< ಯೆರೆಮೀಯನು 24 >

1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.
巴比伦王尼布甲尼撒将犹大王约雅敬的儿子耶哥尼雅和犹大的首领,并工匠、铁匠从耶路撒冷掳去,带到巴比伦。这事以后,耶和华指给我看,有两筐无花果放在耶和华的殿前。
2 ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
一筐是极好的无花果,好像是初熟的;一筐是极坏的无花果,坏得不可吃。
3 ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.
于是耶和华问我说:“耶利米你看见什么?”我说:“我看见无花果,好的极好,坏的极坏,坏得不可吃。”
4 ಆಗ ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:
耶和华的话临到我说:“
5 “ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.
耶和华—以色列的 神如此说:被掳去的犹大人,就是我打发离开这地到迦勒底人之地去的,我必看顾他们如这好无花果,使他们得好处。
6 ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.
我要眷顾他们,使他们得好处,领他们归回这地。我也要建立他们,必不拆毁;栽植他们,并不拔出。
7 ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.
我要赐他们认识我的心,知道我是耶和华。他们要作我的子民,我要作他们的 神,因为他们要一心归向我。”
8 “‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.
耶和华如此说:“我必将犹大王西底家和他的首领,以及剩在这地耶路撒冷的余民,并住在埃及地的犹大人都交出来,好像那极坏、坏得不可吃的无花果。
9 ‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.
我必使他们交出来,在天下万国中抛来抛去,遭遇灾祸;在我赶逐他们到的各处成为凌辱、笑谈、讥刺、咒诅。
10 ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’”
我必使刀剑、饥荒、瘟疫临到他们,直到他们从我所赐给他们和他们列祖之地灭绝。”

< ಯೆರೆಮೀಯನು 24 >