< ಯೋಬನು 30 >

1 “ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. ಇವರ ಪಿತೃಗಳನ್ನು ನನ್ನ ಕುರಿಮಂದೆಯ ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು.
וְעַתָּה ׀ שָׂחֲקוּ עָלַי צְעִירִים מִמֶּנִּי לְיָמִים אֲשֶׁר־מָאַסְתִּי אֲבוֹתָם לָשִׁית עִם־כַּלְבֵי צֹאנִֽי׃
2 ಇವರ ಕೈಗಳ ಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಚೈತನ್ಯವು ಕುಗ್ಗಿಹೋಗಿತ್ತು!
גַּם־כֹּחַ יְדֵיהֶם לָמָּה לִּי עָלֵימוֹ אָבַד כָּֽלַח׃
3 ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. ನಿರ್ಜನ ಮತ್ತು ಕತ್ತಲೆಯಾದ ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು.
בְּחֶסֶר וּבְכָפָן גַּלְמוּד הַעֹרְקִים צִיָּה אֶמֶשׁ שׁוֹאָה וּמְשֹׁאָֽה׃
4 ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.
הַקֹּטְפִים מַלּוּחַ עֲלֵי־שִׂיחַ וְשֹׁרֶשׁ רְתָמִים לַחְמָֽם׃
5 ಜನರು ಅವರನ್ನು ಹೊರಗೆ ಹಾಕುತ್ತಿದ್ದರು; ಕಳ್ಳರು ಎಂಬಂತೆ ಅವರನ್ನು ಓಡಿಸುತ್ತಿದ್ದರು.
מִן־גֵּו יְגֹרָשׁוּ יָרִיעוּ עָלֵימוֹ כַּגַּנָּֽב׃
6 ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು.
בַּעֲרוּץ נְחָלִים לִשְׁכֹּן חֹרֵי עָפָר וְכֵפִֽים׃
7 ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು. ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು.
בֵּין־שִׂיחִים יִנְהָקוּ תַּחַת חָרוּל יְסֻפָּֽחוּ׃
8 ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು.
בְּֽנֵי־נָבָל גַּם־בְּנֵי בְלִי־שֵׁם נִכְּאוּ מִן־הָאָֽרֶץ׃
9 “ಆದರೆ ಈಗ ನಾನು ಅವರ ಹಾಸ್ಯದ ಹಾಡೂ, ಅವರಿಗೆ ಗಾದೆಯೂ ಆಗಿದ್ದೇನೆ.
וְעַתָּה נְגִינָתָם הָיִיתִי וָאֱהִי לָהֶם לְמִלָּֽה׃
10 ಈಗ ನನ್ನನ್ನು ಕಂಡು ಅಸಹ್ಯಪಟ್ಟು, ನನ್ನಿಂದ ದೂರಸರಿಯುತ್ತಿದ್ದಾರೆ. ನನ್ನ ಮುಖದ ಮೇಲೆ ಉಗುಳಲೂ ಹಿಂಜರಿಯುವದಿಲ್ಲ.
תִּעֲבוּנִי רָחֲקוּ מֶנִּי וּמִפָּנַי לֹא־חָשְׂכוּ רֹֽק׃
11 ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ.
כִּֽי־[יִתְרִי] (יתרו) פִתַּח וַיְעַנֵּנִי וְרֶסֶן מִפָּנַי שִׁלֵּֽחוּ׃
12 ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ; ಅವರು ನನ್ನ ಕಾಲುಗಳಿಗೆ ಬಲೆ ಹಾಕಿದ್ದಾರೆ. ನನ್ನನ್ನು ನಾಶಮಾಡಲು ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಿದ್ದಾರೆ.
עַל־יָמִין פִּרְחַח יָקוּמוּ רַגְלַי שִׁלֵּחוּ וַיָּסֹלּוּ עָלַי אׇרְחוֹת אֵידָֽם׃
13 ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ.
נָֽתְסוּ נְֽתִיבָתִי לְהַוָּתִי יֹעִילוּ לֹא עֹזֵר לָֽמוֹ׃
14 ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ; ನಾಶನದಲ್ಲಿರುವ ನನ್ನ ಮೇಲೆ ಅವರು ಉರುಳಿಬೀಳಲಿದ್ದಾರೆ.
כְּפֶרֶץ רָחָב יֶאֱתָיוּ תַּחַת שֹׁאָה הִתְגַּלְגָּֽלוּ׃
15 ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ.
הׇהְפַּךְ עָלַי בַּלָּהוֹת תִּרְדֹּף כָּרוּחַ נְדִבָתִי וּכְעָב עָבְרָה יְשֻׁעָתִֽי׃
16 “ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ.
וְעַתָּה עָלַי תִּשְׁתַּפֵּךְ נַפְשִׁי יֹאחֲזוּנִי יְמֵי־עֹֽנִי׃
17 ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.
לַיְלָה עֲצָמַי נִקַּר מֵעָלָי וְעֹרְקַי לֹא יִשְׁכָּבֽוּן׃
18 ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ, ಅಂಗಿಯ ಕೊರಳ ಪಟ್ಟಿಯಂತೆ ನನ್ನನ್ನು ಸುತ್ತಿಕೊಂಡಿದೆ.
בְּרׇב־כֹּחַ יִתְחַפֵּשׂ לְבוּשִׁי כְּפִי כֻתׇּנְתִּי יַאַזְרֵֽנִי׃
19 ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ; ನಾನು ಧೂಳಿಗೂ ಬೂದಿಗೂ ಸಮಾನನಾಗಿದ್ದೇನೆ.
הֹרָנִי לַחֹמֶר וָאֶתְמַשֵּׁל כֶּעָפָר וָאֵֽפֶר׃
20 “ದೇವರೇ, ನಿಮಗೆ ಮೊರೆಯಿಡುತ್ತೇನೆ ಆದರೆ ನೀವು ನನಗೆ ಉತ್ತರ ಕೊಡುವುದಿಲ್ಲ, ನಾನು ಎದ್ದುನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿರಿ.
אֲשַׁוַּע אֵלֶיךָ וְלֹא תַֽעֲנֵנִי עָמַדְתִּי וַתִּתְבֹּנֶן בִּֽי׃
21 ನೀವು ನನಗೆ ಕ್ರೂರರಾಗಿದ್ದೀರಿ, ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ.
תֵּהָפֵךְ לְאַכְזָר לִי בְּעֹצֶם יָדְךָ תִשְׂטְמֵֽנִי׃
22 ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ, ನನ್ನನ್ನು ಬಿರುಗಾಳಿಗೆ ತೊಳಲಾಡುವಂತೆ ಮಾಡಿದ್ದೀರಿ.
תִּשָּׂאֵנִי אֶל־רוּחַ תַּרְכִּיבֵנִי וּתְמֹגְגֵנִי (תשוה) [תּוּשִׁיָּֽה]׃
23 ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.
כִּֽי־יָדַעְתִּי מָוֶת תְּשִׁיבֵנִי וּבֵית מוֹעֵד לְכׇל־חָֽי׃
24 “ಆದರೂ ಮುರಿದ ಮನುಷ್ಯನಾಗಿರುವ ನಾನು ಸಹಾಯಕ್ಕಾಗಿ ಕೈಚಾಚಬಾರದೆ? ಆಪತ್ತಿಗೆ ಒಳಪಟ್ಟವನಾದ ನಾನು ಕೂಗಿಕೊಳ್ಳಬಾರದೆ?
אַךְ לֹֽא־בְעִי יִשְׁלַח־יָד אִם־בְּפִידוֹ לָהֶן שֽׁוּעַ׃
25 ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?
אִם־לֹא בָכִיתִי לִקְשֵׁה־יוֹם עָֽגְמָה נַפְשִׁי לָאֶבְיֽוֹן׃
26 ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.
כִּי טוֹב קִוִּיתִי וַיָּבֹא רָע וַאֲיַחֲלָה לְאוֹר וַיָּבֹא אֹֽפֶל׃
27 ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ; ಸಂಕಟಗಳ ದಿವಸಗಳು ನನ್ನನ್ನು ಎದುರಿಸುತ್ತಿವೆ.
מֵעַי רֻתְּחוּ וְלֹא־דָמּוּ קִדְּמֻנִי יְמֵי־עֹֽנִי׃
28 ಬಿಸಿಲು ನನ್ನ ಮೇಲೆ ಬೀಳದಿದ್ದರೂ ನಾನು ಕಪ್ಪಾಗಿ ಹೋದೆನು; ನಾನು ಸಭೆಯಲ್ಲಿ ಎದ್ದು ನಿಂತು ಸಹಾಯಕ್ಕಾಗಿ ಕೂಗಿದೆನು.
קֹדֵר הִלַּכְתִּי בְּלֹא חַמָּה קַמְתִּי בַקָּהָל אֲשַׁוֵּֽעַ׃
29 ನಾನು ನರಿಗಳಿಗೆ ಸಹೋದರನಾದೆನು; ಗೂಬೆಗಳಿಗೆ ನಾನು ಜೊತೆಯವನಾದೆನು.
אָח הָיִיתִי לְתַנִּים וְרֵעַ לִבְנוֹת יַעֲנָֽה׃
30 ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ.
עוֹרִי שָׁחַר מֵעָלָי וְעַצְמִי־חָרָה מִנִּי־חֹֽרֶב׃
31 ನನ್ನ ಕಿನ್ನರಿಯಲ್ಲಿ ಗೋಳಾಟದ ಧ್ವನಿಯು ಕೇಳಿಸುತ್ತಿದೆ. ನನ್ನ ಕೊಳಲಿನಲ್ಲಿ ಅಳುವವರ ಸ್ವರವೇ ಕೇಳಿಬರುತ್ತಿದೆ.
וַיְהִי לְאֵבֶל כִּנֹּרִי וְעֻגָבִי לְקוֹל בֹּכִֽים׃

< ಯೋಬನು 30 >