< ಯೋಬನು 32 >

1 ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.
וישבתו שלשת האנשים האלה-- מענות את-איוב כי הוא צדיק בעיניו
2 ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.
ויחר אף אליהוא בן-ברכאל הבוזי-- ממשפחת-רם באיוב חרה אפו-- על-צדקו נפשו מאלהים
3 ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.
ובשלשת רעיו חרה אפו על אשר לא-מצאו מענה-- וירשיעו את-איוב
4 ಎಲೀಹು, ಯೋಬನ ಮಾತುಗಳು ಮುಗಿಯುವವರೆಗೂ ಕಾದಿದ್ದನು. ಏಕೆಂದರೆ ಅವನಿಗಿಂತ ಅವರೆಲ್ಲರೂ ಹಿರಿಯರಾಗಿದ್ದರು.
ואליהו--חכה את-איוב בדברים כי זקנים-המה ממנו לימים
5 ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು.
וירא אליהוא--כי אין מענה בפי שלשת האנשים ויחר אפו
6 ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.
ויען אליהוא בן ברכאל הבוזי-- ויאמר צעיר אני לימים ואתם ישישים על-כן זחלתי ואירא מחות דעי אתכם
7 ‘ದಿನ ಗತಿಸಿದವರು ಮಾತನಾಡಲಿ, ಬಹಳ ವರ್ಷದವರು ಜ್ಞಾನವನ್ನು ಬೋಧಿಸಲಿ,’ ಎಂದುಕೊಂಡೆನು.
אמרתי ימים ידברו ורב שנים ידיעו חכמה
8 ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.
אכן רוח-היא באנוש ונשמת שדי תבינם
9 ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಬಲ್ಲವರಲ್ಲ.
לא-רבים יחכמו וזקנים יבינו משפט
10 “ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ.
לכן אמרתי שמעה-לי אחוה דעי אף-אני
11 ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು.
הן הוחלתי לדבריכם--אזין עד-תבונתיכם עד-תחקרון מלין
12 ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು. ಆದರೆ, ನಿಮ್ಮಲ್ಲಿ ಯೋಬನ ತಪ್ಪನ್ನು ರುಜುಪಡಿಸುವವರೂ, ಯೋಬನ ವಾದಗಳಿಗೆ ಸರಿಯಾಗಿ ಉತ್ತರ ಕೊಡುವವರೂ ನಿಮ್ಮಲ್ಲಿ ಯಾರೂ ಇಲ್ಲ.
ועדיכם אתבונן והנה אין לאיוב מוכיח--עונה אמריו מכם
13 ‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.
פן-תאמרו מצאנו חכמה אל ידפנו לא-איש
14 ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ; ನಿಮ್ಮ ವಾದಗಳಿಂದ ನಾನು ಅವನಿಗೆ ಉತ್ತರ ಕೊಡುವುದಿಲ್ಲ.
ולא-ערך אלי מלין ובאמריכם לא אשיבנו
15 “ಯೋಬನೇ, ಇವರು ವಿಸ್ಮಯಗೊಂಡು ಇನ್ನು ಉತ್ತರ ಕೊಡದವರಾಗಿದ್ದಾರೆ; ಇವರಿಗೆ ಮಾತನಾಡಲು ಪದಗಳೇ ಸಿಕ್ಕುತ್ತಾಯಿಲ್ಲ.
חתו לא-ענו עוד העתיקו מהם מלים
16 ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?
והוחלתי כי-לא ידברו כי עמדו לא-ענו עוד
17 ನಾನು ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೇ ನನ್ನ ಅಭಿಪ್ರಾಯವನ್ನು ತಿಳಿಸುವೆನು.
אענה אף-אני חלקי אחוה דעי אף-אני
18 ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ.
כי מלתי מלים הציקתני רוח בטני
19 ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ.
הנה-בטני--כיין לא-יפתח כאבות חדשים יבקע
20 ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು.
אדברה וירוח-לי אפתח שפתי ואענה
21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.
אל-נא אשא פני-איש ואל-אדם לא אכנה
22 ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.
כי לא ידעתי אכנה כמעט ישאני עשני

< ಯೋಬನು 32 >