< ಯೋಬನು 24 >

1 “ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?
Visto que do Todo-poderoso se não encobriram os tempos porque, os que o conhecem, não vêem os seus dias?
2 ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.
Até os limites removem: roubam os rebanhos, e os apascentam.
3 ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.
Levam o jumento do orphão: tomam em penhor o boi da viuva.
4 ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.
Desviam do caminho aos necessitados; e os miseraveis da terra juntos se escondem d'elles.
5 ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.
Eis que, como jumentos montezes no deserto, saem á sua obra, madrugando para a preza: o campo raso dá mantimento a elles e aos seus filhos.
6 ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.
No campo segam o seu pasto, e vindimam a vinha do impio.
7 ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ.
Ao nu fazem passar a noite sem roupa, não tendo elle coberta contra o frio.
8 ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ.
Das correntes das montanhas são molhados, e, não tendo refugio, abraçam-se com as rochas.
9 ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.
Ao orphãosinho arrancam dos peitos, e penhoram o que ha sobre o pobre.
10 ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.
Fazem com que os nus vão sem vestido e famintos aos que carregam com as espigas.
11 ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.
Entre as suas paredes espremem o azeite: pisam os lagares, e ainda teem sêde.
12 ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.
Desde as cidades gemem os homens, e a alma dos feridos exclama, e comtudo Deus lh'o não imputa como loucura.
13 “ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.
Elles estão entre os que se oppõem á luz: não conhecem os seus caminhos d'ella, e não permanecem nas suas veredas.
14 ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ.
De madrugada se levanta o homicida, mata o pobre e necessitado, e de noite é como o ladrão.
15 ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.
Assim como o olho do adultero aguarda o crepusculo, dizendo: Não me verá olho nenhum: e occulta o rosto,
16 ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ.
Nas trevas minam as casas que de dia se assignalaram: não conhecem a luz.
17 ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.
Porque a manhã para todos elles é como a sombra de morte; porque, sendo conhecidos, sentem os pavores da sombra da morte.
18 “ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.
É ligeiro sobre a face das aguas; maldita é a sua parte sobre a terra: não se vira pelo caminho das vinhas.
19 ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. (Sheol h7585)
A seccura e o calor desfazem as aguas da neve; assim desfará a sepultura aos que peccaram. (Sheol h7585)
20 ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.
A madre se esquecerá d'elle, os bichos o comerão gostosamente; nunca mais haverá lembrança d'elle: e a iniquidade se quebrará como arvore.
21 ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.
Afflige á esteril que não pare, e á viuva não faz bem
22 ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.
Até aos poderosos arrasta com a sua força: se se levanta, não ha vida segura.
23 ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.
Se Deus lhes dá descanço, estribam-se n'isso: seus olhos porém estão nos caminhos d'elles.
24 ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.
Por um pouco se alçam, e logo desapparecem: são abatidos, encerrados como todos, e cortados como as cabeças das espigas.
25 “ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?”
Se agora não é assim, quem me desmentirá e desfará as minhas razões?

< ಯೋಬನು 24 >