< ಯೆರೆಮೀಯನು 26 >

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.
যোচিয়াৰ পুত্ৰ যিহূদাৰ ৰজা যিহোয়াকীমৰ ৰাজত্বৰ আৰম্ভণিত যিহোৱাৰ পৰা এই বাক্য আহিল আৰু ক’লে,
2 “ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.
বোলে, “যিহোৱাই এইদৰে কৈছে: তুমি যিহোৱাৰ গৃহৰ চোতালত থিয় হোৱা, আৰু যিহোৱাৰ গৃহত প্ৰণিপাত কৰিবলৈ অহা যিহূদাৰ সকলো নগৰৰ লোকসকলক, মই তোওঁলোকক ক’বলৈ তোমাক আজ্ঞা দিয়া সকলো বাক্য কোৱা, এটি কথাও নোকোৱাকৈ নাথাকিবা।
3 ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.
কিজানি তেওঁলোকে শুনি নিজ নিজ কু-পথৰ পৰা উলটিব; সেয়ে হ’লে, তেওঁলোকৰ দুষ্টতাৰ বাবে মই তেওঁলোকলৈ কৰিব খোজা অমঙ্গলৰ পৰা থামিম।
4 ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,
তুমি তেওঁলোকক কোৱা, ‘যিহোৱাই এই কথা কৈছে, যি ভাববাদীসকলক মই প্ৰভাতে উঠি তোমালোকৰ ওচৰলৈ পঠিয়াই থাকোঁ, কিন্তু তোমালোকে যদি নুশুনা,
5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
মোৰ দাস সেই ভাববাদীসকলৰ বাক্য শুনিবলৈ, তোমালোকৰ আগত মই স্থাপন কৰা মোৰ ব্যৱস্থামতে চলিবলৈ, যদি তোমালোকে মোলৈ কাণ নিদিয়া,
6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’”
তেনেহ’লে মই এই গৃহক চীলোৰ দৰে কৰিম, আৰু এই নগৰক পৃথিৱীৰ আটাই জাতিৰ শাওৰ বিষয় কৰিম।
7 ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.
যেতিয়া যিৰিমিয়াই যিহোৱাৰ গৃহত এই সকলো বাক্য কোৱাত ভাববাদী আৰু আটাই প্ৰজাসকলে শুনিলে।
8 ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.
আৰু যিৰিমিয়াই সকলো লোকৰ আগত, যিহোৱাই আজ্ঞা কৰা সকলো কথা কৈ এটোৱাৰ পাছত, পুৰোহিত, ভাববাদী আৰু আটাই প্ৰজাসকলে তেওঁক ধৰি ক’লে, “তুমি নিশ্চয়ে মৰিবা!
9 ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.
এই গৃহ চীলোৰ দৰে হ’ব আৰু এই নগৰ উচ্ছন্ন হৈ নিবাসী-শূন্য হ’ব বুলি কৈ, তুমি যিহোৱাৰ নামেৰে কিয় ভাববাণী প্ৰচাৰ কৰিছা?” সেই কাৰণে সকলো প্ৰজাই যিহোৱাৰ গৃহত যিৰিমিয়াৰ আগত গোট খালে।
10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.
১০তেতিয়া যিহূদাৰ প্ৰধান লোকসকলে এই কথা শুনি ৰাজ গৃহৰ পৰা যিহোৱাৰ গৃহলৈ আহিল, আৰু তেওঁলোক যিহোৱাৰ গৃহত নতুন দুৱাৰৰ সোমোৱা ঠাইত বহিল।
11 ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.
১১পাছে পুৰোহিত আৰু ভাববাদীসকলে প্ৰধান লোকসকলক আৰু আটাই প্ৰজাসকলৰ আগত ক’লে, “এই মানুহ প্রাণদণ্ডৰ যোগ্য; কিয়নো তেওঁ এই নগৰৰ বিৰুদ্ধে ভাববাণী প্ৰচাৰ কৰিলে, তাক তোমালোকে নিজ কাণে শুনিলা!”
12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.
১২তেতিয়া যিৰিমিয়াই সকলো প্ৰধান লোক আৰু আটাই প্ৰজাৰ আগত ক’লে, “এই গৃহ আৰু নগৰৰ বিৰুদ্ধে তোমালোকে শুনা আটাইবোৰ ভাববাণী প্ৰচাৰ কৰিবলৈ যিহোৱাই মোক পঠিয়ালে।
13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
১৩এই হেতুকে এতিয়া তোমালোকে নিজ নিজ আচৰণ আৰু কৰ্ম শুদ্ধ কৰা, আৰু তোমালোকৰ ঈশ্বৰ যিহোৱাৰ বাক্য পালন কৰা; তাতে যিহোৱাই তোমালোকৰ অহিতে কৰিব খোজা অমঙ্গলৰ পৰা থামিব।
14 ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
১৪কিন্তু চোৱা! মই হ’লে তোমালোকৰ হাততে আছোঁ। তোমালোকৰ দৃষ্টিত যি ভাল আৰু ন্যায়, তাকে মোলৈ কৰা।
15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.
১৫কিন্তু তোমালোকে নিশ্চয়ে জানিবা, যে, যদি তোমালোকে মোক বধ কৰা, তেন্তে তোমালোকৰ নিজৰ নিজৰ, এই নগৰৰ, আৰু ইয়াৰ নিবাসীসকলৰ ওপৰত নিৰ্দ্দোষীৰ ৰক্তপাতৰ দোষ ঘটোৱাব। কিয়নো সঁচাকৈ সেই সকলো কথা তোমালোকৰ কাণত ক’বলৈ যিহোৱাই মোক তোমালোকৰ গুৰিলৈ পঠিয়ালে।”
16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.
১৬তেতিয়া প্ৰধান লোকসকল আৰু আটাই প্ৰজাই পুৰোহিত আৰু ভাববাদীসকলক ক’লে, “এই মানুহ প্ৰাণদণ্ডৰ যোগ্য নহয়; কিয়নো এওঁ আমাৰ ঈশ্বৰ যিহোৱাৰ নামেৰে আমাক কথা ক’লে।”
17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:
১৭তাৰ পাছত দেশৰ বৃদ্ধসকলৰ মাজৰ কিছু লোকে উঠি প্ৰজাসকলৰ গোটেই সমাজক ক’লে।
18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’
১৮তেওঁলোকে ক’লে, “যিহূদাৰ হিষ্কিয়া ৰজাৰ ৰাজত্বৰ কালত মোৰেষ্টিয়া মীখায়াই ভাববাণী প্ৰচাৰ কৰিছিল। তেওঁ যিহূদাৰ আটাই লোকক কৈছিল, ‘বাহিনীসকলৰ যিহোৱাই এইদৰে কৈছিল: “চিয়োনক পথাৰৰ দৰে চহোৱা হ’ব, যিৰূচালেম ভগ্নৰাশি হ’ব আৰু গৃহটি থকা পৰ্ব্বতটো কাঠনিৰ ওখ ঠাইৰ দৰে হ’ব।”
19 ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.
১৯কোৱাচোন, যিহূদাৰ হিষ্কিয়া ৰজাই আৰু গোটেই যিহূদাই জানো তেওঁক বধ কৰিছিল? হিস্কিয়াই জানো যিহোৱালৈ ভয় কৰা নাছিল? আৰু তেওঁ জানো যিহোৱাৰ অনুগ্ৰহ প্ৰাৰ্থনা কৰা নাছিল? তাতে যিহোৱাই তেওঁলোকলৈ কৰিব খোজা অমঙ্গলৰ পৰা জানো নাথামিল? তোমালোকে কোৱাৰ দৰে কৰিলে আৰু নিজ নিজ প্ৰাণৰ অহিতে মহা-অমঙ্গল ঘটাম।
20 ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
২০যিহোৱাৰ নামেৰে ভাববাণী প্ৰচাৰ কৰা আৰু এজন লোক আছিল, তেওঁ কিৰিয়ৎ-যিয়াৰীম নিবাসী চমৰিয়াৰ পুত্ৰ ঊৰিয়া; তেওঁ যিৰিমিয়াৰ সকলো বাক্যৰ দৰে এই নগৰ আৰু এই দেশৰ অহিতে ভাববাণী প্ৰচাৰ কৰিছিল।
21 ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.
২১কিন্তু যিহোয়াকীম ৰজা, তেওঁৰ বীৰসকলক আৰু সকলো প্ৰধান লোক তেওঁৰ কথা শুনিবলৈ পোৱাত, ৰজাই তেওঁক বধ কৰিবলৈ পুৰুষাৰ্থ কৰিলে; কিন্তু ঊৰিয়াই তাকে শুনি ভয় পাই পলাই মিচৰলৈ গ’ল।
22 ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.
২২তেতিয়া যিহোয়াকীম ৰজাই মিচৰলৈ মানুহ পঠিয়ালে, অৰ্থাৎ অকবোৰৰ পুত্ৰ ইলনাথনক আৰু তেওঁৰ লগত কেইজনমান লোকক মিচৰলৈ পঠিয়ালে।
23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
২৩পাছত তেওঁলোকে ঊৰিয়াক মিচৰৰ পৰা উলিয়াই যিহোয়াকীম ৰজাৰ গুৰিলৈ আনিলত, ৰজাই তৰোৱালৰ দ্বাৰাই তেওঁক বধ কৰি সামান্য লোকৰ মৈদামত তেওঁৰ শৱ পেলাই দিলে।
24 ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.
২৪কিন্তু চাফনৰ পুত্ৰ অহীকামৰ হাত যিৰিমিয়াৰ পক্ষে থকাত, বধ কৰিবৰ অৰ্থে লোকসকলৰ হাতত তেওঁক শোধাই দিয়া নহ’ল।

< ಯೆರೆಮೀಯನು 26 >