׂרָאֵ֑ל הֵ֤מָּה מַלְכֵיהֶם֙ שָֽׂרֵיהֶ֔ם וְכֹהֲנֵיהֶ֖ם וּנְבִיאֵיהֶֽם׃
27 ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.
אֹמְרִ֨ים לָעֵ֜ץ אָ֣בִי אַ֗תָּה וְלָאֶ֙בֶן֙ אַ֣תְּ יְלִדְתִּני (יְלִדְתָּ֔נוּ) כִּֽי־פָנ֥וּ אֵלַ֛י עֹ֖רֶף וְלֹ֣א פָנִ֑ים וּבְעֵ֤ת רָֽעָתָם֙ יֹֽאמְר֔וּ ק֖וּמָה וְהֹושִׁיעֵֽנוּ׃
28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
וְאַיֵּ֤ה אֱלֹהֶ֙יךָ֙ אֲשֶׁ֣ר עָשִׂ֣יתָ לָּ֔ךְ יָק֕וּמוּ אִם־יֹושִׁיע֖וּךָ בְּעֵ֣ת רָעָתֶ֑ךָ כִּ֚י מִסְפַּ֣ר עָרֶ֔יךָ הָי֥וּ אֱלֹהֶ֖יךָ יְהוּדָֽה׃ ס
29 “ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.
לָ֥מָּה תָרִ֖יבוּ אֵלָ֑י כֻּלְּכֶ֛ם פְּשַׁעְתֶּ֥ם בִּ֖י נְאֻם־יְהוָֽה׃
30 “ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
לַשָּׁוְא֙ הִכֵּ֣יתִי אֶת־בְּנֵיכֶ֔ם מוּסָ֖ר לֹ֣א לָקָ֑חוּ אָכְלָ֧ה חַרְבְּכֶ֛ם נְבִֽיאֵיכֶ֖ם כְּאַרְיֵ֥ה מַשְׁחִֽית׃
31 “ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?
הַדֹּ֗ור אַתֶּם֙ רְא֣וּ דְבַר־יְהוָ֔ה הֲמִדְבָּ֤ר הָיִ֙יתִי֙ לְיִשְׂרָאֵ֔ל אִ֛ם אֶ֥רֶץ מַאְפֵּ֖לְיָ֑ה מַדּ֜וּעַ אָמְר֤וּ עַמִּי֙ רַ֔דְנוּ לֹֽוא־נָבֹ֥וא עֹ֖וד אֵלֶֽיךָ׃
32 ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
הֲתִשְׁכַּ֤ח בְּתוּלָה֙ עֶדְיָ֔הּ כַּלָּ֖ה קִשֻּׁרֶ֑יהָ וְעַמִּ֣י שְׁכֵח֔וּנִי יָמִ֖ים אֵ֥ין מִסְפָּֽר׃
33 ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
מַה־תֵּיטִ֥בִי דַּרְכֵּ֖ךְ לְבַקֵּ֣שׁ אַהֲבָ֑ה לָכֵן֙ גַּ֣ם אֶת־הָרָעֹ֔ות לִמַּדְתִּי (לִמַּ֖דְתְּ) אֶת־דְּרָכָֽיִךְ׃
34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.
גַּ֤ם בִּכְנָפַ֙יִךְ֙ נִמְצְא֔וּ דַּ֛ם נַפְשֹׁ֥ות אֶבְיֹונִ֖ים נְקִיִּ֑ים לֹֽא־בַמַּחְתֶּ֥רֶת מְצָאתִ֖ים כִּ֥י עַל־כָּל־אֵֽלֶּה׃
35 ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
וַתֹּֽאמְרִי֙ כִּ֣י נִקֵּ֔יתִי אַ֛ךְ שָׁ֥ב אַפֹּ֖ו מִמֶּ֑נִּי הִנְנִי֙ נִשְׁפָּ֣ט אֹותָ֔ךְ עַל־אָמְרֵ֖ךְ לֹ֥א חָטָֽאתִי׃
36 ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.
מַה־תֵּזְלִ֥י מְאֹ֖ד לְשַׁנֹּ֣ות אֶת־דַּרְכֵּ֑ךְ גַּ֤ם מִמִּצְרַ֙יִם֙ תֵּבֹ֔ושִׁי כַּאֲשֶׁר־בֹּ֖שְׁתְּ מֵאַשּֽׁוּר׃
37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”
גַּ֣ם מֵאֵ֥ת זֶה֙ תֵּֽצְאִ֔י וְיָדַ֖יִךְ עַל־רֹאשֵׁ֑ךְ כִּֽי־מָאַ֤ס יְהֹוָה֙ בְּמִבְטַחַ֔יִךְ וְלֹ֥א תַצְלִ֖יחִי לָהֶֽם׃

< ಯೆರೆಮೀಯನು 2 >