< ಯೋಬನು 17 >

1 ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ.
רוּחִ֣י חֻ֭בָּלָה יָמַ֥י נִזְעָ֗כוּ קְבָרִ֥ים לִֽי׃
2 ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು.
אִם־לֹ֣א הֲ֭תֻלִים עִמָּדִ֑י וּ֝בְהַמְּרֹותָ֗ם תָּלַ֥ן עֵינִֽי׃
3 “ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ; ನಿಮ್ಮನ್ನು ಬಿಟ್ಟು ಯಾರು ನನಗೆ ಭದ್ರತೆಯನ್ನು ಕೊಡುವವರು?
שִֽׂימָה־נָּ֭א עָרְבֵ֣נִי עִמָּ֑ךְ מִֽי ה֝֗וּא לְיָדִ֥י יִתָּקֵֽעַ׃
4 ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ.
כִּֽי־לִ֭בָּם צָפַ֣נְתָּ מִּשָּׂ֑כֶל עַל־כֵּ֝֗ן לֹ֣א תְרֹמֵֽם׃
5 ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು.
לְ֭חֵלֶק יַגִּ֣יד רֵעִ֑ים וְעֵינֵ֖י בָנָ֣יו תִּכְלֶֽנָה׃
6 “ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.
וְֽ֭הִצִּגַנִי לִמְשֹׁ֣ל עַמִּ֑ים וְתֹ֖פֶת לְפָנִ֣ים אֶֽהְיֶֽה׃
7 ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ.
וַתֵּ֣כַהּ מִכַּ֣עַשׂ עֵינִ֑י וִֽיצֻרַ֖י כַּצֵּ֣ל כֻּלָּֽם׃
8 ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ; ನಿರಪರಾಧಿಯು ಭಕ್ತಿಹೀನರ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
יָשֹׁ֣מּוּ יְשָׁרִ֣ים עַל־זֹ֑את וְ֝נָקִ֗י עַל־חָנֵ֥ף יִתְעֹרָֽר׃
9 ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.
וְיֹאחֵ֣ז צַדִּ֣יק דַּרְכֹּ֑ו וּֽטֳהָר־יָ֝דַ֗יִם יֹסִ֥יף אֹֽמֶץ׃
10 “ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ.
וְֽאוּלָ֗ם כֻּלָּ֣ם תָּ֭שֻׁבוּ וּבֹ֣אוּ נָ֑א וְלֹֽא־אֶמְצָ֖א בָכֶ֣ם חָכָֽם׃
11 ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.
יָמַ֣י עָ֭בְרוּ זִמֹּתַ֣י נִתְּק֑וּ מֹ֖ורָשֵׁ֣י לְבָבִֽי׃
12 ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ; ಕತ್ತಲಿಂದ ಬೆಳಕು ಬೇಗ ಬರಲಿದೆ ಎನ್ನುತ್ತಾರೆ.
לַ֭יְלָה לְיֹ֣ום יָשִׂ֑ימוּ אֹ֝֗ור קָרֹ֥וב מִפְּנֵי־חֹֽשֶׁךְ׃
13 ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ, (Sheol h7585)
אִם־אֲ֭קַוֶּה שְׁאֹ֣ול בֵּיתִ֑י בַּ֝חֹ֗שֶׁךְ רִפַּ֥דְתִּי יְצוּעָֽי׃ (Sheol h7585)
14 ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ,
לַשַּׁ֣חַת קָ֭רָאתִי אָ֣בִי אָ֑תָּה אִמִּ֥י וַ֝אֲחֹתִ֗י לָֽרִמָּֽה׃
15 ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
וְ֭אַיֵּה אֵפֹ֣ו תִקְוָתִ֑י וְ֝תִקְוָתִ֗י מִ֣י יְשׁוּרֶֽנָּה׃
16 ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?” (Sheol h7585)
בַּדֵּ֣י שְׁאֹ֣ל תֵּרַ֑דְנָה אִם־יַ֖חַד עַל־עָפָ֣ר נָֽחַת׃ ס (Sheol h7585)

< ಯೋಬನು 17 >