< ಯೆರೆಮೀಯನು 27 >

1 ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು.
בְּרֵאשִׁית מַמְלֶכֶת יְהוֹיָקִם בֶּן־יֹאושִׁיָּהוּ מֶלֶךְ יְהוּדָה הָיָה הַדָּבָר הַזֶּה אֶֽל־יִרְמְיָה מֵאֵת יְהֹוָה לֵאמֹֽר׃
2 ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
כֹּֽה־אָמַר יְהֹוָה אֵלַי עֲשֵׂה לְךָ מוֹסֵרוֹת וּמֹטוֹת וּנְתַתָּם עַל־צַוָּארֶֽךָ׃
3 ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.
וְשִׁלַּחְתָּם אֶל־מֶלֶךְ אֱדוֹם וְאֶל־מֶלֶךְ מוֹאָב וְאֶל־מֶלֶךְ בְּנֵי עַמּוֹן וְאֶל־מֶלֶךְ צֹר וְאֶל־מֶלֶךְ צִידוֹן בְּיַד מַלְאָכִים הַבָּאִים יְרוּשָׁלַ͏ִם אֶל־צִדְקִיָּהוּ מֶלֶךְ יְהוּדָֽה׃
4 ‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:
וְצִוִּיתָ אֹתָם אֶל־אֲדֹנֵיהֶם לֵאמֹר כֹּה־אָמַר יְהֹוָה צְבָאוֹת אֱלֹהֵי יִשְׂרָאֵל כֹּה תֹאמְרוּ אֶל־אֲדֹנֵיכֶֽם׃
5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.
אָֽנֹכִי עָשִׂיתִי אֶת־הָאָרֶץ אֶת־הָאָדָם וְאֶת־הַבְּהֵמָה אֲשֶׁר עַל־פְּנֵי הָאָרֶץ בְּכֹחִי הַגָּדוֹל וּבִזְרוֹעִי הַנְּטוּיָה וּנְתַתִּיהָ לַאֲשֶׁר יָשַׁר בְּעֵינָֽי׃
6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.
וְעַתָּה אָֽנֹכִי נָתַתִּי אֶת־כׇּל־הָֽאֲרָצוֹת הָאֵלֶּה בְּיַד נְבוּכַדְנֶאצַּר מֶלֶךְ־בָּבֶל עַבְדִּי וְגַם אֶת־חַיַּת הַשָּׂדֶה נָתַתִּי לוֹ לְעׇבְדֽוֹ׃
7 ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.
וְעָבְדוּ אֹתוֹ כׇּל־הַגּוֹיִם וְאֶת־בְּנוֹ וְאֶֽת־בֶּן־בְּנוֹ עַד בֹּא־עֵת אַרְצוֹ גַּם־הוּא וְעָבְדוּ בוֹ גּוֹיִם רַבִּים וּמְלָכִים גְּדֹלִֽים׃
8 “‘“ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.
וְהָיָה הַגּוֹי וְהַמַּמְלָכָה אֲשֶׁר לֹֽא־יַעַבְדוּ אֹתוֹ אֶת־נְבוּכַדְנֶאצַּר מֶלֶךְ־בָּבֶל וְאֵת אֲשֶׁר לֹֽא־יִתֵּן אֶת־צַוָּארוֹ בְּעֹל מֶלֶךְ בָּבֶל בַּחֶרֶב וּבָרָעָב וּבַדֶּבֶר אֶפְקֹד עַל־הַגּוֹי הַהוּא נְאֻם־יְהֹוָה עַד־תֻּמִּי אֹתָם בְּיָדֽוֹ׃
9 ‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.
וְאַתֶּם אַל־תִּשְׁמְעוּ אֶל־נְבִיאֵיכֶם וְאֶל־קֹסְמֵיכֶם וְאֶל חֲלֹמֹתֵיכֶם וְאֶל־עֹנְנֵיכֶם וְאֶל־כַּשָּׁפֵיכֶם אֲשֶׁר־הֵם אֹמְרִים אֲלֵיכֶם לֵאמֹר לֹא תַעַבְדוּ אֶת־מֶלֶךְ בָּבֶֽל׃
10 ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.
כִּי שֶׁקֶר הֵם נִבְּאִים לָכֶם לְמַעַן הַרְחִיק אֶתְכֶם מֵעַל אַדְמַתְכֶם וְהִדַּחְתִּי אֶתְכֶם וַאֲבַדְתֶּֽם׃
11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.”’”
וְהַגּוֹי אֲשֶׁר יָבִיא אֶת־צַוָּארוֹ בְּעֹל מֶֽלֶךְ־בָּבֶל וַעֲבָדוֹ וְהִנַּחְתִּיו עַל־אַדְמָתוֹ נְאֻם־יְהֹוָה וַעֲבָדָהּ וְיָשַׁב בָּֽהּ׃
12 ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.
וְאֶל־צִדְקִיָּה מֶלֶךְ־יְהוּדָה דִּבַּרְתִּי כְּכׇל־הַדְּבָרִים הָאֵלֶּה לֵאמֹר הָבִיאוּ אֶת־צַוְּארֵיכֶם בְּעֹל מֶלֶךְ־בָּבֶל וְעִבְדוּ אֹתוֹ וְעַמּוֹ וִֽחְיֽוּ׃
13 ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು?
לָמָּה תָמוּתוּ אַתָּה וְעַמֶּךָ בַּחֶרֶב בָּרָעָב וּבַדָּבֶר כַּֽאֲשֶׁר דִּבֶּר יְהֹוָה אֶל־הַגּוֹי אֲשֶׁר לֹא־יַעֲבֹד אֶת־מֶלֶךְ בָּבֶֽל׃
14 ‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
וְאַֽל־תִּשְׁמְעוּ אֶל־דִּבְרֵי הַנְּבִאִים הָאֹמְרִים אֲלֵיכֶם לֵאמֹר לֹא תַעַבְדוּ אֶת־מֶלֶךְ בָּבֶל כִּי שֶׁקֶר הֵם נִבְּאִים לָכֶֽם׃
15 ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”
כִּי לֹא שְׁלַחְתִּים נְאֻם־יְהֹוָה וְהֵם נִבְּאִים בִּשְׁמִי לַשָּׁקֶר לְמַעַן הַדִּיחִי אֶתְכֶם וַאֲבַדְתֶּם אַתֶּם וְהַנְּבִאִים הַֽנִּבְּאִים לָכֶֽם׃
16 ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
וְאֶל־הַכֹּהֲנִים וְאֶל־כׇּל־הָעָם הַזֶּה דִּבַּרְתִּי לֵאמֹר כֹּה אָמַר יְהֹוָה אַֽל־תִּשְׁמְעוּ אֶל־דִּבְרֵי נְבִיאֵיכֶם הַֽנִּבְּאִים לָכֶם לֵאמֹר הִנֵּה כְלֵי בֵית־יְהֹוָה מוּשָׁבִים מִבָּבֶלָה עַתָּה מְהֵרָה כִּי שֶׁקֶר הֵמָּה נִבְּאִים לָכֶֽם׃
17 ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?
אַל־תִּשְׁמְעוּ אֲלֵיהֶם עִבְדוּ אֶת־מֶלֶךְ־בָּבֶל וִֽחְיוּ לָמָּה תִֽהְיֶה הָעִיר הַזֹּאת חׇרְבָּֽה׃
18 ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.
וְאִם־נְבִאִים הֵם וְאִם־יֵשׁ דְּבַר־יְהֹוָה אִתָּם יִפְגְּעוּ־נָא בַּיהֹוָה צְבָאוֹת לְבִלְתִּי־בֹאוּ הַכֵּלִים ׀ הַנּוֹתָרִים בְּבֵית־יְהֹוָה וּבֵית מֶלֶךְ יְהוּדָה וּבִירוּשָׁלַ͏ִם בָּבֶֽלָה׃
19 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.
כִּי כֹה אָמַר יְהֹוָה צְבָאוֹת אֶל־הָֽעַמֻּדִים וְעַל־הַיָּם וְעַל־הַמְּכֹנוֹת וְעַל יֶתֶר הַכֵּלִים הַנּוֹתָרִים בָּעִיר הַזֹּֽאת׃
אֲשֶׁר לֹֽא־לְקָחָם נְבֽוּכַדְנֶאצַּר מֶלֶךְ בָּבֶל בַּגְלוֹתוֹ אֶת־[יְכׇנְיָה] (יכוניה) בֶן־יְהוֹיָקִים מֶלֶךְ־יְהוּדָה מִירוּשָׁלַ͏ִם בָּבֶלָה וְאֵת כׇּל־חֹרֵי יְהוּדָה וִירוּשָׁלָֽ͏ִם׃
21 ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ:
כִּי כֹה אָמַר יְהֹוָה צְבָאוֹת אֱלֹהֵי יִשְׂרָאֵל עַל־הַכֵּלִים הַנּֽוֹתָרִים בֵּית יְהֹוָה וּבֵית מֶלֶךְ־יְהוּדָה וִירוּשָׁלָֽ͏ִם׃
22 ‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”
בָּבֶלָה יוּבָאוּ וְשָׁמָּה יִֽהְיוּ עַד יוֹם פׇּקְדִי אֹתָם נְאֻם־יְהֹוָה וְהַֽעֲלִיתִים וַהֲשִׁיבֹתִים אֶל־הַמָּקוֹם הַזֶּֽה׃

< ಯೆರೆಮೀಯನು 27 >