< ಯೋಬನು 14 >

1 “ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.
婦女所生的人,壽命不長,且飽嘗煩惱。
2 ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.
他生出像花,瞬息凋謝;急馳如影,不得停留。
3 ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ? ನಿಮ್ಮ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುತ್ತೀರೋ?
這樣的人,豈配你睜眼注視一下﹖或傳他到你面前聽審﹖
4 ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!
誰能使潔淨出於不潔﹖沒有一人!
5 ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.
他的時日既已注定,他的歲數既由你掌管,他決不能越過你定下的期限:
6 ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.
請你別看他,讓他安息,好像傭工度過自己的日期。
7 “ಮರಕ್ಕೆ ಸಹ ಒಂದು ನಿರೀಕ್ಷೆ ಇದೆ: ಅದೇನೆಂದರೆ, ಮರವನ್ನು ಕಡಿದು ಹಾಕಿದರೂ ತಾನು ಮತ್ತೆ ಚಿಗುರುವೆನೆಂಬ ನಿರೀಕ್ಷೆ ಅದಕ್ಕಿದೆ; ಚಿಗುರುವುದನ್ನು ಆ ಮರವು ನಿಲ್ಲಿಸುವುದೇ ಇಲ್ಲ.
若是一棵樹被砍伐了,仍有希望生出新芽,嫩枝叢出不窮。
8 ಅದರ ಬೇರು ಭೂಮಿಯಲ್ಲಿ ಹಳೆಯದಾದರೂ, ನೆಲದಲ್ಲಿ ಅದರ ಬುಡ ಸತ್ತಿದ್ದರೂ,
它的根雖老於地下,枝幹縱枯死地上,
9 ನೀರಿನ ವಾಸನೆಯಿಂದ ಅದು ಮೊಳೆತು, ಗಿಡದ ಹಾಗೆ ಅದು ಕೊಂಬೆಗಳನ್ನು ಬಿಡುವುದು.
但一有水氣,立即生芽,好似幼苗發出枝葉。
10 ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.
但是人一死,立即僵臥;人一斷氣,他究竟在何處﹖
11 ಸರೋವರದ ನೀರು ಒಣಗಿ ಹೋಗುವಂತೆಯೂ, ಬರಗಾಲದಲ್ಲಿ ನದಿಗಳು ಬತ್ತಿಹೋಗುವಂತೆಯೂ,
海水能乾涸,江河能枯竭;
12 ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.
同樣,人一僵臥,即不能起立,直到天不存在,仍不能醒起,仍不能由永眠中起來。
13 “ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು! (Sheol h7585)
唯願你將我藏於陰府,將我隱藏,直到挽回你的憤怒;願你給我定一期限,好記念我。 (Sheol h7585)
14 ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.
人若死了,豈能再生﹖我在整個從軍之日,要堅持到底,直到換班的時期到來。
15 ದೇವರೇ, ನೀವು ನನ್ನನ್ನು ಕರೆಯುವಿರಿ, ನಾನು ನಿಮಗೆ ಉತ್ತರಕೊಡುವೆನು; ನಿಮ್ಮ ಈ ಸೃಷ್ಟಿಯ ಮೇಲೆ ನೀವು ಹಂಬಲಿಸುವಿರಿ.
你若呼喚我,我必回答你:你對你手所造的,必有一種懷念。
16 ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ; ಆದರೆ ನೀವು ನನ್ನ ಪಾಪದ ಬಗ್ಗೆ ದಾಖಲೆ ಇಡುವುದಿಲ್ಲ.
你現今既數了我的腳步,不必再監察我的罪過。
17 ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ.
請把我的罪過封閉在囊中,滌淨我的一切過犯。
18 “ಆದರೂ ಬೆಟ್ಟವು ಬಿದ್ದು ಹಾಳಾಗುವಂತೆಯೂ, ಬಂಡೆಯು ತನ್ನ ಸ್ಥಳದಿಂದ ತೊಲಗುವಂತೆಯೂ,
但是,山能崩裂離析,盤石能由原處挪移,
19 ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ.
流水能穿過石頭,驟雨能沖出泥沙:你也照樣消滅了人的希望。
20 ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು; ನೀವು ಅವನ ಮುಖಭಾವವನ್ನು ಮಾರ್ಪಡಿಸಿ, ಅವನನ್ನು ಕಳುಹಿಸಿಬಿಡುತ್ತೀರಿ.
你時常攻擊他,使他消逝;改變他的容貌,遣他離去。
21 ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.
此後,他的兒子受尊榮與否,他也不知;他們受輕賤與否,他也不覺。
22 ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು, ಅವರ ಆತ್ಮವು ಅವರಿಗಾಗಿ ಮಾತ್ರ ಪ್ರಲಾಪಿಸುತ್ತಿರುವುದು.”
他只覺自己肉身的痛苦,他的心靈只為自己悲哀。

< ಯೋಬನು 14 >