< ಯೋಬನು 1 >

1 ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.
ऊस देश में अय्यूब नामक एक पुरुष था; वह खरा और सीधा था और परमेश्वर का भय मानता और बुराई से परे रहता था।
2 ಅವನಿಗೆ ಏಳುಮಂದಿ ಪುತ್ರರೂ ಮೂರು ಮಂದಿ ಪುತ್ರಿಯರೂ ಇದ್ದರು.
उसके सात बेटे और तीन बेटियाँ उत्पन्न हुई।
3 ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.
फिर उसके सात हजार भेड़-बकरियाँ, तीन हजार ऊँट, पाँच सौ जोड़ी बैल, और पाँच सौ गदहियाँ, और बहुत ही दास-दासियाँ थीं; वरन् उसके इतनी सम्पत्ति थी, कि पूर्वी देशों में वह सबसे बड़ा था।
4 ಅವನ ಪುತ್ರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸಿ, ತಮ್ಮ ಸಂಗಡ ಊಟಮಾಡುವದಕ್ಕೆ ತಮ್ಮ ಮೂವರು ಸಹೋದರಿಯರನ್ನು ಆಹ್ವಾನಿಸುತ್ತಿದ್ದರು.
उसके बेटे बारी-बारी से एक दूसरे के घर में खाने-पीने को जाया करते थे; और अपनी तीनों बहनों को अपने संग खाने-पीने के लिये बुलवा भेजते थे।
5 ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.
और जब जब दावत के दिन पूरे हो जाते, तब-तब अय्यूब उन्हें बुलवाकर पवित्र करता, और बड़ी भोर को उठकर उनकी गिनती के अनुसार होमबलि चढ़ाता था; क्योंकि अय्यूब सोचता था, “कदाचित् मेरे बच्चों ने पाप करके परमेश्वर को छोड़ दिया हो।” इसी रीति अय्यूब सदैव किया करता था।
6 ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.
एक दिन यहोवा परमेश्वर के पुत्र उसके सामने उपस्थित हुए, और उनके बीच शैतान भी आया।
7 ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.
यहोवा ने शैतान से पूछा, “तू कहाँ से आता है?” शैतान ने यहोवा को उत्तर दिया, “पृथ्वी पर इधर-उधर घूमते-फिरते और डोलते-डालते आया हूँ।”
8 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.
यहोवा ने शैतान से पूछा, “क्या तूने मेरे दास अय्यूब पर ध्यान दिया है? क्योंकि उसके तुल्य खरा और सीधा और मेरा भय माननेवाला और बुराई से दूर रहनेवाला मनुष्य और कोई नहीं है।”
9 ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ?
शैतान ने यहोवा को उत्तर दिया, “क्या अय्यूब परमेश्वर का भय बिना लाभ के मानता है?
10 ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.
१०क्या तूने उसकी, और उसके घर की, और जो कुछ उसका है उसके चारों ओर बाड़ा नहीं बाँधा? तूने तो उसके काम पर आशीष दी है, और उसकी सम्पत्ति देश भर में फैल गई है।
11 ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.
११परन्तु अब अपना हाथ बढ़ाकर जो कुछ उसका है, उसे छू; तब वह तेरे मुँह पर तेरी निन्दा करेगा।”
12 ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.
१२यहोवा ने शैतान से कहा, “सुन, जो कुछ उसका है, वह सब तेरे हाथ में है; केवल उसके शरीर पर हाथ न लगाना।” तब शैतान यहोवा के सामने से चला गया।
13 ಒಂದು ದಿನ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತಾ ಔತಣಮಾಡುತ್ತಿದ್ದರು.
१३एक दिन अय्यूब के बेटे-बेटियाँ बड़े भाई के घर में खाते और दाखमधु पी रहे थे;
14 ಒಬ್ಬ ದೂತನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುಮೆ ಮಾಡುತ್ತಾ ಇದ್ದವು. ಹೆಣ್ಣು ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.
१४तब एक दूत अय्यूब के पास आकर कहने लगा, “हम तो बैलों से हल जोत रहे थे और गदहियाँ उनके पास चर रही थीं
15 ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.
१५कि शेबा के लोग धावा करके उनको ले गए, और तलवार से तेरे सेवकों को मार डाला; और मैं ही अकेला बचकर तुझे समाचार देने को आया हूँ।”
16 ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.
१६वह अभी यह कह ही रहा था कि दूसरा भी आकर कहने लगा, “परमेश्वर की आग आकाश से गिरी और उससे भेड़-बकरियाँ और सेवक जलकर भस्म हो गए; और मैं ही अकेला बचकर तुझे समाचार देने को आया हूँ।”
17 ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.
१७वह अभी यह कह ही रहा था, कि एक और भी आकर कहने लगा, “कसदी लोग तीन दल बाँधकर ऊँटों पर धावा करके उन्हें ले गए, और तलवार से तेरे सेवकों को मार डाला; और मैं ही अकेला बचकर तुझे समाचार देने को आया हूँ।”
18 ಇವನು ಇನ್ನೂ ಮಾತನಾಡುತ್ತಿರಲು, ಮತ್ತೊಬ್ಬ ದೂತನು ಬಂದು, “ನಿನ್ನ ಪುತ್ರ ಪುತ್ರಿಯರೂ ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸ ಕಡಿಯುತ್ತಾ ಔತಣ ಮಾಡುತ್ತಿರುವಾಗ,
१८वह अभी यह कह ही रहा था, कि एक और भी आकर कहने लगा, “तेरे बेटे-बेटियाँ बड़े भाई के घर में खाते और दाखमधु पीते थे,
19 ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.
१९कि जंगल की ओर से बड़ी प्रचण्ड वायु चली, और घर के चारों कोनों को ऐसा झोंका मारा, कि वह जवानों पर गिर पड़ा और वे मर गए; और मैं ही अकेला बचकर तुझे समाचार देने को आया हूँ।”
20 ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,
२०तब अय्यूब उठा, और बागा फाड़, सिर मुँड़ाकर भूमि पर गिरा और दण्डवत् करके कहा,
21 ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”
२१“मैं अपनी माँ के पेट से नंगा निकला और वहीं नंगा लौट जाऊँगा; यहोवा ने दिया और यहोवा ही ने लिया; यहोवा का नाम धन्य है।”
22 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪು ಹೊರಿಸಲಿಲ್ಲ.
२२इन सब बातों में भी अय्यूब ने न तो पाप किया, और न परमेश्वर पर मूर्खता से दोष लगाया।

< ಯೋಬನು 1 >