< ಯೆರೆಮೀಯನು 41 >
1 ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,
七月ごろ王の血統なるエリシヤマの子ネタニヤの子イシマエル王の十人の牧伯等とともにミヅパにゆきてアヒカムの子ゲダリヤにいたりミヅパにて偕に食をなせしが
2 ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.
ネタニヤの子イシマエルおよび偕にをりし十人の者起上りバビロンの王がこの地の有司となせしシヤパンの子アヒカムの子なるゲダリヤを刀にて殺せり
3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.
イシマエルまたミヅパにゲダリヤと偕にをりし諸のユダヤ人と彼處にをりしカルデヤ人の兵卒を殺したり
4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ
彼がゲダリヤを殺してより二日の後いまだ誰も之を知ざりし時
5 ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.
ある人八十人その鬚を薙り衣を裂き身に傷つけ手に素祭の物と香を携へてシケム、シロ、サマリヤよりきたりてヱホバの室にいたらんとせしかば
6 ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು.
ネタニヤの子イシマエル、ミヅパよりいでて哭きつつ行て彼らを迎へ彼等に逢てアヒカムの子ゲダリヤの許に來れといへり
7 ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.
而して彼ら邑の中に入しときネタニヤの子イシマエル己と偕にある人々とともに彼らを殺してその屍を阱に投いれたり
8 ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.
但しその中の十人イシマエルにむかひ我らは田地に小麥 麰麥油および蜜を藏し有り我らをころすなかれと言たれば彼らをその兄弟と偕に殺さずして已ぬ
9 ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.
イシマエルがゲダリヤの名をもて殺せし人の屍を投入れし阱はアサ王がイスラエルの王バアシヤを怖れて鑿し阱なりネタニヤの子イシマエルその殺せし人々を之に充せり
10 ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.
イシマエルはミヅパに遺りをる諸の民即ち王の諸女と侍衞の長ネブザラダンがアヒカムの子ゲダリヤに交付しところのミヅパに遺れる諸の民とを擄にせりネタニヤの子イシマエルすなはち彼らを擄にしアンモン人に往んとて去れり
11 ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,
カレヤの子ヨハナンおよび彼と偕に在る軍勢の長たちネタニヤの子イシマエルの爲し諸の惡事を聞ければ
12 ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು.
その衆卒を率てネタニヤの子イシマエルと戰はんとて出でギベオンの池の旁にて彼に遇ふ
13 ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.
イシマエルと偕に在る人々はカレヤの子ヨハナンおよび彼とともに在る軍勢の長たちを見て欣べり
14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.
是をもてイシマエルがミヅパより擄へきたりし所の人々身をめぐらしてカレヤの子ヨハナンの許にゆけり
15 ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.
ネタニヤの子イシマエルは八人の者と偕にヨハナンを避け逃てアンモン人に往り
16 ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,
カレヤの子ヨハナンおよび彼とともにある軍勢の長等はネタニヤの子イシマエルがアヒカムの子ゲダリヤを殺してミヅパより擄へゆけるところの彼遺れる民すなはち兵卒婦人兒女寺人等を其手より取りかへして之をギベオンより携かへりしが
17 ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
進てエジプトにいたらんとてベツレヘムの近傍にあるキムハムの住處に往て留れり
18 ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.
こはネタニヤの子イシマエルがバビロンの王の此地の有司となしたるアヒカムの子ゲダリヤを殺せしによりカルデヤ人を懼たればなり