< ಯೋಬನು 23 >
1 ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:
S felelt Jób és mondta:
2 “ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ.
Ma is ellenszegülő a panaszom: csapásom ránehezedik nyögésemre.
3 ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.
Vajha tudnám, hogy találhatom, hogy eljutok székhelyéig:
4 ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ.
eléje terjeszteném az ügyet és szájamat megtölteném bizonyításokkal;
5 ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ.
tudnám mely szavakkal felel nekem, s megérteném, mit mond nekem.
6 ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.
Vajon erőnek teljével pörölne-e velem? Nem! Csakhogy ügyelne ő rám!
7 ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.
Akkor az egyenes szállt vele vitára, s örökre megmenekülnék bírámtól.
8 “ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ.
Lám, keletre megyek – s ő nincs ott, nyugatra: s nem veszem észre;
9 ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ.
balról midőn működik, nem nézhetem meg, jobbra fordul és nem látom.
10 ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.
Mert ismeri az utat, melyet követek; megvizsgálna: mint az arany kerülnék ki.
11 ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು.
Ösvényéhez ragaszkodott lábam, útját őriztem meg és nem hajlok el.
12 ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
Ajkai parancsától nem mozdulok el, törvényemnél fogva megóvtam szája szavait.
13 “ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.
De ő az egy, ki térítheti el? S a mit lelke megkívánt, azt megcselekszi.
14 ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.
Bizony befejezi azt, mi kiszabva van nekem s efféle sok van nála.
15 ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ.
Azért rémülök meg miatta, elgondolkozom és rettegek tőle.
16 ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.
Hisz Isten csüggesztette el szívemet s a Mindenható rémített meg engem;
17 ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.
mert nem a sötétség miatt semmisültem meg, sem mivel arczomat a homály borította.