< ಯೆರೆಮೀಯನು 22 >

1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:
כֹּה אָמַר יְהֹוָה רֵד בֵּֽית־מֶלֶךְ יְהוּדָה וְדִבַּרְתָּ שָׁם אֶת־הַדָּבָר הַזֶּֽה׃
2 ‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ.
וְאָֽמַרְתָּ שְׁמַע דְּבַר־יְהֹוָה מֶלֶךְ יְהוּדָה הַיֹּשֵׁב עַל־כִּסֵּא דָוִד אַתָּה וַעֲבָדֶיךָ וְעַמְּךָ הַבָּאִים בַּשְּׁעָרִים הָאֵֽלֶּה׃
3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.
כֹּה ׀ אָמַר יְהֹוָה עֲשׂוּ מִשְׁפָּט וּצְדָקָה וְהַצִּילוּ גָזוּל מִיַּד עָשׁוֹק וְגֵר יָתוֹם וְאַלְמָנָה אַל־תֹּנוּ אַל־תַּחְמֹסוּ וְדָם נָקִי אַֽל־תִּשְׁפְּכוּ בַּמָּקוֹם הַזֶּֽה׃
4 ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ, ಆಗ ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವರೂ, ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡುವ ಅರಸರು ತಮ್ಮ ಸೇವಕರ ಮತ್ತು ತಮ್ಮ ಜನರಸಹಿತವಾಗಿ ಈ ಅರಮನೆಯ ಬಾಗಿಲುಗಳಿಂದ ಪ್ರವೇಶಿಸಿದರು.
כִּי אִם־עָשׂוֹ תַּעֲשׂוּ אֶת־הַדָּבָר הַזֶּה וּבָאוּ בְשַׁעֲרֵי הַבַּיִת הַזֶּה מְלָכִים יֹשְׁבִים לְדָוִד עַל־כִּסְאוֹ רֹֽכְבִים בָּרֶכֶב וּבַסּוּסִים הוּא וַעֲבָדָו וְעַמּֽוֹ׃
5 ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’”
וְאִם לֹא תִשְׁמְעוּ אֶת־הַדְּבָרִים הָאֵלֶּה בִּי נִשְׁבַּעְתִּי נְאֻם־יְהֹוָה כִּֽי־לְחׇרְבָּה יִֽהְיֶה הַבַּיִת הַזֶּֽה׃
6 ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.
כִּי־כֹה ׀ אָמַר יְהֹוָה עַל־בֵּית מֶלֶךְ יְהוּדָה גִּלְעָד אַתָּה לִי רֹאשׁ הַלְּבָנוֹן אִם־לֹא אֲשִֽׁיתְךָ מִדְבָּר עָרִים לֹא (נושבה) [נוֹשָֽׁבוּ]׃
7 ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
וְקִדַּשְׁתִּי עָלֶיךָ מַשְׁחִתִים אִישׁ וְכֵלָיו וְכָֽרְתוּ מִבְחַר אֲרָזֶיךָ וְהִפִּילוּ עַל־הָאֵֽשׁ׃
8 “ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.
וְעָֽבְרוּ גּוֹיִם רַבִּים עַל הָעִיר הַזֹּאת וְאָֽמְרוּ אִישׁ אֶל־רֵעֵהוּ עַל־מֶה עָשָׂה יְהֹוָה כָּכָה לָעִיר הַגְּדוֹלָה הַזֹּֽאת׃
9 ‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”
וְאָמְרוּ עַל אֲשֶׁר עָזְבוּ אֶת־בְּרִית יְהֹוָה אֱלֹהֵיהֶם וַיִּֽשְׁתַּחֲווּ לֵאלֹהִים אֲחֵרִים וַיַּעַבְדֽוּם׃
10 ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.
אַל־תִּבְכּוּ לְמֵת וְאַל־תָּנֻדוּ לוֹ בְּכוּ בָכוֹ לַהֹלֵךְ כִּי לֹא יָשׁוּב עוֹד וְרָאָה אֶת־אֶרֶץ מוֹלַדְתּֽוֹ׃
11 ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.
כִּי כֹה אָֽמַר־יְהֹוָה אֶל־שַׁלֻּם בֶּן־יֹאשִׁיָּהוּ מֶלֶךְ יְהוּדָה הַמֹּלֵךְ תַּחַת יֹאשִׁיָּהוּ אָבִיו אֲשֶׁר יָצָא מִן־הַמָּקוֹם הַזֶּה לֹא־יָשׁוּב שָׁם עֽוֹד׃
12 ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”
כִּי בִּמְקוֹם אֲשֶׁר־הִגְלוּ אֹתוֹ שָׁם יָמוּת וְאֶת־הָאָרֶץ הַזֹּאת לֹֽא־יִרְאֶה עֽוֹד׃
13 “ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!
הוֹי בֹּנֶה בֵיתוֹ בְּֽלֹא־צֶדֶק וַעֲלִיּוֹתָיו בְּלֹא מִשְׁפָּט בְּרֵעֵהוּ יַעֲבֹד חִנָּם וּפֹעֲלוֹ לֹא יִתֶּן־לֽוֹ׃
14 ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ!
הָאֹמֵר אֶבְנֶה־לִּי בֵּית מִדּוֹת וַעֲלִיּוֹת מְרֻוָּחִים וְקָרַֽע לוֹ חַלּוֹנָי וְסָפוּן בָּאָרֶז וּמָשׁוֹחַ בַּשָּׁשַֽׁר׃
15 “ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?
הֲתִֽמְלֹךְ כִּי אַתָּה מְתַחֲרֶה בָאָרֶז אָבִיךָ הֲלוֹא אָכַל וְשָׁתָה וְעָשָׂה מִשְׁפָּט וּצְדָקָה אָז טוֹב לֽוֹ׃
16 ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.
דָּן דִּין־עָנִי וְאֶבְיוֹן אָז טוֹב הֲלוֹא־הִיא הַדַּעַת אֹתִי נְאֻם־יְהֹוָֽה׃
17 “ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”
כִּי אֵין עֵינֶיךָ וְלִבְּךָ כִּי אִם־עַל־בִּצְעֶךָ וְעַל דַּֽם־הַנָּקִי לִשְׁפּוֹךְ וְעַל־הָעֹשֶׁק וְעַל־הַמְּרוּצָה לַעֲשֽׂוֹת׃
18 ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.
לָכֵן כֹּה־אָמַר יְהֹוָה אֶל־יְהוֹיָקִים בֶּן־יֹאשִׁיָּהוּ מֶלֶךְ יְהוּדָה לֹא־יִסְפְּדוּ לוֹ הוֹי אָחִי וְהוֹי אָחוֹת לֹא־יִסְפְּדוּ לוֹ הוֹי אָדוֹן וְהוֹי הֹדֹֽה׃
19 ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”
קְבוּרַת חֲמוֹר יִקָּבֵר סָחוֹב וְהַשְׁלֵךְ מֵהָלְאָה לְשַׁעֲרֵי יְרוּשָׁלָֽ͏ִם׃
20 “ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.
עֲלִי הַלְּבָנוֹן וּֽצְעָקִי וּבַבָּשָׁן תְּנִי קוֹלֵךְ וְצַֽעֲקִי מֵעֲבָרִים כִּי נִשְׁבְּרוּ כׇּל־מְאַהֲבָֽיִךְ׃
21 ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.
דִּבַּרְתִּי אֵלַיִךְ בְּשַׁלְוֺתַיִךְ אָמַרְתְּ לֹא אֶשְׁמָע זֶה דַרְכֵּךְ מִנְּעוּרַיִךְ כִּי לֹא־שָׁמַעַתְּ בְּקוֹלִֽי׃
22 ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು.
כׇּל־רֹעַיִךְ תִּרְעֶה־רוּחַ וּֽמְאַהֲבַיִךְ בַּשְּׁבִי יֵלֵכוּ כִּי אָז תֵּבֹשִׁי וְנִכְלַמְתְּ מִכֹּל רָעָתֵֽךְ׃
23 ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.
(ישבתי) [יֹשַׁבְתְּ] בַּלְּבָנוֹן (מקננתי) [מְקֻנַּנְתְּ] בָּאֲרָזִים מַה־נֵּחַנְתְּ בְּבֹא־לָךְ חֲבָלִים חִיל כַּיֹּלֵדָֽה׃
24 “ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,
חַי־אָנִי נְאֻם־יְהֹוָה כִּי אִם־יִהְיֶה כׇּנְיָהוּ בֶן־יְהֽוֹיָקִים מֶלֶךְ יְהוּדָה חוֹתָם עַל־יַד יְמִינִי כִּי מִשָּׁם אֶתְּקֶֽנְךָּ׃
25 ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ.
וּנְתַתִּיךָ בְּיַד מְבַקְשֵׁי נַפְשֶׁךָ וּבְיַד אֲשֶׁר־אַתָּה יָגוֹר מִפְּנֵיהֶם וּבְיַד נְבוּכַדְרֶאצַּר מֶלֶךְ־בָּבֶל וּבְיַד הַכַּשְׂדִּֽים׃
26 ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ.
וְהֵטַלְתִּי אֹתְךָ וְאֶֽת־אִמְּךָ אֲשֶׁר יְלָדַתְךָ עַל הָאָרֶץ אַחֶרֶת אֲשֶׁר לֹֽא־יֻלַּדְתֶּם שָׁם וְשָׁם תָּמֽוּתוּ׃
27 ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ.
וְעַל־הָאָרֶץ אֲשֶׁר־הֵם מְנַשְּׂאִים אֶת־נַפְשָׁם לָשׁוּב שָׁם שָׁמָּה לֹא יָשֽׁוּבוּ׃
28 ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?
הַעֶצֶב נִבְזֶה נָפוּץ הָאִישׁ הַזֶּה כׇּנְיָהוּ אִם־כְּלִי אֵין חֵפֶץ בּוֹ מַדּוּעַ הֽוּטְלוּ הוּא וְזַרְעוֹ וְהֻשְׁלְכוּ עַל־הָאָרֶץ אֲשֶׁר לֹא־יָדָֽעוּ׃
29 ಓ ದೇಶವೇ, ದೇಶವೇ, ದೇಶವೇ, ಯೆಹೋವ ದೇವರ ವಾಕ್ಯವನ್ನು ಕೇಳು.
אֶרֶץ אֶרֶץ אָרֶץ שִׁמְעִי דְּבַר־יְהֹוָֽה׃
30 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”
כֹּה ׀ אָמַר יְהֹוָה כִּתְבוּ אֶת־הָאִישׁ הַזֶּה עֲרִירִי גֶּבֶר לֹא־יִצְלַח בְּיָמָיו כִּי לֹא יִצְלַח מִזַּרְעוֹ אִישׁ יֹשֵׁב עַל־כִּסֵּא דָוִד וּמֹשֵׁל עוֹד בִּיהוּדָֽה׃

< ಯೆರೆಮೀಯನು 22 >