< ಯೋಬನು 26 >
1 ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:
そこでヨブは答えて言った、
2 “ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?
「あなたは力のない者をどれほど助けたかしれない。気力のない腕をどれほど救ったかしれない。
3 ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.
知恵のない者をどれほど教えたかしれない。悟りをどれほど多く示したかしれない。
4 ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು?
あなたはだれの助けによって言葉をだしたのか。あなたから出たのはだれの霊なのか。
5 “ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.
亡霊は水およびその中に住むものの下に震う。
6 ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ. (Sheol )
神の前では陰府も裸である。滅びの穴もおおい隠すものはない。 (Sheol )
7 ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ.
彼は北の天を空間に張り、地を何もない所に掛けられる。
8 ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.
彼は水を濃い雲の中に包まれるが、その下の雲は裂けない。
9 ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ.
彼は月のおもてをおおい隠して、雲をその上にのべ、
10 ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ.
水のおもてに円を描いて、光とやみとの境とされた。
11 ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ.
彼が戒めると、天の柱は震い、かつ驚く。
12 ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.
彼はその力をもって海を静め、その知恵をもってラハブを打ち砕き、
13 ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ.
その息をもって天を晴れわたらせ、その手をもって逃げるへびを突き通される。
14 ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?”
見よ、これらはただ彼の道の端にすぎない。われわれが彼について聞く所はいかにかすかなささやきであろう。しかし、その力のとどろきに至っては、だれが悟ることができるか」。