< ಯೋಬನು 11 >
1 ಆಗ ನಾಮಾಥ್ಯನಾದ ಚೋಫರನು ಹೀಗೆಂದನು:
拿瑪人瑣法回答說:
2 “ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ?
這許多的言語豈不該回答嗎? 多嘴多舌的人豈可稱為義嗎?
3 ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ಖಂಡಿಸುವುದಿಲ್ಲವೋ?
你誇大的話豈能使人不作聲嗎? 你戲笑的時候豈沒有人叫你害羞嗎?
4 ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.
你說:我的道理純全; 我在你眼前潔淨。
5 ಆಹಾ, ದೇವರು ಮಾತನಾಡಿ, ನಿನ್ನ ವಿರೋಧವಾಗಿ ತಮ್ಮ ತುಟಿಗಳನ್ನು ತೆರೆದು,
惟願上帝說話; 願他開口攻擊你,
6 ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.
並將智慧的奧祕指示你; 他有諸般的智識。 所以當知道上帝追討你 比你罪孽該得的還少。
7 “ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?
你考察就能測透上帝嗎? 你豈能盡情測透全能者嗎?
8 ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ? (Sheol )
他的智慧高於天,你還能做甚麼? 深於陰間,你還能知道甚麼? (Sheol )
9 ಅದರ ಅಳತೆ ಭೂಮಿಗಿಂತ ಉದ್ದವೂ, ಸಮುದ್ರಕ್ಕಿಂತ ಅಗಲವೂ ಆಗಿದೆ.
其量比地長, 比海寬。
10 “ದೇವರು ಬಂದು ನಿನ್ನನ್ನು ಸೆರೆಮನೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ, ದೇವರನ್ನು ತಡೆಯುವವರು ಯಾರು?
他若經過,將人拘禁, 招人受審,誰能阻擋他呢?
11 ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?
他本知道虛妄的人; 人的罪孽,他雖不留意,還是無所不見。
12 ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.
空虛的人卻毫無知識; 人生在世好像野驢的駒子。
13 “ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,
你若將心安正, 又向主舉手;
14 ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,
你手裏若有罪孽, 就當遠遠地除掉, 也不容非義住在你帳棚之中。
15 ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ.
那時,你必仰起臉來毫無斑點; 你也必堅固,無所懼怕。
16 ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
你必忘記你的苦楚, 就是想起也如流過去的水一樣。
17 ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.
你在世的日子要比正午更明, 雖有黑暗仍像早晨。
18 ನೀನು ನಿರೀಕ್ಷೆ ಇದೆ ಎಂದು ಭರವಸೆಯಿಂದ ಇರುವಿ; ನೀನು ನಿನ್ನ ಬಗ್ಗೆ ಯೋಚಿಸಿ ಭರವಸೆಯಿಂದ ವಿಶ್ರಾಂತಿ ತೆಗೆದುಕೊಳ್ಳುವಿ.
你因有指望就必穩固, 也必四圍巡查,坦然安息。
19 ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು.
你躺臥,無人驚嚇, 且有許多人向你求恩。
20 ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”
但惡人的眼目必要失明。 他們無路可逃; 他們的指望就是氣絕。