< ಯೆರೆಮೀಯನು 34 >
1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:
比倫王拿步高與自己的軍隊,及他手下統治的天下各國和一切民族,前來進攻耶路撒冷和她所有的城鎮時,有上主的話傳給耶肋米亞說:
2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.
「上主以色列的天主這樣說:你對猶大王漆德克雅說,告訴他上主這樣說:看,我必將這城交在巴比倫王手中,他將放火燒城,
3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.
你必逃不出他的手,終必被擒,交在他手中;你必要與巴比倫王目對目相視,面對面相談;你必要到巴比倫去;
4 “‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.
但是,猶大王漆德克雅! 請聽上主的話,上主論你這樣說:你決不會死在刀下,
5 ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’”
必要和平死去;正如有人給在你以前的上代祖先君王焚香,同樣也有人給你焚香,向你致哀;『嘻嘻,我主! 』的確,是我說了這話──上主的斷語」。
6 ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
耶肋米亞就在耶路撒冷,對猶大君王漆德克雅說了這一切話,
7 ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.
那時巴比倫不的軍隊正在攻打耶路撒冷和猶大其餘的城市,攻打拉基士和阿則卡,因為在猶大城市中,只剩下了這兩座設防的城市。
8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.
漆德克雅王與當時在耶路撒冷的全體人民訂約,要對奴婢宣佈自由以後,有上主的話傳給耶肋米亞:
9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.
每人應釋放自己的希伯來奴婢,使他們獲享自由;誰也不該再以自己的弟兄猶大人作奴婢。
10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.
所有入盟的首長和全體人民都同意,每人要釋放自己的奴婢,使他們獲享自由,不再以他們為奴婢:他們同意了,也釋放了。
11 ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.
但是,以後他們改變主意,把他們釋放恢復自由的奴婢,再叫回來,強迫他們再作奴婢。
12 ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ:
於是有上主的話傳給耶肋米亞說:
13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,
「上主以色列的天主這樣說:在我領你們的祖先,先由埃及地,奴隸之所,出來的那一天,與他們訂了盟約說:
14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.
每七年初,你們應各自釋放賣給你們的希伯來弟兄:他服事了你六年,你應該讓他自由離去。你們的祖先卻不聽,也不向我側耳。
15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.
今年你們自己反悔,作了我認為正直的事,各向自己的近人宣布自由,在歸我名下的殿裏,當著我面訂了盟約。
16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.
但事後卻變了主意,褻瀆我名,竟再召回自己已經釋放,身獲自由的奴婢,迫使他們再做你們的奴婢。
17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.
為此上主這樣說:你們既不聽從我,各自向自己的弟兄,各向自己的近人宣布自由,看,我來對你們宣佈釋放刀劍和瘟疫及飢荒的自由──上主的斷語──使你們成為地上一切王國驚慌恐怖的對象。
18 ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,
凡違背我盟約,即不履行剖開牛犢,由兩半中間走過,在我面前所立的盟約誓詞人,我必將他們交出:
19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,
凡剖開牛犢,由兩半中走過的猶大和耶路撒冷的首長、官員、司祭,以及當地的全體人民,
20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.
我必將他們悉數交在他們的敵人,和圖謀他們性命者的手中,使他們的屍首成為天上飛鳥和地上走獸的食物。
21 “ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.
至於猶大王漆德克雅和他的臣相,我也將他們交在他們敵人手中,交在圖謀他們性命者的手中,交在由你們面前撤退的巴比倫王軍隊的手中。
22 ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”
我必下令──上主的斷語──叫他們再回來,進攻,佔領,火燒這城市;至於猶大的其他城市,我必使它們化為無人居住木荒野」。