< ಯೋಬನು 21 >

1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:
তারপর ইয়োব উত্তর করলেন এবং বললেন,
2 “ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ, ಇವು ನೀವು ನನಗೆ ನೀಡುವ ಆದರಣೆಗಳಾಗಿರಲಿ.
“আমার কথা মনোযোগ দিয়ে শোন এবং এটাই তোমাদের সান্ত্বনা হোক।
3 ನಾನು ಮಾತನಾಡುವಾಗ, ನನ್ನನ್ನು ಸಹಿಸಿಕೊಳ್ಳಿರಿ; ನಾನು ಮಾತನಾಡಿದ ಮೇಲೆ ನೀವು ಪರಿಹಾಸ್ಯ ಮಾಡಬಹುದು.
আমার প্রতি ধৈর্য্য ধর এবং আমিও কথা বলব; আমার কথা বলার পরে, আমার ওপর বিদ্রূপ কর।
4 “ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು.
আমার জন্য, আমার অভিযোগ কি কোন মানুষের কাছে? কেন আমি ধৈর্যহীন হব না?
5 ನನ್ನ ಕಡೆಗೆ ಗಮನಿಸಿರಿ; ನೀವು ನಿಮ್ಮ ಬಾಯಿಯ ಮೇಲೆ ಕೈ ಇಟ್ಟು ಬೆರಗಾಗಿರಿ.
আমার দিকে তাকাও এবং অবাক হবে এবং তোমাদের মুখের ওপর হাত দাও।
6 ನಾನು ಈ ವಿಷಯವನ್ನು ನೆನಪು ಮಾಡಿಕೊಂಡಾಗ ಭಯಪಡುತ್ತೇನೆ; ನನ್ನ ದೇಹಕ್ಕೆ ನಡುಕ ಹಿಡಿಯುತ್ತದೆ.
যখন আমি আমার কষ্টের বিষয়ে চিন্তা করি, আমি সমস্যায় পড়ি এবং আমার মাংস আতঙ্কিত হয়।
7 ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ? ಅಂಥವರು ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?
কেন পাপীরা বেঁচে থাকে, বৃদ্ধ হয় এবং পরাক্রমের শক্তিতে বৃদ্ধি পায়?
8 ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು.
তাদের বংশধাররা তাদের চোখের সামনে তাদের সঙ্গে প্রতিষ্ঠিত হচ্ছে এবং তাদের সন্তানসন্ততিরা তাদের চোখের সামনে প্রতিষ্ঠিত হচ্ছে।
9 ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು; ದೇವರ ದಂಡನೆಯ ಕೋಲು ಅವರ ಮೇಲೆ ಬೀಳದಿರುವುದು.
তাদের বাড়িঘর ভয় থেকে নিরাপদ; না তাদের ওপর ঈশ্বরের লাঠি আছে।
10 ಅವರ ಹೋರಿಯು ಅಭಿವೃದ್ಧಿಯಾಗಿರುವುದು; ಅವರ ಆಕಳು ತಪ್ಪದೆ ಈಯುವುದು.
১০তাদের ষাঁড় বংশ বৃদ্ধি করে; তা এটা করতে ব্যর্থ হয় না; তাদের গরু বাচ্চা জন্ম দেয় এবং গাভীন তার বাছুর হারায় না।
11 ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ.
১১তারা তাদের বাচ্চাদের পালের মত বাইরে পাঠায় এবং তাদের শিশুরা নাচে।
12 ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
১২তারা তবলা ও বিনে গান করে এবং বাঁশির সুরে আনন্দ করে।
13 ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ. (Sheol h7585)
১৩তারা সৌভাগ্যে তাদের জীবন যাপন করে এবং তারা নিঃশব্দে (শান্তিপুর্বক) পাতালে নেমে যায়। (Sheol h7585)
14 ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.
১৪তারা ঈশ্বরকে বলে, ‘আমাদের থেকে চলে যাও কারণ আমরা তোমার পথ জানতে চাই না।
15 ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.
১৫সর্বশক্তিমান কে যে আমাদের তাঁর উপাসনা করা উচিত? যদি আমরা তাঁর কাছে প্রার্থনা করি তাহলে আমাদের কি লাভ হবে?’
16 ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ; ಆದ್ದರಿಂದ ಆ ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ.
১৬দেখ, তাদের উন্নতি কি তাদের হাতেই নেই? পাপীদের পরামর্শ আমার থেকে দূরে।
17 “ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ?
১৭কতবার পাপীদের প্রদীপ নেভান হয় অথবা কতবার যে তাদের ওপর বিপদ আসে? কতবার এটা ঘটেছে যে ঈশ্বর তাঁর ক্রোধে তাদের কষ্ট ভাগ করেছেন?
18 ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ?
১৮কতবার তারা বাতাসের সামনে শুকনো নাড়ার মত হয় অথবা তুষের মত হয় যে ঝড় উড়িয়ে নিয়ে যায়?
19 ‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.
১৯তোমরা বল, ‘ঈশ্বর এক জনের অপরাধের দায় তার সন্তানদের জন্য রাখেছেন,’ তাকে নিজেকেই এটা ভোগ করতে দাও, যাতে সে জানতে পারে তার অপরাধ।
20 ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.
২০তার চোখ তার নিজের ধ্বংস দেখুক এবং তাকে সর্বশক্তিমানের ক্রোধ পান করতে দাও।
21 ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ?
২১যখন তার মাসের সংখ্যা অর্ধেক করা হয়েছে, তখন কি কারণে সে তার পরিবারের বিষয়ে চিন্তা করে?
22 “ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?
২২কেউ কি ঈশ্বরকে জ্ঞানের শিক্ষা দিতে পারে, যেহেতু যারা উচ্চ তিনি তাদেরও বিচার করেন?
23 ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ, ನೆಮ್ಮದಿಯಿಂದ ಇರುವಾಗಲೂ ಸಾಯುತ್ತಾನೆ.
২৩একজন মানুষ তার পূর্ণ শক্তিতে মারা যায়, একেবারে শান্তিতে এবং আরামে।
24 ಅವನ ದೇಹ ಚೆನ್ನಾಗಿ ಬೆಳೆದು ಪೋಷಣೆಯಾಗಿರುತ್ತದೆ; ಅವನ ಎಲುಬುಗಳು ಮಜ್ಜೆಯಿಂದ ತುಂಬಿರುತ್ತದೆ.
২৪তার ভান্ডার সকল দুধে পূর্ণ এবং তার হাড়ের মজ্জা সতেজ।
25 ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ.
২৫আরেকজন মানুষ প্রাণের তিক্ততায় মরে, যে কখনও ভাল কিছুর অভিজ্ঞতা করে নি।
26 ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.
২৬তারা সমানভাবে ধূলোয় শুয়ে পরবে; তাদের দুজনকেই পোকায় ঢাকে।
27 “ನೋಡಿರಿ, ನಿಮ್ಮ ಆಲೋಚನೆಗಳನ್ನು ನಾನು ಬಲ್ಲೆನು. ನೀವು ನನಗೆ ವಿರೋಧವಾಗಿ ಮಾಡುವ ಕುಯುಕ್ತಿಗಳನ್ನೂ ತಿಳಿದಿದ್ದೇನೆ.
২৭দেখ, আমি জানি তোমার চিন্তা এবং সেই পথ যাতে তোমরা আমার খারাপ চাও।
28 ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ.
২৮কারণ তোমরা বল, ‘রাজকুমারের বাড়ি এখন কোথায়? সেই তাঁবু কোথায় যাতে একদিন পাপীরা বাস করত?’
29 ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ? ಅವರ ಅನುಭವಗಳು ನಿಮಗೆ ಹಿಡಿಸಲಿಲ್ಲವೋ?
২৯তোমরা কি কখন পথিকদের জিজ্ঞাসা কর নি? তোমরা কি জান না সেই প্রমাণ তারা দিতে পারে,
30 ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.
৩০দুষ্টকে ধ্বংসের দিন পর্যন্ত রাখা হয় এবং যাতে সে ক্রোধের দিনের র থেকে রক্ষা পায়?
31 ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು? ಅವರು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿ ತೀರಿಸುವವರು ಯಾರು?
৩১দুষ্টের সামনে কে তার পথের জন্য তাকে দোষী করবে? সে যা করেছে তার জন্য কে তাকে প্রতিফল দেবে?
32 ದುಷ್ಟರನ್ನು ಸಮಾಧಿಗೆ ಒಯ್ಯುತ್ತಾರೆ. ಅವರ ಗೋರಿಗೆ ಕಾವಲು ಇಡುತ್ತಾರೆ.
৩২তবুও সে কবরে জন্ম নেবে; লোকেরা তার কবরের ওপর লক্ষ রাখবে।
33 ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.
৩৩উপত্যকার মাটি তার কাছে মিষ্টি লাগবে; সমস্ত লোক তাকে অনুসরণ করবে, তার আগে অসংখ্য মানুষ যেমন সেখানে ছিল।
34 “ವ್ಯರ್ಥವಾದ ನಿಮ್ಮ ಮಾತುಗಳಿಂದ ನೀವು ನನ್ನನ್ನು ಸಂತೈಸುವುದು ಹೇಗೆ? ನಿಮ್ಮ ಉತ್ತರಗಳಲ್ಲಿ ವಿಶ್ವಾಸದ್ರೋಹ ಬಿಟ್ಟು ಮತ್ತೇನೂ ಉಳಿದಿರುವುದಿಲ್ಲ.”
৩৪নিরর্থক কোথায় তোমরা কেমন করে আমায় সান্ত্বনা দেবে, যেহেতু তোমাদের উত্তরে কিছুই নেই কিন্তু মিথ্যা রয়েছে?”

< ಯೋಬನು 21 >