< ಯೋಬನು 29 >
1 ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:
And he repeated Job to take up discourse his and he said.
2 “ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ?
Who? will he give me like months of long ago like [the] days [when] God he watched over me.
3 ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ.
When made shine he lamp his over head my to light his I walked darkness.
4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಸ್ನೇಹವು ನನ್ನ ಗುಡಾರದ ಮೇಲೆ ಇರುತ್ತಿತ್ತು.
Just as I was in [the] days of prime my in [the] intimacy of God on tent my.
5 ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.
While still [the] Almighty [was] with me [were] around me lads my.
6 ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.
When bathed steps my in curd and a rock it poured out beside me streams of oil.
7 “ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ, ಬೀದಿಯಲ್ಲಿ ನನ್ನ ಪೀಠದ ಮೇಲೆ ಕುಳಿತುಕೊಂಡಾಗ,
When went out I [the] gate on [the] town in the public square I prepared seat my.
8 ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು.
They saw me young men and they hid themselves and old [men] they rose they stood.
9 ಪ್ರಧಾನರು ನುಡಿಗಳನ್ನು ಬಿಗಿ ಹಿಡಿದು, ತಮ್ಮ ಬಾಯಿಯ ಮೇಲೆ ಕೈ ಇಟ್ಟುಕೊಳ್ಳುತ್ತಿದ್ದರು.
Chiefs they restrained words and a hand they put to mouth their.
10 ಘನವಂತರು ಮೌನ ತಾಳುತ್ತಿದ್ದರು; ಅವರ ನಾಲಿಗೆ ಅವರ ಬಾಯಿಯ ಅಂಗಳಕ್ಕೆ ಅಂಟಿರುತ್ತಿತ್ತು.
[the] voice of Nobles they were hidden and tongue their to palate their it stuck.
11 ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು; ನೋಡಿದವರು ನನ್ನನ್ನು ಗೌರವಿಸುತ್ತಿದ್ದರು.
For an ear it heard and it called blessed me and an eye it saw and it bore witness to me.
12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.
That I rescued [the] afflicted [who] cried for help and [the] fatherless and [the one whom] not a helper [belonged] to him.
13 ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು.
[the] blessing of [one] about to perish On me it came and [the] heart of a widow I made sing for joy.
14 ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.
Righteousness I put on and it clothed me [was] like a robe and a turban justice my.
15 ನಾನು ಕುರುಡನಿಗೆ ಕಣ್ಣೂ, ಕುಂಟನಿಗೆ ಕಾಲೂ ಆಗಿದ್ದೆನು.
Eyes I was to the blind and [was] feet to the lame I.
16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.
[was] a father I to the needy [people] and a case at law of [the one whom] not I knew I investigated it.
17 ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು.
And I broke! [the] jaws of [the] unrighteous and from teeth his I threw [the] prey.
18 “ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು; ಮರಳಿನಂತೆ ನನ್ನ ದಿವಸಗಳು ಇರುತ್ತವೆ,
And I said with nest my I will expire and like sand I will increase days.
19 ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ.
Root my [is] opened to water and dew it will remain overnight on branch[es] my.
20 ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ; ನನ್ನ ಬಿಲ್ಲು ಸಹ ನನ್ನ ಕೈಯಲ್ಲಿ ಎಂದೆಂದಿಗೂ ಬಲಗೊಳ್ಳುತ್ತಾ ಇರುತ್ತದೆ,’ ಎಂದೆಲ್ಲಾ ಹೇಳುತ್ತಿದ್ದೆನು.
Honor my [is] new with me and bow my in hand my it will show newness.
21 “ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು. ನನ್ನ ಆಲೋಚನೆ ಕೇಳಲು ಮೌನವಾಗಿರುತ್ತಿದ್ದರು.
To me people listened and they waited and they may be silent for counsel my.
22 ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು.
After word my not they repeated and on them it dropped speech my.
23 ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು.
And they waited like the rain for me and mouth their they opened wide for spring rain.
24 ನಾನು ಅವರನ್ನು ನೋಡಿ ಮುಗುಳ್ನಗಿದಾಗ, ಅವರು ಅದನ್ನು ನಂಬಲಿಲ್ಲ; ನನ್ನ ಮುಖದ ಕಾಂತಿ ಅವರಿಗೆ ಅಮೂಲ್ಯವಾಗಿತ್ತು.
I laughed to them not they believed and [the] light of face my not they made fall!
25 ನಾನು ಅವರ ಪ್ರಧಾನನಾಗಿ ಕೂತು ಸೈನ್ಯಗಳ ನಡುವೆ ಅರಸನಂತೆ ಆಸೀನನಾಗಿದ್ದೆನು. ನಾನು ದುಃಖಿಸುವವರನ್ನು ಸಂತೈಸುವವನಾಗಿಯೂ ಇದ್ದೆನು.
I chose way their so I may sit [as] chief so I may dwell like a king among the troop[s] just as mourners someone comforts.