< ಯೆರೆಮೀಯನು 46 >

1 ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:
אֲשֶׁר הָיָה דְבַר־יְהוָה אֶל־יִרְמְיָהוּ הַנָּבִיא עַל־הַגּוֹיִֽם׃
2 ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:
לְמִצְרַיִם עַל־חֵיל פַּרְעֹה נְכוֹ מֶלֶךְ מִצְרַיִם אֲשֶׁר־הָיָה עַל־נְהַר־פְּרָת בְּכַרְכְּמִשׁ אֲשֶׁר הִכָּה נְבֽוּכַדְרֶאצַּר מֶלֶךְ בָּבֶל בִּשְׁנַת הָֽרְבִיעִית לִיהוֹיָקִים בֶּן־יֹאשִׁיָּהוּ מֶלֶךְ יְהוּדָֽה׃
3 “ಗುರಾಣಿಯನ್ನೂ, ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸಮೀಪಿಸಿರಿ;
עִרְכוּ מָגֵן וְצִנָּה וּגְשׁוּ לַמִּלְחָמָֽה׃
4 ರಾಹುತರೇ, ಕುದುರೆಗಳನ್ನು ಕಟ್ಟಿರಿ; ವಾಹನಾಶ್ವಗಳನ್ನು ಹತ್ತಿರಿ. ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಂತುಕೊಳ್ಳಿರಿ; ಈಟಿಗಳನ್ನು ಮೆರುಗು ಮಾಡಿರಿ; ಕವಚಗಳನ್ನು ತೊಟ್ಟುಕೊಳ್ಳಿರಿ.
אִסְרוּ הַסּוּסִים וַֽעֲלוּ הַפָּרָשִׁים וְהִֽתְיַצְּבוּ בְּכוֹבָעִים מִרְקוּ הָֽרְמָחִים לִבְשׁוּ הַסִּרְיֹנֹֽת׃
5 ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.
מַדּוּעַ רָאִיתִי הֵמָּה חַתִּים נְסֹגִים אָחוֹר וְגִבּוֹרֵיהֶם יֻכַּתּוּ וּמָנוֹס נָסוּ וְלֹא הִפְנוּ מָגוֹר מִסָּבִיב נְאֻם־יְהוָֽה׃
6 “ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.
אַל־יָנוּס הַקַּל וְאַל־יִמָּלֵט הַגִּבּוֹר צָפוֹנָה עַל־יַד נְהַר־פְּרָת כָּשְׁלוּ וְנָפָֽלוּ׃
7 “ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?
מִי־זֶה כַּיְאֹר יַֽעֲלֶה כַּנְּהָרוֹת יִֽתְגָּעֲשׁוּ מֵימָֽיו׃
8 ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ; ಅದರ ನೀರು ನದಿಗಳ ಹಾಗೆ ಕದಲುತ್ತವೆ; ‘ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ; ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ,’ ಎಂದು ಅವಳು ಹೇಳುತ್ತಾಳೆ.
מִצְרַיִם כַּיְאֹר יַֽעֲלֶה וְכַנְּהָרוֹת יִתְגֹּעֲשׁוּ מָיִם וַיֹּאמֶר אַֽעֲלֶה אֲכַסֶּה־אֶרֶץ אֹבִידָה עִיר וְיֹשְׁבֵי בָֽהּ׃
9 ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.
עֲלוּ הַסּוּסִים וְהִתְהֹלְלוּ הָרֶכֶב וְיֵצְאוּ הַגִּבּוֹרִים כּוּשׁ וּפוּט תֹּפְשֵׂי מָגֵן וְלוּדִים תֹּפְשֵׂי דֹּרְכֵי קָֽשֶׁת׃
10 ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.
וְֽהַיּוֹם הַהוּא לַאדֹנָי יְהוִה צְבָאוֹת יוֹם נְקָמָה לְהִנָּקֵם מִצָּרָיו וְאָכְלָה חֶרֶב וְשָׂבְעָה וְרָוְתָה מִדָּמָם כִּי זֶבַח לַאדֹנָי יְהוִה צְבָאוֹת בְּאֶרֶץ צָפוֹן אֶל־נְהַר־פְּרָֽת׃
11 “ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!
עֲלִי גִלְעָד וּקְחִי צֳרִי בְּתוּלַת בַּת־מִצְרָיִם לַשָּׁוְא הרביתי הִרְבֵּית רְפֻאוֹת תְּעָלָה אֵין לָֽךְ׃
12 ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”
שָׁמְעוּ גוֹיִם קְלוֹנֵךְ וְצִוְחָתֵךְ מָלְאָה הָאָרֶץ כִּֽי־גִבּוֹר בְּגִבּוֹר כָּשָׁלוּ יַחְדָּיו נָפְלוּ שְׁנֵיהֶֽם׃
13 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು:
הַדָּבָר אֲשֶׁר דִּבֶּר יְהוָה אֶֽל־יִרְמְיָהוּ הַנָּבִיא לָבוֹא נְבֽוּכַדְרֶאצַּר מֶלֶךְ בָּבֶל לְהַכּוֹת אֶת־אֶרֶץ מִצְרָֽיִם׃
14 “ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.
הַגִּידוּ בְמִצְרַיִם וְהַשְׁמִיעוּ בְמִגְדּוֹל וְהַשְׁמִיעוּ בְנֹף וּבְתַחְפַּנְחֵס אִמְרוּ הִתְיַצֵּב וְהָכֵן לָךְ כִּֽי־אָכְלָה חֶרֶב סְבִיבֶֽיךָ׃
15 ನಿನ್ನ ಬಲಿಷ್ಠರು ಏಕೆ ಬಡಕೊಂಡು ಹೋಗಿದ್ದಾರೆ? ಯೆಹೋವ ದೇವರು ಅವರನ್ನು ಓಡಿಸಿದ್ದರಿಂದ ಅವರು ನಿಲ್ಲಲಿಲ್ಲ.
מַדּוּעַ נִסְחַף אַבִּירֶיךָ לֹא עָמַד כִּי יְהוָה הֲדָפֽוֹ׃
16 ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು.
הִרְבָּה כּוֹשֵׁל גַּם־נָפַל אִישׁ אֶל־רֵעֵהוּ וַיֹּֽאמְרוּ קוּמָה ׀ וְנָשֻׁבָה אֶל־עַמֵּנוּ וְאֶל־אֶרֶץ מֽוֹלַדְתֵּנוּ מִפְּנֵי חֶרֶב הַיּוֹנָֽה׃
17 ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.
קָרְאוּ שָׁם פַּרְעֹה מֶֽלֶךְ־מִצְרַיִם שָׁאוֹן הֶעֱבִיר הַמּוֹעֵֽד׃
18 “ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.
חַי־אָנִי נְאֻם־הַמֶּלֶךְ יְהוָה צְבָאוֹת שְׁמוֹ כִּי כְּתָבוֹר בֶּֽהָרִים וּכְכַרְמֶל בַּיָּם יָבֽוֹא׃
19 ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.
כְּלֵי גוֹלָה עֲשִׂי לָךְ יוֹשֶׁבֶת בַּת־מִצְרָיִם כִּֽי־נֹף לְשַׁמָּה תִֽהְיֶה וְנִצְּתָה מֵאֵין יוֹשֵֽׁב׃
20 “ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ.
עֶגְלָה יְפֵֽה־פִיָּה מִצְרָיִם קֶרֶץ מִצָּפוֹן בָּא בָֽא׃
21 ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
גַּם־שְׂכִרֶיהָ בְקִרְבָּהּ כְּעֶגְלֵי מַרְבֵּק כִּֽי־גַם־הֵמָּה הִפְנוּ נָסוּ יַחְדָּיו לֹא עָמָדוּ כִּי יוֹם אֵידָם בָּא עֲלֵיהֶם עֵת פְּקֻדָּתָֽם׃
22 ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.
קוֹלָהּ כַּנָּחָשׁ יֵלֵךְ כִּֽי־בְחַיִל יֵלֵכוּ וּבְקַרְדֻּמּוֹת בָּאוּ לָהּ כְּחֹטְבֵי עֵצִֽים׃
23 ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, ಕಡಿದುಹಾಕುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ಅವರು ಮಿಡತೆಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
כָּרְתוּ יַעְרָהּ נְאֻם־יְהוָה כִּי לֹא יֵֽחָקֵר כִּי רַבּוּ מֵֽאַרְבֶּה וְאֵין לָהֶם מִסְפָּֽר׃
24 ಈಜಿಪ್ಟಿನ ಮಗಳು ನಾಚಿಕೆಪಡುವಳು. ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.”
הֹבִישָׁה בַּת־מִצְרָיִם נִתְּנָה בְּיַד עַם־צָפֽוֹן׃
25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.
אָמַר יְהוָה צְבָאוֹת אֱלֹהֵי יִשְׂרָאֵל הִנְנִי פוֹקֵד אֶל־אָמוֹן מִנֹּא וְעַל־פַּרְעֹה וְעַל־מִצְרַיִם וְעַל־אֱלֹהֶיהָ וְעַל־מְלָכֶיהָ וְעַל־פַּרְעֹה וְעַל הַבֹּטְחִים בּֽוֹ׃
26 ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ.
וּנְתַתִּים בְּיַד מְבַקְשֵׁי נַפְשָׁם וּבְיַד נְבֽוּכַדְרֶאצַּר מֶֽלֶךְ־בָּבֶל וּבְיַד־עֲבָדָיו וְאַחֲרֵי־כֵן תִּשְׁכֹּן כִּֽימֵי־קֶדֶם נְאֻם־יְהוָֽה׃
27 “ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶದಿಂದಲೂ ರಕ್ಷಿಸುವೆನು; ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ.
וְאַתָּה אַל־תִּירָא עַבְדִּי יַֽעֲקֹב וְאַל־תֵּחַת יִשְׂרָאֵל כִּי הִנְנִי מוֹשִֽׁעֲךָ מֵֽרָחוֹק וְאֶֽת־זַרְעֲךָ מֵאֶרֶץ שִׁבְיָם וְשָׁב יַעֲקוֹב וְשָׁקַט וְשַׁאֲנַן וְאֵין מַחֲרִֽיד׃
28 ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”
אַתָּה אַל־תִּירָא עַבְדִּי יַֽעֲקֹב נְאֻם־יְהוָה כִּי אִתְּךָ אָנִי כִּי אֶעֱשֶׂה כָלָה בְּכָֽל־הַגּוֹיִם ׀ אֲשֶׁר הִדַּחְתִּיךָ שָׁמָּה וְאֹֽתְךָ לֹא־אֶעֱשֶׂה כָלָה וְיִסַּרְתִּיךָ לַמִּשְׁפָּט וְנַקֵּה לֹא אֲנַקֶּֽךָּ׃

< ಯೆರೆಮೀಯನು 46 >