< ಯೋಬನು 27 >
1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:
೧ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,
2 ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,
೨“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!
3 “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.
೩ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,
4 ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.
೪ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.
5 ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.
೫ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.
6 ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.
೬ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.
7 “ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.
೭ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ!
8 ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?
೮ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
9 ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?
೯ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?
10 ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?
೧೦ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ?
11 “ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು.
೧೧ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.
12 ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?
೧೨ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?
13 “ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ:
೧೩ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.
14 ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.
೧೪ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.
15 ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.
೧೫ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.
16 ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,
೧೬ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,
17 ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
೧೭ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
18 ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.
೧೮ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು.
19 ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.
೧೯ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ.
20 ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.
೨೦ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.
21 ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.
೨೧ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.
22 ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.
೨೨ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.
23 ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”
೨೩ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”