< ಯೆರೆಮೀಯನು 21 >

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,
Padşah Sidqiya Malkiya oğlu Paşxuru və Maaseya oğlu Sefanyanı Yeremyanın yanına göndərəndə Rəbdən Yeremyaya söz nazil oldu. Paşxur ilə Sefanya belə demişdi:
2 “ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.
«Gəl bizim barəmizdə Rəbdən soruş. Çünki Babil padşahı Navuxodonosor bizə qarşı müharibə edir. Bəlkə Rəbb keçmişdə etdiyi möcüzələrə bənzər bir şey edər və Navuxodonosor bizdən əl çəkər?»
3 ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ:
O zaman Yeremya onlara dedi: «Sidqiyaya söyləyin ki,
4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.
İsrailin Allahı Rəbb belə deyir: “Divarların o tərəfində sizi mühasirəyə alan Babil padşahı və Xaldeylilərlə müharibədə istifadə etdiyiniz silahları özünüzə qarşı çevirəcəyəm. Silahlarınızı bu şəhərin ortasına toplayacağam.
5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
Mən sizə qarşı əl qaldıracağam, güclü qolumla, qızğınlıq, qəzəb və böyük hiddətlə sizinlə vuruşacağam.
6 ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು.
Bu şəhərdə yaşayan insanı da, heyvanı da məhv edəcəyəm. Onlar şiddətli vəbadan öləcək”.
7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’
Rəbb belə bəyan edir: “Bundan sonra Yəhuda padşahı Sidqiyanı və əyanlarını, həmçinin bu şəhərdə vəbadan, qılıncdan və aclıqdan sağ qalanları Babil padşahı Navuxodonosora və canlarını almaq istəyən düşmənlərinə təslim edəcəyəm. O onları qılıncdan keçirəcək, onlara nə rəhm, nə şəfqət, nə də mərhəmət edəcək”.
8 “ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
Bu xalqa söylə ki, Rəbb belə deyir: “Budur, həyat yolunu və ölüm yolunu önünüzə qoyuram.
9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
Bu şəhərdə qalan qılınc, aclıq və vəbadan öləcək. Lakin kim bayıra çıxıb sizi mühasirəyə alan Xaldeylilərə təslim olsa, sağ qalacaq, heç olmasa öz canını qurtaracaq.
10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’
Ona görə ki bu şəhərə yaxşılıq deyil, pislik etməyə niyyət etdim” Rəbb belə bəyan edir. “Bura Babil padşahına təslim ediləcək, o da buranı yandırıb yox edəcək”.
11 “ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ,
Yəhuda padşahının ailəsinə söylə ki, Rəbbin sözünü eşidin.
12 ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.
Ey Davud nəsli, Rəbb belə deyir: “Hər səhər ədalətlə rəftar edin, Məzlumu zalımın əlindən qurtarın. Yoxsa pis əməllərinizə görə Qəzəbim od kimi çıxıb yandıracaq, Onu söndürən olmayacaq”.
13 ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
Rəbb bəyan edir: “Mən sənə qarşıyam, Ey vadinin üstündəki Yaylada olan qayada oturan Yerusəlim!” Siz deyirsiniz: “Üstümüzə kim gələr? Məskənlərimizə kim girər?”
14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’”
Rəbb bəyan edir: “Mən sizi əməllərinizin Bəhrəsinə görə cəzalandıracağam. Meşələrinə elə od vuracağam ki, Ətrafındakı hər şeyi yandırıb-yaxacaq”».

< ಯೆರೆಮೀಯನು 21 >