< ಯೆರೆಮೀಯನು 47 >
1 ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:
在法郎尚未進攻迦薩以前,關於培肋舍特,上主有話傳給耶肋米亞先知說:
2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.
上主這樣說:「看,有水從北方湧來,形成一條氾濫的河流,淹沒大地和地上的一切,首都和其中的居民;人們必要喊叫,大地所有的居民必要哀號。
3 ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.
一聽到他駿馬的鐵蹄聲,轔轔的戰車聲,和隆隆的飛輪聲,為父親的已束手無策,不能再顧及自己的兒子,
4 ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.
因為消滅一切培肋舍特人,和摧毀提洛及漆冬一切殘餘助手的日子來到了,上主要消滅培肋舍特人,加非托爾島的遺民
5 ಗಾಜಾ ಊರು ಬೋಳಿಸಿಕೊಂಡಿದೆ. ಅಷ್ಕೆಲೋನ್ ನಾಶನ ಹೊಂದಿದೆ. ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?
迦薩已一片荒涼,阿市刻隆已遭受滅亡;阿納克人的遺民,你們要割傷己身到何時呢﹖
6 “ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.
唉! 上主的刀劍! 到何時纔休息﹖請你入鞘休息安歇罷!
7 ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”
但上主既對它出了命,它怎能休息﹖阿市刻隆和海濱,是他給它指向的地方。