< ಯೆರೆಮೀಯನು 7 >

1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ:
הַדָּבָר אֲשֶׁר הָיָה אֶֽל־יִרְמְיָהוּ מֵאֵת יְהֹוָה לֵאמֹֽר׃
2 “ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
עֲמֹד בְּשַׁעַר בֵּית יְהֹוָה וְקָרָאתָ שָּׁם אֶת־הַדָּבָר הַזֶּה וְאָמַרְתָּ שִׁמְעוּ דְבַר־יְהֹוָה כׇּל־יְהוּדָה הַבָּאִים בַּשְּׁעָרִים הָאֵלֶּה לְהִֽשְׁתַּחֲוֺת לַיהֹוָֽה׃
3 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.
כֹּֽה־אָמַר יְהֹוָה צְבָאוֹת אֱלֹהֵי יִשְׂרָאֵל הֵיטִיבוּ דַרְכֵיכֶם וּמַעַלְלֵיכֶם וַאֲשַׁכְּנָה אֶתְכֶם בַּמָּקוֹם הַזֶּֽה׃
4 “ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
אַל־תִּבְטְחוּ לָכֶם אֶל־דִּבְרֵי הַשֶּׁקֶר לֵאמֹר הֵיכַל יְהֹוָה הֵיכַל יְהֹוָה הֵיכַל יְהֹוָה הֵֽמָּה׃
5 ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;
כִּי אִם־הֵיטֵיב תֵּיטִיבוּ אֶת־דַּרְכֵיכֶם וְאֶת־מַעַלְלֵיכֶם אִם־עָשׂוֹ תַֽעֲשׂוּ מִשְׁפָּט בֵּין אִישׁ וּבֵין רֵעֵֽהוּ׃
6 ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;
גֵּר יָתוֹם וְאַלְמָנָה לֹא תַעֲשֹׁקוּ וְדָם נָקִי אַֽל־תִּשְׁפְּכוּ בַּמָּקוֹם הַזֶּה וְאַחֲרֵי אֱלֹהִים אֲחֵרִים לֹא תֵלְכוּ לְרַע לָכֶֽם׃
7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
וְשִׁכַּנְתִּי אֶתְכֶם בַּמָּקוֹם הַזֶּה בָּאָרֶץ אֲשֶׁר נָתַתִּי לַאֲבוֹתֵיכֶם לְמִן־עוֹלָם וְעַד־עוֹלָֽם׃
8 ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
הִנֵּה אַתֶּם בֹּטְחִים לָכֶם עַל־דִּבְרֵי הַשָּׁקֶר לְבִלְתִּי הוֹעִֽיל׃
9 “‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,
הֲגָנֹב ׀ רָצֹחַ וְֽנָאֹף וְהִשָּׁבֵעַ לַשֶּׁקֶר וְקַטֵּר לַבָּעַל וְהָלֹךְ אַחֲרֵי אֱלֹהִים אֲחֵרִים אֲשֶׁר לֹֽא־יְדַעְתֶּֽם׃
10 ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?
וּבָאתֶם וַעֲמַדְתֶּם לְפָנַי בַּבַּיִת הַזֶּה אֲשֶׁר נִקְרָֽא־שְׁמִי עָלָיו וַאֲמַרְתֶּם נִצַּלְנוּ לְמַעַן עֲשׂוֹת אֵת כׇּל־הַתּוֹעֵבוֹת הָאֵֽלֶּה׃
11 ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.
הַֽמְעָרַת פָּרִצִים הָיָה הַבַּיִת הַזֶּה אֲשֶׁר־נִקְרָֽא־שְׁמִי עָלָיו בְּעֵינֵיכֶם גַּם אָנֹכִי הִנֵּה רָאִיתִי נְאֻם־יְהֹוָֽה׃
12 “‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
כִּי לְכוּ־נָא אֶל־מְקוֹמִי אֲשֶׁר בְּשִׁילוֹ אֲשֶׁר שִׁכַּנְתִּֽי שְׁמִי שָׁם בָּרִֽאשׁוֹנָה וּרְאוּ אֵת אֲשֶׁר־עָשִׂיתִי לוֹ מִפְּנֵי רָעַת עַמִּי יִשְׂרָאֵֽל׃
13 ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.
וְעַתָּה יַעַן עֲשׂוֹתְכֶם אֶת־כׇּל־הַמַּעֲשִׂים הָאֵלֶּה נְאֻם־יְהֹוָה וָאֲדַבֵּר אֲלֵיכֶם הַשְׁכֵּם וְדַבֵּר וְלֹא שְׁמַעְתֶּם וָאֶקְרָא אֶתְכֶם וְלֹא עֲנִיתֶֽם׃
14 ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.
וְעָשִׂיתִי לַבַּיִת ׀ אֲשֶׁר נִֽקְרָא־שְׁמִי עָלָיו אֲשֶׁר אַתֶּם בֹּטְחִים בּוֹ וְלַמָּקוֹם אֲשֶׁר־נָתַתִּי לָכֶם וְלַאֲבוֹתֵיכֶם כַּאֲשֶׁר עָשִׂיתִי לְשִׁלֽוֹ׃
15 ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’
וְהִשְׁלַכְתִּי אֶתְכֶם מֵעַל פָּנָי כַּאֲשֶׁר הִשְׁלַכְתִּי אֶת־כׇּל־אֲחֵיכֶם אֵת כׇּל־זֶרַע אֶפְרָֽיִם׃
16 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.
וְאַתָּה אַל־תִּתְפַּלֵּל ׀ בְּעַד־הָעָם הַזֶּה וְאַל־תִּשָּׂא בַעֲדָם רִנָּה וּתְפִלָּה וְאַל־תִּפְגַּע־בִּי כִּֽי־אֵינֶנִּי שֹׁמֵעַ אֹתָֽךְ׃
17 ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ?
הַאֵינְךָ רֹאֶה מָה הֵמָּה עֹשִׂים בְּעָרֵי יְהוּדָה וּבְחֻצוֹת יְרֽוּשָׁלָֽ͏ִם׃
18 ‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”
הַבָּנִים מְלַקְּטִים עֵצִים וְהָאָבוֹת מְבַעֲרִים אֶת־הָאֵשׁ וְהַנָּשִׁים לָשׁוֹת בָּצֵק לַעֲשׂוֹת כַּוָּנִים לִמְלֶכֶת הַשָּׁמַיִם וְהַסֵּךְ נְסָכִים לֵאלֹהִים אֲחֵרִים לְמַעַן הַכְעִסֵֽנִי׃
19 ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”
הַאֹתִי הֵם מַכְעִסִים נְאֻם־יְהֹוָה הֲלוֹא אֹתָם לְמַעַן בֹּשֶׁת פְּנֵיהֶֽם׃
20 “‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.
לָכֵן כֹּה־אָמַר ׀ אֲדֹנָי יֱהֹוִה הִנֵּה אַפִּי וַחֲמָתִי נִתֶּכֶת אֶל־הַמָּקוֹם הַזֶּה עַל־הָאָדָם וְעַל־הַבְּהֵמָה וְעַל־עֵץ הַשָּׂדֶה וְעַל־פְּרִי הָאֲדָמָה וּבָעֲרָה וְלֹא תִכְבֶּֽה׃
21 “‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.
כֹּה אָמַר יְהֹוָה צְבָאוֹת אֱלֹהֵי יִשְׂרָאֵל עֹלוֹתֵיכֶם סְפוּ עַל־זִבְחֵיכֶם וְאִכְלוּ בָשָֽׂר׃
22 ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
כִּי לֹֽא־דִבַּרְתִּי אֶת־אֲבֽוֹתֵיכֶם וְלֹא צִוִּיתִים בְּיוֹם (הוציא) [הוֹצִיאִי] אוֹתָם מֵאֶרֶץ מִצְרָיִם עַל־דִּבְרֵי עוֹלָה וָזָֽבַח׃
23 ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.
כִּי אִֽם־אֶת־הַדָּבָר הַזֶּה צִוִּיתִי אוֹתָם לֵאמֹר שִׁמְעוּ בְקוֹלִי וְהָיִיתִי לָכֶם לֵֽאלֹהִים וְאַתֶּם תִּֽהְיוּ־לִי לְעָם וַהֲלַכְתֶּם בְּכׇל־הַדֶּרֶךְ אֲשֶׁר אֲצַוֶּה אֶתְכֶם לְמַעַן יִיטַב לָכֶֽם׃
24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
וְלֹא שָֽׁמְעוּ וְלֹא־הִטּוּ אֶת־אׇזְנָם וַיֵּֽלְכוּ בְּמֹעֵצוֹת בִּשְׁרִרוּת לִבָּם הָרָע וַיִּהְיוּ לְאָחוֹר וְלֹא לְפָנִֽים׃
25 ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.
לְמִן־הַיּוֹם אֲשֶׁר יָצְאוּ אֲבֽוֹתֵיכֶם מֵאֶרֶץ מִצְרַיִם עַד הַיּוֹם הַזֶּה וָאֶשְׁלַח אֲלֵיכֶם אֶת־כׇּל־עֲבָדַי הַנְּבִיאִים יוֹם הַשְׁכֵּם וְשָׁלֹֽחַ׃
26 ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’
וְלוֹא שָֽׁמְעוּ אֵלַי וְלֹא הִטּוּ אֶת־אׇזְנָם וַיַּקְשׁוּ אֶת־עׇרְפָּם הֵרֵעוּ מֵאֲבוֹתָֽם׃
27 “ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.
וְדִבַּרְתָּ אֲלֵיהֶם אֶת־כׇּל־הַדְּבָרִים הָאֵלֶּה וְלֹא יִשְׁמְעוּ אֵלֶיךָ וְקָרָאתָ אֲלֵיהֶם וְלֹא יַעֲנֽוּכָה׃
28 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.
וְאָמַרְתָּ אֲלֵיהֶם זֶה הַגּוֹי אֲשֶׁר לֽוֹא־שָׁמְעוּ בְּקוֹל יְהֹוָה אֱלֹהָיו וְלֹא לָקְחוּ מוּסָר אָֽבְדָה הָאֱמוּנָה וְנִכְרְתָה מִפִּיהֶֽם׃
29 “‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.
גׇּזִּי נִזְרֵךְ וְֽהַשְׁלִיכִי וּשְׂאִי עַל־שְׁפָיִם קִינָה כִּי מָאַס יְהֹוָה וַיִּטֹּשׁ אֶת־דּוֹר עֶבְרָתֽוֹ׃
30 “‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.
כִּי־עָשׂוּ בְנֵֽי־יְהוּדָה הָרַע בְּעֵינַי נְאֻם־יְהֹוָה שָׂמוּ שִׁקּוּצֵיהֶם בַּבַּיִת אֲשֶׁר־נִקְרָֽא־שְׁמִי עָלָיו לְטַמְּאֽוֹ׃
31 ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
וּבָנוּ בָּמוֹת הַתֹּפֶת אֲשֶׁר בְּגֵיא בֶן־הִנֹּם לִשְׂרֹף אֶת־בְּנֵיהֶם וְאֶת־בְּנֹתֵיהֶם בָּאֵשׁ אֲשֶׁר לֹא צִוִּיתִי וְלֹא עָלְתָה עַל־לִבִּֽי׃
32 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.
לָכֵן הִנֵּֽה־יָמִים בָּאִים נְאֻם־יְהֹוָה וְלֹא־יֵאָמֵר עוֹד הַתֹּפֶת וְגֵיא בֶן־הִנֹּם כִּי אִם־גֵּיא הַהֲרֵגָה וְקָבְרוּ בְתֹפֶת מֵאֵין מָקֽוֹם׃
33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.
וְֽהָיְתָה נִבְלַת הָעָם הַזֶּה לְמַֽאֲכָל לְעוֹף הַשָּׁמַיִם וּלְבֶהֱמַת הָאָרֶץ וְאֵין מַחֲרִֽיד׃
34 ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.
וְהִשְׁבַּתִּי ׀ מֵֽעָרֵי יְהוּדָה וּמֵֽחֻצוֹת יְרוּשָׁלַ͏ִם קוֹל שָׂשׂוֹן וְקוֹל שִׂמְחָה קוֹל חָתָן וְקוֹל כַּלָּה כִּי לְחׇרְבָּה תִּֽהְיֶה הָאָֽרֶץ׃

< ಯೆರೆಮೀಯನು 7 >