< ಯೋಬನು 28 >

1 ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.
כִּי יֵשׁ לַכֶּסֶף מוֹצָא וּמָקוֹם לַזָּהָב יָזֹֽקּוּ׃
2 ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.
בַּרְזֶל מֵֽעָפָר יֻקָּח וְאֶבֶן יָצוּק נְחוּשָֽׁה׃
3 ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.
קֵץ ׀ שָׂם לַחֹשֶׁךְ וּֽלְכׇל־תַּכְלִית הוּא חוֹקֵר אֶבֶן אֹפֶל וְצַלְמָֽוֶת׃
4 ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.
פָּרַץ נַחַל ׀ מֵֽעִם־גָּר הַֽנִּשְׁכָּחִים מִנִּי־רָגֶל דַּלּוּ מֵאֱנוֹשׁ נָֽעוּ׃
5 ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.
אֶרֶץ מִמֶּנָּה יֵֽצֵא־לָחֶם וְתַחְתֶּיהָ נֶהְפַּךְ כְּמוֹ־אֵֽשׁ׃
6 ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.
מְקוֹם־סַפִּיר אֲבָנֶיהָ וְעַפְרֹת זָהָב לֽוֹ׃
7 ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.
נָתִיב לֹא־יְדָעוֹ עָיִט וְלֹא שְׁזָפַתּוּ עֵין אַיָּֽה׃
8 ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.
לֹֽא־הִדְרִיכוּהוּ בְנֵֽי־שָׁחַץ לֹֽא־עָדָה עָלָיו שָֽׁחַל׃
9 ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.
בַּחַלָּמִישׁ שָׁלַח יָדוֹ הָפַךְ מִשֹּׁרֶשׁ הָרִֽים׃
10 ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.
בַּצּוּרוֹת יְאֹרִים בִּקֵּעַ וְכׇל־יְקָר רָאֲתָה עֵינֽוֹ׃
11 ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.
מִבְּכִי נְהָרוֹת חִבֵּשׁ וְתַעֲלֻמָהּ יֹצִא אֽוֹר׃
12 ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
וְֽהַחׇכְמָה מֵאַיִן תִּמָּצֵא וְאֵי זֶה מְקוֹם בִּינָֽה׃
13 ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
לֹא־יָדַע אֱנוֹשׁ עֶרְכָּהּ וְלֹא תִמָּצֵא בְּאֶרֶץ הַחַיִּֽים׃
14 ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.
תְּהוֹם אָמַר לֹא בִי־הִיא וְיָם אָמַר אֵין עִמָּדִֽי׃
15 ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.
לֹֽא־יֻתַּן סְגוֹר תַּחְתֶּיהָ וְלֹא יִשָּׁקֵל כֶּסֶף מְחִירָֽהּ׃
16 ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.
לֹֽא־תְסֻלֶּה בְּכֶתֶם אוֹפִיר בְּשֹׁהַם יָקָר וְסַפִּֽיר׃
17 ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.
לֹא־יַעַרְכֶנָּה זָהָב וּזְכוֹכִית וּתְמוּרָתָהּ כְּלִי־פָֽז׃
18 ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!
רָאמוֹת וְגָבִישׁ לֹא יִזָּכֵר וּמֶשֶׁךְ חׇכְמָה מִפְּנִינִֽים׃
19 ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.
לֹֽא־יַעַרְכֶנָּה פִּטְדַת־כּוּשׁ בְּכֶתֶם טָהוֹר לֹא תְסֻלֶּֽה׃
20 ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?
וְֽהַחׇכְמָה מֵאַיִן תָּבוֹא וְאֵי זֶה מְקוֹם בִּינָֽה׃
21 ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.
וְֽנֶעֶלְמָה מֵעֵינֵי כׇל־חָי וּמֵעוֹף הַשָּׁמַיִם נִסְתָּֽרָה׃
22 ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.
אֲבַדּוֹן וָמָוֶת אָמְרוּ בְּאׇזְנֵינוּ שָׁמַעְנוּ שִׁמְעָֽהּ׃
23 ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.
אֱלֹהִים הֵבִין דַּרְכָּהּ וְהוּא יָדַע אֶת־מְקוֹמָֽהּ׃
24 ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.
כִּי־הוּא לִקְצוֹת־הָאָרֶץ יַבִּיט תַּחַת כׇּל־הַשָּׁמַיִם יִרְאֶֽה׃
25 ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,
לַעֲשׂוֹת לָרוּחַ מִשְׁקָל וּמַיִם תִּכֵּן בְּמִדָּֽה׃
26 ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ
בַּעֲשֹׂתוֹ לַמָּטָר חֹק וְדֶרֶךְ לַחֲזִיז קֹלֽוֹת׃
27 ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.
אָז רָאָהּ וַֽיְסַפְּרָהּ הֱכִינָהּ וְגַם־חֲקָרָֽהּ׃
28 ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.
וַיֹּאמֶר ׀ לָאָדָם הֵן יִרְאַת אֲדֹנָי הִיא חׇכְמָה וְסוּר מֵרָע בִּינָֽה׃

< ಯೋಬನು 28 >