< ಯೋಬನು 3 >

1 ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.
Akyiri no Hiob kasae, na ɔdomee da a wɔwoo no.
2 ಯೋಬನು ಇಂತೆಂದನು:
Ɔkae se,
3 “ನಾನು ಹುಟ್ಟಿದ ದಿವಸವೂ, ‘ಗಂಡು ಮಗುವನ್ನು ಗರ್ಭಧರಿಸಿದೆ!’ ಎಂದು ಹೇಳಿದ ರಾತ್ರಿಯೂ ನಾಶವಾಗಲಿ.
“Ma da a wɔwoo me no nyera, ne anadwo a wɔkae se, ‘Wɔawo ɔbabarima no!’
4 ಆ ದಿವಸವು ಕತ್ತಲಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
Saa da no nnuru sum; mma Ɔsoro Nyankopɔn nhwehwɛ akyi kwan; mma hann biara ntɔ ngu so.
5 ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.
Ma sum ne owusum nnye no mfa; ma omununkum nkata so; na sum mmunkam ne hann so.
6 ಆ ರಾತ್ರಿಯನ್ನು ಅಂಧಕಾರವು ಮುತ್ತಲಿ; ವರ್ಷದ ದಿನಗಳಲ್ಲಿ ಆ ದಿನವನ್ನು ಸೇರಿಸದಿರಲಿ. ಅದು ತಿಂಗಳುಗಳನ್ನು ಲೆಕ್ಕಿಸದಿರಲಿ.
Ma sum kabii nnye saa anadwo no mfa; ma wonyi saa anadwo no mfi asranna so na wɔmmfa nhyɛ ɔsram biara mu.
7 ಇಗೋ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ.
Saa anadwo no nyɛ obonin; mma wɔnnte anigye nteɛmu wɔ mu.
8 ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.
Ma wɔn a wɔdome nna no nnome saa da no; wɔn a wɔayɛ krado sɛ wɔbɛkanyan dɛnkyɛmmirampɔn no.
9 ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ.
Ma nʼanɔpa nsoromma nnuru sum; na ɔntwɛn adekyee kwa a onhu anɔpawia nsensanee a edi kan no,
10 ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
efisɛ anto nea ɔwoo me no awotwaa mu ama wawo me na anka mʼani renhu saa abɛbrɛsɛ yi.
11 “ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?
“Adɛn nti na manwu awoe hɔ, bere a mifi me na awotwaa mu no?
12 ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ? ತಾಯಿಯ ಮೊಲೆಹಾಲು ಕುಡಿಯಮಾಡಿದ್ದೇಕೆ?
Adɛn nti na nkotodwe gyee me ne nufu sɛ minnum?
13 ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.
Anka sesɛɛ meda hɔ asomdwoe mu; anka mada regye mʼahome
14 ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.
me ne wiase ahemfo ne fotufo, wɔn a wosisii adan maa wɔn ho na nnɛ yi abubu no,
15 ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು.
me ne ahenemma a na wɔwɔ sika kɔkɔɔ, wɔn a wɔde dwetɛ hyɛɛ wɔn afi mu ma.
16 ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ?
Anaasɛ adɛn nti na wɔansie me sɛ ɔpɔnba, te sɛ akokoaa a wanhu adekyee hann da?
17 ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.
Ɛhɔ na amumɔyɛfo gyae basabasayɛ, na abrɛfo nya ahomegye.
18 ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ.
Nneduafo nso nya wɔn ahofadi; na wɔnte nnommumfo wuranom ateɛteɛ bio.
19 ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.
Nketewa ne akɛse wɔ hɔ, na akoa de ne ho fi ne wura nsam.
20 “ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?
“Adɛn nti na wɔma mmɔborɔfo hann, na ɔkra mu ahohiahiafo nya nkwa,
21 ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
wɔn a wɔn kɔn dɔ owu nanso ɛmma, wɔn a wɔbrɛ hwehwɛ owu sen sɛnea wɔhwehwɛ nnwetɛbona,
22 ಅವರು ಸಮಾಧಿ ಸೇರಿದ ಮೇಲೆ ಸಂತೋಷ ಸಂಭ್ರಮದಿಂದ ಹರ್ಷಿಸುವರೋ?
wɔn a anigye ahyɛ wɔn ma na wodu ɔda mu a wodi ahurusi.
23 ದೇವರು ಸುತ್ತಲೂ ಬೇಲಿಹಾಕಿ, ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ?
Adɛn nti na wɔde nkwa ma onipa a ne kwan ahintaw, nea Onyankopɔn aka no ahyɛ mu?
24 ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.
Ahomekokogu adan mʼaduan; na mʼapinisi gu te sɛ nsu.
25 ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ; ಯಾವುದಕ್ಕೆ ಹೆದರುತ್ತೇನೋ, ಅದೇ ತಪ್ಪದೆ ಸಂಭವಿಸುತ್ತದೆ.
Nea na misuro no aba me so; nea na ɛbɔ me hu no ato me.
26 ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ; ನಾನು ಸಮಾಧಾನವಾಗಿಯೂ ಇಲ್ಲ, ಯಾವಾಗಲೂ ಕಳವಳವೇ ಇರುತ್ತದೆ.”
Minni ahotɔ, minni asomdwoe; minni ahomegye na mmom, ɔhaw nko ara.”

< ಯೋಬನು 3 >