< ಯೆರೆಮೀಯನು 8 >

1 “‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.
בָּעֵ֣ת הַהִ֣יא נְאֻם־יְהוָ֡ה וְיֹצִיאוּ (יֹוצִ֣יאוּ) אֶת־עַצְמֹ֣ות מַלְכֵֽי־יְהוּדָ֣ה וְאֶת־עַצְמֹות־שָׂרָיו֩ וְאֶת־עַצְמֹ֨ות הַכֹּהֲנִ֜ים וְאֵ֣ת ׀ עַצְמֹ֣ות הַנְּבִיאִ֗ים וְאֵ֛ת עַצְמֹ֥ות יֹושְׁבֵֽי־יְרוּשָׁלָ֖͏ִם מִקִּבְרֵיהֶֽם׃
2 ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.
וּשְׁטָחוּם֩ לַשֶּׁ֨מֶשׁ וְלַיָּרֵ֜חַ וּלְכֹ֣ל ׀ צְבָ֣א הַשָּׁמַ֗יִם אֲשֶׁ֨ר אֲהֵב֜וּם וַאֲשֶׁ֤ר עֲבָדוּם֙ וַֽאֲשֶׁר֙ הָלְכ֣וּ אַֽחֲרֵיהֶ֔ם וַאֲשֶׁ֣ר דְּרָשׁ֔וּם וַאֲשֶׁ֥ר הִֽשְׁתַּחֲו֖וּ לָהֶ֑ם לֹ֤א יֵאָֽסְפוּ֙ וְלֹ֣א יִקָּבֵ֔רוּ לְדֹ֛מֶן עַל־פְּנֵ֥י הָאֲדָמָ֖ה יִֽהְיֽוּ׃
3 ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’
וְנִבְחַ֥ר מָ֙וֶת֙ מֵֽחַיִּי֔ם לְכֹ֗ל הַשְּׁאֵרִית֙ הַנִּשְׁאָרִ֔ים מִן־הַמִּשְׁפָּחָ֥ה הָֽרָעָ֖ה הַזֹּ֑את בְּכָל־הַמְּקֹמֹ֤ות הַנִּשְׁאָרִים֙ אֲשֶׁ֣ר הִדַּחְתִּ֣ים שָׁ֔ם נְאֻ֖ם יְהוָ֥ה צְבָאֹֽות׃ ס
4 “ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?
וְאָמַרְתָּ֣ אֲלֵיהֶ֗ם כֹּ֚ה אָמַ֣ר יְהוָ֔ה הֲיִפְּל֖וּ וְלֹ֣א יָק֑וּמוּ אִם־יָשׁ֖וּב וְלֹ֥א יָשֽׁוּב׃
5 ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.
מַדּ֨וּעַ שֹׁובְבָ֜ה הָעָ֥ם הַזֶּ֛ה יְרוּשָׁלַ֖͏ִם מְשֻׁבָ֣ה נִצַּ֑חַת הֶחֱזִ֙יקוּ֙ בַּתַּרְמִ֔ית מֵאֲנ֖וּ לָשֽׁוּב׃
6 ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
הִקְשַׁ֤בְתִּי וָֽאֶשְׁמָע֙ לֹוא־כֵ֣ן יְדַבֵּ֔רוּ אֵ֣ין אִ֗ישׁ נִחָם֙ עַל־רָ֣עָתֹ֔ו לֵאמֹ֖ר מֶ֣ה עָשִׂ֑יתִי כֻּלֹּ֗ה שָׁ֚ב בִּמְרֻצֹותָם (בִּמְר֣וּצָתָ֔ם) כְּס֥וּס שֹׁוטֵ֖ף בַּמִּלְחָמָֽה׃
7 ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.
גַּם־חֲסִידָ֣ה בַשָּׁמַ֗יִם יָֽדְעָה֙ מֹֽועֲדֶ֔יהָ וְתֹ֤ר וְסוּס (וְסִיס֙) וְעָג֗וּר שָׁמְר֖וּ אֶת־עֵ֣ת בֹּאָ֑נָה וְעַמִּ֕י לֹ֣א יָֽדְע֔וּ אֵ֖ת מִשְׁפַּ֥ט יְהוָֽה׃
8 “‘“ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.
אֵיכָ֤ה תֹֽאמְרוּ֙ חֲכָמִ֣ים אֲנַ֔חְנוּ וְתֹורַ֥ת יְהוָ֖ה אִתָּ֑נוּ אָכֵן֙ הִנֵּ֣ה לַשֶּׁ֣קֶר עָשָׂ֔ה עֵ֖ט שֶׁ֥קֶר סֹפְרִֽים׃
9 ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.
הֹבִ֣ישׁוּ חֲכָמִ֔ים חַ֖תּוּ וַיִּלָּכֵ֑דוּ הִנֵּ֤ה בִדְבַר־יְהוָה֙ מָאָ֔סוּ וְחָכְמַֽת־מֶ֖ה לָהֶֽם׃ ס
10 ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.
לָכֵן֩ אֶתֵּ֨ן אֶת־נְשֵׁיהֶ֜ם לַאֲחֵרִ֗ים שְׂדֹֽותֵיהֶם֙ לְיֹ֣ורְשִׁ֔ים כִּ֤י מִקָּטֹן֙ וְעַד־גָּדֹ֔ול כֻּלֹּ֖ה בֹּצֵ֣עַ בָּ֑צַע מִנָּבִיא֙ וְעַד־כֹּהֵ֔ן כֻּלֹּ֖ה עֹ֥שֶׂה שָּֽׁקֶר׃
11 ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.
וַיְרַפּ֞וּ אֶת־שֶׁ֤בֶר בַּת־עַמִּי֙ עַל־נְקַלָּ֔ה לֵאמֹ֖ר שָׁלֹ֣ום ׀ שָׁלֹ֑ום וְאֵ֖ין שָׁלֹֽום׃
12 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.
הֹבִ֕שׁוּ כִּ֥י תֹועֵבָ֖ה עָשׂ֑וּ גַּם־בֹּ֣ושׁ לֹֽא־יֵבֹ֗שׁוּ וְהִכָּלֵם֙ לֹ֣א יָדָ֔עוּ לָכֵ֞ן יִפְּל֣וּ בַנֹּפְלִ֗ים בְּעֵ֧ת פְּקֻדָּתָ֛ם יִכָּשְׁל֖וּ אָמַ֥ר יְהוָֽה׃ ס
13 “‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’”
אָסֹ֥ף אֲסִיפֵ֖ם נְאֻם־יְהֹוָ֑ה אֵין֩ עֲנָבִ֨ים בַּגֶּ֜פֶן וְאֵ֧ין תְּאֵנִ֣ים בַּתְּאֵנָ֗ה וְהֶֽעָלֶה֙ נָבֵ֔ל וָאֶתֵּ֥ן לָהֶ֖ם יַעַבְרֽוּם׃
14 ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
עַל־מָה֙ אֲנַ֣חְנוּ יֹֽשְׁבִ֔ים הֵֽאָסְפ֗וּ וְנָבֹ֛וא אֶל־עָרֵ֥י הַמִּבְצָ֖ר וְנִדְּמָה־שָּׁ֑ם כִּי֩ יְהוָ֨ה אֱלֹהֵ֤ינוּ הֲדִמָּ֙נוּ֙ וַיַּשְׁקֵ֣נוּ מֵי־רֹ֔אשׁ כִּ֥י חָטָ֖אנוּ לַיהוָֽה׃
15 ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.
קַוֵּ֥ה לְשָׁלֹ֖ום וְאֵ֣ין טֹ֑וב לְעֵ֥ת מַרְפֵּ֖ה וְהִנֵּ֥ה בְעָתָֽה׃
16 ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.
מִדָּ֤ן נִשְׁמַע֙ נַחְרַ֣ת סוּסָ֗יו מִקֹּול֙ מִצְהֲלֹ֣ות אַבִּירָ֔יו רָעֲשָׁ֖ה כָּל־הָאָ֑רֶץ וַיָּבֹ֗ואוּ וַיֹּֽאכְלוּ֙ אֶ֣רֶץ וּמְלֹואָ֔הּ עִ֖יר וְיֹ֥שְׁבֵי בָֽהּ׃ ס
17 “ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.
כִּי֩ הִנְנִ֨י מְשַׁלֵּ֜חַ בָּכֶ֗ם נְחָשִׁים֙ צִפְעֹנִ֔ים אֲשֶׁ֥ר אֵין־לָהֶ֖ם לָ֑חַשׁ וְנִשְּׁכ֥וּ אֶתְכֶ֖ם נְאֻם־יְהוָֽה׃ ס
18 ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.
מַבְלִ֥יגִיתִ֖י עֲלֵ֣י יָגֹ֑ון עָלַ֖י לִבִּ֥י דַוָּֽי׃
19 ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?
הִנֵּה־קֹ֞ול שַֽׁוְעַ֣ת בַּת־עַמִּ֗י מֵאֶ֙רֶץ֙ מַרְחַקִּ֔ים הַֽיהוָה֙ אֵ֣ין בְּצִיֹּ֔ון אִם־מַלְכָּ֖הּ אֵ֣ין בָּ֑הּ מַדּ֗וּעַ הִכְעִס֛וּנִי בִּפְסִלֵיהֶ֖ם בְּהַבְלֵ֥י נֵכָֽר׃
20 “ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”
עָבַ֥ר קָצִ֖יר כָּ֣לָה קָ֑יִץ וַאֲנַ֖חְנוּ לֹ֥וא נֹושָֽׁעְנוּ׃
21 ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.
עַל־שֶׁ֥בֶר בַּת־עַמִּ֖י הָשְׁבָּ֑רְתִּי קָדַ֕רְתִּי שַׁמָּ֖ה הֶחֱזִקָֽתְנִי׃
22 ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?
הַצֳרִי֙ אֵ֣ין בְּגִלְעָ֔ד אִם־רֹפֵ֖א אֵ֣ין שָׁ֑ם כִּ֗י מַדּ֙וּעַ֙ לֹ֣א עָֽלְתָ֔ה אֲרֻכַ֖ת בַּת־עַמִּֽי׃

< ಯೆರೆಮೀಯನು 8 >