< ಯೆರೆಮೀಯನು 1 >

1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
דִּבְרֵי יִרְמְיָהוּ בֶּן־חִלְקִיָּהוּ מִן־הַכֹּֽהֲנִים אֲשֶׁר בַּעֲנָתוֹת בְּאֶרֶץ בִּנְיָמִֽן׃
2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.
אֲשֶׁר הָיָה דְבַר־יְהוָה אֵלָיו בִּימֵי יֹאשִׁיָּהוּ בֶן־אָמוֹן מֶלֶךְ יְהוּדָה בִּשְׁלֹשׁ־עֶשְׂרֵה שָׁנָה לְמָלְכֽוֹ׃
3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.
וַיְהִי בִּימֵי יְהוֹיָקִים בֶּן־יֹאשִׁיָּהוּ מֶלֶךְ יְהוּדָה עַד־תֹּם עַשְׁתֵּי עֶשְׂרֵה שָׁנָה לְצִדְקִיָּהוּ בֶן־יֹאשִׁיָּהוּ מֶלֶךְ יְהוּדָה עַד־גְּלוֹת יְרוּשָׁלַ͏ִם בַּחֹדֶשׁ הַחֲמִישִֽׁי׃
4 ಯೆಹೋವ ದೇವರು ಈ ವಾಕ್ಯವನ್ನು ನನಗೆ ದಯಪಾಲಿಸಿದರು,
וַיְהִי דְבַר־יְהוָה אֵלַי לֵאמֹֽר׃
5 “ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”
בְּטֶרֶם אצורך אֶצָּרְךָ בַבֶּטֶן יְדַעְתִּיךָ וּבְטֶרֶם תֵּצֵא מֵרֶחֶם הִקְדַּשְׁתִּיךָ נָבִיא לַגּוֹיִם נְתַתִּֽיךָ׃
6 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.
וָאֹמַר אֲהָהּ אֲדֹנָי יְהֹוִה הִנֵּה לֹא־יָדַעְתִּי דַּבֵּר כִּי־נַעַר אָנֹֽכִי׃
7 ಆಗ ಯೆಹೋವ ದೇವರು ನನಗೆ, “‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.
וַיֹּאמֶר יְהוָה אֵלַי אַל־תֹּאמַר נַעַר אָנֹכִי כִּי עַֽל־כָּל־אֲשֶׁר אֽ͏ֶשְׁלָחֲךָ תֵּלֵךְ וְאֵת כָּל־אֲשֶׁר אֲצַוְּךָ תְּדַבֵּֽר׃
8 ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.
אַל־תִּירָא מִפְּנֵיהֶם כִּֽי־אִתְּךָ אֲנִי לְהַצִּלֶךָ נְאֻם־יְהוָֽה׃
9 ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
וַיִּשְׁלַח יְהוָה אֶת־יָדוֹ וַיַּגַּע עַל־פִּי וַיֹּאמֶר יְהוָה אֵלַי הִנֵּה נָתַתִּי דְבָרַי בְּפִֽיךָ׃
10 ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.
רְאֵה הִפְקַדְתִּיךָ ׀ הַיּוֹם הַזֶּה עַל־הַגּוֹיִם וְעַל־הַמַּמְלָכוֹת לִנְתוֹשׁ וְלִנְתוֹץ וּלְהַאֲבִיד וְלַהֲרוֹס לִבְנוֹת וְלִנְטֽוֹעַ׃
11 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.
וַיְהִי דְבַר־יְהוָה אֵלַי לֵאמֹר מָה־אַתָּה רֹאֶה יִרְמְיָהוּ וָאֹמַר מַקֵּל שָׁקֵד אֲנִי רֹאֶֽה׃
12 ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.
וַיֹּאמֶר יְהוָה אֵלַי הֵיטַבְתָּ לִרְאוֹת כִּֽי־שֹׁקֵד אֲנִי עַל־דְּבָרִי לַעֲשֹׂתֽוֹ׃
13 ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು.
וַיְהִי דְבַר־יְהוָה ׀ אֵלַי שֵׁנִית לֵאמֹר מָה אַתָּה רֹאֶה וָאֹמַר סִיר נָפוּחַ אֲנִי רֹאֶה וּפָנָיו מִפְּנֵי צָפֽוֹנָה׃
14 ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.
וַיֹּאמֶר יְהוָה אֵלָי מִצָּפוֹן תִּפָּתַח הָרָעָה עַל כָּל־יֹשְׁבֵי הָאָֽרֶץ׃
15 ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
כִּי ׀ הִנְנִי קֹרֵא לְכָֽל־מִשְׁפְּחוֹת מַמְלְכוֹת צָפוֹנָה נְאֻם־יְהוָה וּבָאוּ וְֽנָתְנוּ אִישׁ כִּסְאוֹ פֶּתַח ׀ שַׁעֲרֵי יְרוּשָׁלִַם וְעַל כָּל־חוֹמֹתֶיהָ סָבִיב וְעַל כָּל־עָרֵי יְהוּדָֽה׃
16 ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.
וְדִבַּרְתִּי מִשְׁפָּטַי אוֹתָם עַל כָּל־רָעָתָם אֲשֶׁר עֲזָבוּנִי וַֽיְקַטְּרוּ לֵאלֹהִים אֲחֵרִים וַיִּֽשְׁתַּחֲווּ לְמַעֲשֵׂי יְדֵיהֶֽם׃
17 “ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.
וְאַתָּה תֶּאְזֹר מָתְנֶיךָ וְקַמְתָּ וְדִבַּרְתָּ אֲלֵיהֶם אֵת כָּל־אֲשֶׁר אָנֹכִי אֲצַוֶּךָּ אַל־תֵּחַת מִפְּנֵיהֶם פֶּֽן־אֲחִתְּךָ לִפְנֵיהֶֽם׃
18 ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.
וַאֲנִי הִנֵּה נְתַתִּיךָ הַיּוֹם לְעִיר מִבְצָר וּלְעַמּוּד בַּרְזֶל וּלְחֹמוֹת נְחֹשֶׁת עַל־כָּל־הָאָרֶץ לְמַלְכֵי יְהוּדָה לְשָׂרֶיהָ לְכֹהֲנֶיהָ וּלְעַם הָאָֽרֶץ׃
19 ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.
וְנִלְחֲמוּ אֵלֶיךָ וְלֹא־יוּכְלוּ לָךְ כִּֽי־אִתְּךָ אֲנִי נְאֻם־יְהוָה לְהַצִּילֶֽךָ׃

< ಯೆರೆಮೀಯನು 1 >