< ಯೆರೆಮೀಯನು 9 >

1 ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.
מִֽי־יִתֵּן רֹאשִׁי מַיִם וְעֵינִי מְקוֹר דִּמְעָה וְאֶבְכֶּה יוֹמָם וָלַיְלָה אֵת חַֽלְלֵי בַת־עַמִּֽי׃
2 ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.
מִֽי־יִתְּנֵנִי בַמִּדְבָּר מְלוֹן אֹֽרְחִים וְאֶֽעֶזְבָה אֶת־עַמִּי וְאֵלְכָה מֵֽאִתָּם כִּי כֻלָּם מְנָאֲפִים עֲצֶרֶת בֹּגְדִֽים׃
3 “ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
וַֽיַּדְרְכוּ אֶת־לְשׁוֹנָם קַשְׁתָּם שֶׁקֶר וְלֹא לֶאֱמוּנָה גָּבְרוּ בָאָרֶץ כִּי מֵרָעָה אֶל־רָעָה ׀ יָצָאוּ וְאֹתִי לֹֽא־יָדָעוּ נְאֻם־יְהוָֽה׃
4 “ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.
אִישׁ מֵרֵעֵהוּ הִשָּׁמֵרוּ וְעַל־כָּל־אָח אַל־תִּבְטָחוּ כִּי כָל־אָח עָקוֹב יַעְקֹב וְכָל־רֵעַ רָכִיל יַהֲלֹֽךְ׃
5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.
וְאִישׁ בְּרֵעֵהוּ יְהָתֵלּוּ וֶאֱמֶת לֹא יְדַבֵּרוּ לִמְּדוּ לְשׁוֹנָם דַּבֶּר־שֶׁקֶר הַעֲוֵה נִלְאֽוּ׃
6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
שִׁבְתְּךָ בְּתוֹךְ מִרְמָה בְּמִרְמָה מֵאֲנוּ דַֽעַת־אוֹתִי נְאֻם־יְהוָֽה׃
7 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?
לָכֵן כֹּה אָמַר יְהוָה צְבָאוֹת הִנְנִי צוֹרְפָם וּבְחַנְתִּים כִּֽי־אֵיךְ אֶעֱשֶׂה מִפְּנֵי בַּת־עַמִּֽי׃
8 ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.
חֵץ שוחט שָׁחוּט לְשׁוֹנָם מִרְמָה דִבֵּר בְּפִיו שָׁלוֹם אֶת־רֵעֵהוּ יְדַבֵּר וּבְקִרְבּוֹ יָשִׂים אָרְבּֽוֹ׃
9 ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”
הַעַל־אֵלֶּה לֹֽא־אֶפְקָד־בָּם נְאֻם־יְהוָה אִם בְּגוֹי אֲשֶׁר־כָּזֶה לֹא תִתְנַקֵּם נַפְשִֽׁי׃
10 ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.
עַל־הֶהָרִים אֶשָּׂא בְכִי וָנֶהִי וְעַל־נְאוֹת מִדְבָּר קִינָה כִּי נִצְּתוּ מִבְּלִי־אִישׁ עֹבֵר וְלֹא שָׁמְעוּ קוֹל מִקְנֶה מֵעוֹף הַשָּׁמַיִם וְעַד־בְּהֵמָה נָדְדוּ הָלָֽכוּ׃
11 ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.
וְנָתַתִּי אֶת־יְרוּשָׁלַ͏ִם לְגַלִּים מְעוֹן תַּנִּים וְאֶת־עָרֵי יְהוּדָה אֶתֵּן שְׁמָמָה מִבְּלִי יוֹשֵֽׁב׃
12 ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?
מִֽי־הָאִישׁ הֶֽחָכָם וְיָבֵן אֶת־זֹאת וַאֲשֶׁר דִּבֶּר פִּֽי־יְהוָה אֵלָיו וְיַגִּדָהּ עַל־מָה אָבְדָה הָאָרֶץ נִצְּתָה כַמִּדְבָּר מִבְּלִי עֹבֵֽר׃
13 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,
וַיֹּאמֶר יְהוָה עַל־עָזְבָם אֶת־תּוֹרָתִי אֲשֶׁר נָתַתִּי לִפְנֵיהֶם וְלֹא־שָׁמְעוּ בְקוֹלִי וְלֹא־הָלְכוּ בָֽהּ׃
14 ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”
וַיֵּלְכוּ אַחֲרֵי שְׁרִרוּת לִבָּם וְאַחֲרֵי הַבְּעָלִים אֲשֶׁר לִמְּדוּם אֲבוֹתָֽם׃
15 ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.
לָכֵן כֹּֽה־אָמַר יְהוָה צְבָאוֹת אֱלֹהֵי יִשְׂרָאֵל הִנְנִי מַאֲכִילָם אֶת־הָעָם הַזֶּה לַֽעֲנָה וְהִשְׁקִיתִים מֵי־רֹֽאשׁ׃
16 ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”
וַהֲפִֽצוֹתִים בַּגּוֹיִם אֲשֶׁר לֹא יָֽדְעוּ הֵמָּה וַֽאֲבוֹתָם וְשִׁלַּחְתִּי אַֽחֲרֵיהֶם אֶת־הַחֶרֶב עַד כַּלּוֹתִי אוֹתָֽם׃
17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.
כֹּה אָמַר יְהוָה צְבָאוֹת הִתְבּֽוֹנְנוּ וְקִרְאוּ לַמְקוֹנְנוֹת וּתְבוֹאֶינָה וְאֶל־הַחֲכָמוֹת שִׁלְחוּ וְתָבֽוֹאנָה׃
18 ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
וּתְמַהֵרְנָה וְתִשֶּׂנָה עָלֵינוּ נֶהִי וְתֵרַדְנָה עֵינֵינוּ דִּמְעָה וְעַפְעַפֵּינוּ יִזְּלוּ־מָֽיִם׃
19 ‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’”
כִּי קוֹל נְהִי נִשְׁמַע מִצִיּוֹן אֵיךְ שֻׁדָּדְנוּ בֹּשְׁנֽוּ מְאֹד כִּֽי־עָזַבְנוּ אָרֶץ כִּי הִשְׁלִיכוּ מִשְׁכְּנוֹתֵֽינוּ׃
20 ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
כִּֽי־שְׁמַעְנָה נָשִׁים דְּבַר־יְהוָה וְתִקַּח אָזְנְכֶם דְּבַר־פִּיו וְלַמֵּדְנָה בְנֽוֹתֵיכֶם נֶהִי וְאִשָּׁה רְעוּתָהּ קִינָֽה׃
21 ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.
כִּֽי־עָלָה מָוֶת בְּחַלּוֹנֵינוּ בָּא בְּאַרְמְנוֹתֵינוּ לְהַכְרִית עוֹלָל מִחוּץ בַּחוּרִים מֵרְחֹבֽוֹת׃
22 ಯೆಹೋವ ದೇವರು ನನಗೆ ಹೀಗೆಂದರು: “‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’”
דַּבֵּר כֹּה נְאֻם־יְהוָה וְנָֽפְלָה נִבְלַת הָֽאָדָם כְּדֹמֶן עַל־פְּנֵי הַשָּׂדֶה וּכְעָמִיר מֵאַחֲרֵי הַקֹּצֵר וְאֵין מְאַסֵּֽף׃
23 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.
כֹּה ׀ אָמַר יְהוָה אַל־יִתְהַלֵּל חָכָם בְּחָכְמָתוֹ וְאַל־יִתְהַלֵּל הַגִּבּוֹר בִּגְבֽוּרָתוֹ אַל־יִתְהַלֵּל עָשִׁיר בְּעָשְׁרֽוֹ׃
24 ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
כִּי אִם־בְּזֹאת יִתְהַלֵּל הַמִּתְהַלֵּל הַשְׂכֵּל וְיָדֹעַ אוֹתִי כִּי אֲנִי יְהוָה עֹשֶׂה חֶסֶד מִשְׁפָּט וּצְדָקָה בָּאָרֶץ כִּֽי־בְאֵלֶּה חָפַצְתִּי נְאֻם־יְהוָֽה׃
25 “ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
הִנֵּה יָמִים בָּאִים נְאֻם־יְהוָה וּפָקַדְתִּי עַל־כָּל־מוּל בְּעָרְלָֽה׃
עַל־מִצְרַיִם וְעַל־יְהוּדָה וְעַל־אֱדוֹם וְעַל־בְּנֵי עַמּוֹן וְעַל־מוֹאָב וְעַל כָּל־קְצוּצֵי פֵאָה הַיֹּשְׁבִים בַּמִּדְבָּר כִּי כָל־הַגּוֹיִם עֲרֵלִים וְכָל־בֵּית יִשְׂרָאֵל עַרְלֵי־לֵֽב׃

< ಯೆರೆಮೀಯನು 9 >