< ಯೋಬನು 13 >

1 “ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿದೆ.
הן-כל ראתה עיני שמעה אזני ותבן לה
2 ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
כדעתכם ידעתי גם-אני לא-נפל אנכי מכם
3 ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
אולם--אני אל-שדי אדבר והוכח אל-אל אחפץ
4 ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ.
ואולם אתם טפלי-שקר רפאי אלל כלכם
5 ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; ಮೌನವೇ ನಿಮಗೆ ಜ್ಞಾನವು.
מי-יתן החרש תחרישון ותהי לכם לחכמה
6 ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
שמעו-נא תוכחתי ורבות שפתי הקשיבו
7 ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ?
הלאל תדברו עולה ולו תדברו רמיה
8 ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?
הפניו תשאון אם-לאל תריבון
9 ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ?
הטוב כי-יחקר אתכם אם-כהתל באנוש תהתלו בו
10 ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು.
הוכח יוכיח אתכם-- אם-בסתר פנים תשאון
11 ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ? ದೈವಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?
הלא שאתו תבעת אתכם ופחדו יפל עליכם
12 ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ.
זכרניכם משלי-אפר לגבי-חמר גביכם
13 “ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ; ನನಗೇನಾದರೂ ಆಗಲಿ.
החרישו ממני ואדברה-אני ויעבר עלי מה
14 ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.
על-מה אשא בשרי בשני ונפשי אשים בכפי
15 ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.
הן יקטלני לא (לו) איחל אך-דרכי אל-פניו אוכיח
16 ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ.
גם-הוא-לי לישועה כי-לא לפניו חנף יבוא
17 ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.
שמעו שמוע מלתי ואחותי באזניכם
18 ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.
הנה-נא ערכתי משפט ידעתי כי-אני אצדק
19 ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.
מי-הוא יריב עמדי כי-עתה אחריש ואגוע
20 “ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ:
אך-שתים אל-תעש עמדי אז מפניך לא אסתר
21 ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ; ನಿಮ್ಮ ಭಯವು ನನ್ನನ್ನು ಹೆದರಿಸದಿರಲಿ.
כפך מעלי הרחק ואמתך אל-תבעתני
22 ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ.
וקרא ואנכי אענה או-אדבר והשיבני
23 ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ.
כמה לי עונות וחטאות-- פשעי וחטאתי הדיעני
24 ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?
למה-פניך תסתיר ותחשבני לאויב לך
25 ಗಾಳಿಯಿಂದ ಹಾರಿಹೋಗುವ ಎಲೆಯನ್ನು ತೊಂದರೆಪಡಿಸುವಿರೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿರೋ?
העלה נדף תערוץ ואת-קש יבש תרדף
26 ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ.
כי-תכתב עלי מררות ותורישני עונות נעורי
27 ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ.
ותשם בסד רגלי-- ותשמור כל-ארחתי על-שרשי רגלי תתחקה
28 “ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.
והוא כרקב יבלה כבגד אכלו עש

< ಯೋಬನು 13 >