< ಯೋಬನು 19 >
1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:
Aa le hoe ty natoi’ Iobe:
2 “ಎಷ್ಟರವರೆಗೆ ನನ್ನ ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
Pak’ombia nahareo ro mbe hampiojeoje ty troko naho hampipinepinek’ahy an-tsaontsy?
3 ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.
Im-polo ty nañonjira’ areo ahiko vaho tsy mahasalats’ anahareo ty mañaraty ahy.
4 ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? ನನ್ನ ತಪ್ಪು ನನ್ನ ಸಂಗಡ ಇರಲಿ.
Aa naho nitò t’ie nandilatse, le midoñ’ amako avao i tahiñey.
5 ನೀವು ನನಗಿಂತ ಉತ್ತಮರು ಎಂದು ಭಾವಿಸುತ್ತಿದ್ದೀರಿ; ನನಗಾದ ಹೀನಸ್ಥಿತಿಯನ್ನು ನನಗೆ ವಿರೋಧವಾಗಿ ಉಪಯೋಗಿಸುತ್ತೀರಿ.
Naho mivongevòngek’ amako nahareo manisý ahy amo injekoo,
6 ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.
Le mahafohina te nifotetse amako, t’i Andrianañahare vaho narikato’e amako ty harato’e.
7 “‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.
Mitoreo iraho fa nikatramoeñe fe tsy amam-pañaoñe; mikanjy, fe tsy añomean-to.
8 ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ.
Finahepahe’e ty lalako tsy handenàko, naho napo’e añ’oloñoloko ao ty ieñe.
9 ದೇವರು ನನ್ನ ಘನತೆಯನ್ನು ತೆಗೆದುಹಾಕಿದ್ದಾರೆ; ನನ್ನ ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾರೆ.
Nampikorendahe’e amako ty engeko, vaho nafaha’e an-dohako ao i sabakam-bolonahetsey.
10 ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.
Narotsa’e mb’etia mb’atia, le fa añe iraho: ombota’e hoe hatae ty fitamàko.
11 ದೇವರ ಶಿಕ್ಷೆಯು ನನ್ನ ಮೇಲೆ ಉರಿಯುತ್ತಿದೆ; ನಾನು ದೇವರಿಗೆ ವೈರಿಯಂತೆ ಪರಿಗಣಿಸಲಾಗಿದ್ದೇನೆ.
Nasoleba’e amako ka ty haviñera’e vaho atao’e ho rafelahi’e.
12 ದೇವರ ಸೇನೆ ಒಟ್ಟಿಗೆ ಬಂದು, ನನಗೆ ವಿರೋಧವಾಗಿ ದಿಬ್ಬನ್ನು ಕಟ್ಟಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.
Mitotoke amako o lahindefo’eo, mitoañe mb’amako le mitobe añariary i kibohokoy.
13 “ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ.
Napo’e lavitse ahy o rahalahikoo, vaho fonga alik’amako o nimpiamakoo.
14 ನನ್ನ ಬಂಧುಗಳು ನನ್ನನ್ನು ಕೈಬಿಟ್ಟಿದ್ದಾರೆ; ನನ್ನ ಆಪ್ತ ಸ್ನೇಹಿತರು ನನ್ನನ್ನು ಮರೆತುಬಿಟ್ಟಿದ್ದಾರೆ.
Namorintseñe ahy o longokoo, nañaliño ahy o rañekoo.
15 ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.
O mitobok’ añ’anjombakoo, naho o anak’ampatakoo, songa manao ahy ho ambahiny, toe renetane am-pahaisaha’e.
16 ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ.
Tokaveko ty mpitoroko, fe tsy manoiñe, ndra te itoreovam-bavako.
17 ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ.
Mampangorý i valiko ty kofòko, vaho heje’ ty amorin-dreneko.
18 ಚಿಕ್ಕವರೂ ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಕಾಣಿಸಿಕೊಂಡಾಗ ನನ್ನನ್ನು ಹಾಸ್ಯಮಾಡುತ್ತಾರೆ.
Manirìk’ahy o anak’ajalahio, ie miongake iraho, onjira’ iareo.
19 ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.
Malaiñ’ahy iaby o atehenakoo; tsambolitio’ o nikokoakoo.
20 ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು.
Mipitek’ ami’ty holiko naho ami’ty nofoko o taolakoo, vaho an-tain-tsìko avao ty nimolaoreko.
21 “ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.
Tretrezo iraho, iferenaiño, ry rañeko; fa nipaok’ ahy ty fitàn’Añahare.
22 ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ? ನನಗೆ ತೊಂದರೆಪಡಿಸಿದ್ದು ಸಾಲದೋ?
Ino ty ampisoaña’ areo ahy hoe t’ie Andrianañahare? Tsy mahaeneñ’ anahareo hao o holikoo?
23 “ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ,
Ee te nisokireñe o volako zao! Lonike t’ie nipatereñe am-boke ao!
24 ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!
Ee any t’ie sokirañe an-tsantilò viñe naho firake am-bato tsy ho modo!
25 ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.
Fa naho izaho, apotako te veloñe i Mpijebañ’ahikoy, ie hijohañe ambone’ o lembokeo an-tsengaha’e añe.
26 ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ, ನಾನು ದೇಹದಾರಿಯಾಗಿಯೇ ದೇವರನ್ನು ನೋಡುವೆನು.
Le ie fa momoke ty holiko— ty mianto toy, ho treako boak’ ami’ty nofoko t’i Andrianañahare;
27 ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ!
Eka, hahatrea Aze iraho; o masokoo ro hahaisak’ aze fa tsy ty ila’e. Momoke o añ’ovakoo!
28 “‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ,
Hera hanao ty hoe nahareo: Akore ty hampisoañan-tikañ’ aze? Ino ty lengo’e ho tendreke hanesehañ’ aze?
29 ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”
Mihembaña amy fibaray; amy te minday falilovam-pibara o haviñerañeo, hahafohina’ areo te eo ty zaka.