< ಯೆರೆಮೀಯನು 28 >

1 ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,
その年、すなわちユダの王ゼデキヤの治世の初め、その第四年の五月、ギベオン出身の預言者であって、アズルの子であるハナニヤは、主の宮で祭司とすべての民の前でわたしに語って言った、
2 “ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.
「万軍の主、イスラエルの神はこう仰せられる、わたしはバビロンの王のくびきを砕いた。
3 ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
二年の内に、バビロンの王ネブカデネザルが、この所から取ってバビロンに携えて行った主の宮の器を、皆この所に帰らせる。
4 ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”
わたしはまたユダの王エホヤキムの子エコニヤと、バビロンに行ったユダのすべての捕われ人をこの所に帰らせる。それは、わたしがバビロンの王のくびきを、砕くからであると主は言われる」。
5 ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,
そこで預言者エレミヤは主の宮のうちに立っている祭司とすべての民の前で、預言者ハナニヤに言った。
6 “ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
すなわち預言者エレミヤは言った、「アァメン。どうか主がこのようにしてくださるように。どうかあなたの預言した言葉が成就して、バビロンに携えて行った主の宮の器とすべての捕われ人を、主がバビロンから再びこの所に帰らせてくださるように。
7 ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.
ただし、今わたしがあなたとすべての民の聞いている所で語るこの言葉を聞きなさい。
8 ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.
わたしと、あなたの先に出た預言者は、むかしから、多くの地と大きな国について、戦いと、ききんと、疫病の事を預言した。
9 ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.
平和を預言する預言者は、その預言者の言葉が成就するとき、真実に主がその預言者をつかわされたのであることが知られるのだ」。
10 ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.
そこで預言者ハナニヤは預言者エレミヤの首から、くびきを取って、それを砕いた。
11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.
そしてハナニヤは、すべての民の前で語り、「主はこう仰せられる、『わたしは二年のうちに、このように、万国民の首からバビロンの王ネブカデネザルのくびきを離して砕く』」と言った。預言者エレミヤは去って行った。
12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,
預言者ハナニヤが預言者エレミヤの首から、くびきを離して砕いた後、しばらくして主の言葉がエレミヤに臨んだ、
13 “ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.
「行って、ハナニヤに告げなさい、『主はこう仰せられる、あなたは木のくびきを砕いたが、わたしはそれに替えて鉄のくびきを作ろう。
14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’”
万軍の主、イスラエルの神はこう仰せられる、わたしは鉄のくびきをこの万国民の首に置いて、バビロンの王ネブカデネザルに仕えさせる。彼らはこれに仕える。わたしは野の獣をも彼に与えた』」。
15 ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.
預言者エレミヤはまた預言者ハナニヤに言った、「ハナニヤよ、聞きなさい。主があなたをつかわされたのではない。あなたはこの民に偽りを信じさせた。
16 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’” ಎಂದನು.
それゆえ主は仰せられる、『わたしはあなたを地のおもてから除く。あなたは主に対する反逆を語ったので、今年のうちに死ぬのだ』と」。
17 ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.
預言者ハナニヤはその年の七月に死んだ。

< ಯೆರೆಮೀಯನು 28 >