< ಯೋಬನು 10 >
1 “ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು.
Mi sjæl er leid av livet mitt, eg gjev mi klaga lause taumar, vil tala i min såre hugverk.
2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.
Til Gud eg segjer: «Døm meg ikkje; seg kvifor du imot meg strider!
3 ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?
Finn du det godt å gjera vald, og øyda upp ditt eige verk, men lysa yver gudlaust råd?
4 ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ?
Er auga ditt av kjøt og blod? Ser du som menneskje plar sjå?
5 ದೇವರೇ, ನಿಮ್ಮ ದಿನಗಳು ಮನುಷ್ಯರ ದಿನಗಳ ಹಾಗಿವೆಯೋ? ನಿಮ್ಮ ವರ್ಷಗಳು ಮನುಷ್ಯರ ವರ್ಷಗಳಂತಿವೆಯೋ?
Er dine dagar mennesk-dagar? Er dine år lik mannsens år?
6 ಏಕೆಂದರೆ ನನ್ನ ತಪ್ಪುಗಳನ್ನು ಹುಡುಕುವ ನಿಮಗೆ ಗೊತ್ತಿದೆ; ಹೌದು, ನನ್ನ ಪಾಪವನ್ನು ವಿಚಾರಿಸುವ ನಿಮಗೇ ಗೊತ್ತಿದೆ.
Med di mitt brot du leitar upp, og granskar etter syndi mi,
7 ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?
endå du veit eg er uskuldig, og ingen bergar or di hand.
8 “ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?
Di hand hev skapt og dana meg fullt ut, og no vil du meg tyna?
9 ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?
Hugs på, du forma meg som leir; no gjer du atter meg til mold!
10 ನೀವು ಹಾಲಿನಂತೆ ನನ್ನನ್ನು ಸುರಿಸಲಿಲ್ಲವೋ? ಮೊಸರಿನ ಹಾಗೆ ಹೆಪ್ಪುಗಟ್ಟಿಸಲಿಲ್ಲವೋ?
Som mjølk du let meg renna ut og let meg stivna liksom ost;
11 ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ; ನೀವು ಎಲುಬು ನರಗಳಿಂದಲೂ ನನ್ನನ್ನು ಹೆಣೆದಿರುವಿರಿ.
Du klædde meg med hud og kjøt, fleitta bein og senar saman.
12 ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ.
Du gav meg både liv og miskunn, og verna um mitt andedrag.
13 “ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:
Men dette du i hjarta gøymde, eg veit det var i din tanke;
14 ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.
Du vakta på meg um eg synda; du gav meg ikkje til mitt brot;
15 ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.
um eg var skuldig, usæl eg! Um skuldfri, tord’ eg ei meg briska, av skjemsla mett, med naud for augom;
16 ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.
For då du jaga meg som løva og let meg atter under sjå,
17 ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ.
du førde nye vitne mot meg og harmast endå meir på meg og sende mot meg her på her.
18 “ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ? ಯಾರೂ ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
Kvi drog du meg or morsliv fram? Kvi fekk eg ikkje usedd døy,
19 ನಾನು ಬದುಕಿರದೇ, ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.
lik ein som aldri til hev vore, og vart i grav frå morsliv lagt?
20 ನನ್ನ ಅಲ್ಪದಿನಗಳು ಮುಗಿದಿಲ್ಲವೋ? ಸ್ವಲ್ಪ ಹೊತ್ತು ಆನಂದಿಸಲು ನನ್ನನ್ನು ಬಿಟ್ಟುಬಿಡಿರಿ.
Er ikkje mine dagar få? Haldt upp! Slepp meg, so eg litt glad kann verta,
21 ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.
fyrr eg gjeng burt, og kjem’kje att, til myrkre land med daudeskugge,
22 ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”
eit land so myrkt som svarte natti, med daudeskugge og vanskipnad, der dagsljoset er som myrke natt!»»