< ಯೋಬನು 25 >
1 ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ:
Bildad iz Šuaha progovori tad i reče:
2 “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.
“Gospodstvo i strah u njegovoj su ruci i on stvara mir u svojim visinama.
3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ?
Zar se njemu čete izbrojiti mogu i svjetlo njegovo nad kim ne izlazi?
4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?
Pa kako da čovjek prav bude pred Bogom i od žene rođen kako da čist bude?
5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ.
Eto, i mjesec pred njime sjaj svoj gubi, njegovim očima zvijezde nisu čiste.
6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”
Što reći onda o čovjeku, tom crvu, o sinu čovjekovu, crviću jadnom?