< ಯೋಬನು 33 >

1 “ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು. ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
ואולם שמע נא איוב מלי וכל דברי האזינה׃
2 ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ.
הנה נא פתחתי פי דברה לשוני בחכי׃
3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.
ישר לבי אמרי ודעת שפתי ברור מללו׃
4 ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.
רוח אל עשתני ונשמת שדי תחיני׃
5 ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು.
אם תוכל השיבני ערכה לפני התיצבה׃
6 ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.
הן אני כפיך לאל מחמר קרצתי גם אני׃
7 ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು.
הנה אמתי לא תבעתך ואכפי עליך לא יכבד׃
8 “ನಿಶ್ಚಯವಾಗಿ, ನೀನು ಆಡಿದ್ದೆಲ್ಲಾ ನನ್ನ ಕಿವಿಗೆ ಬಿದ್ದಿವೆ. ನಾನೇ ಈ ರೀತಿಯಾಗಿ ನೀನು ಆಡಿದ ಮಾತುಗಳನ್ನು ಕೇಳಿದ್ದೇನೆ:
אך אמרת באזני וקול מלין אשמע׃
9 ‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.
זך אני בלי פשע חף אנכי ולא עון לי׃
10 ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ.
הן תנואות עלי ימצא יחשבני לאויב לו׃
11 ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’
ישם בסד רגלי ישמר כל ארחתי׃
12 “ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.
הן זאת לא צדקת אענך כי ירבה אלוה מאנוש׃
13 ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?
מדוע אליו ריבות כי כל דבריו לא יענה׃
14 ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ.
כי באחת ידבר אל ובשתים לא ישורנה׃
15 ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ,
בחלום חזיון לילה בנפל תרדמה על אנשים בתנומות עלי משכב׃
16 ದೇವರು ಮನುಷ್ಯರ ಕಿವಿಗಳನ್ನು ತೆರೆದು, ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ.
אז יגלה אזן אנשים ובמסרם יחתם׃
17 ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ.
להסיר אדם מעשה וגוה מגבר יכסה׃
18 ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ.
יחשך נפשו מני שחת וחיתו מעבר בשלח׃
19 “ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.
והוכח במכאוב על משכבו וריב עצמיו אתן׃
20 ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು.
וזהמתו חיתו לחם ונפשו מאכל תאוה׃
21 ಅವನ ಶರೀರವು ಕಾಣದ ಹಾಗೆ ಸವೆಯುವುದು; ಕಾಣದಿದ್ದ ಅವನ ಎಲುಬುಗಳು ಸಹ ಬಯಲಾಗುತ್ತವೆ.
יכל בשרו מראי ושפי עצמותיו לא ראו׃
22 ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು.
ותקרב לשחת נפשו וחיתו לממתים׃
23 ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,
אם יש עליו מלאך מליץ אחד מני אלף להגיד לאדם ישרו׃
24 ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.
ויחננו ויאמר פדעהו מרדת שחת מצאתי כפר׃
25 ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು.
רטפש בשרו מנער ישוב לימי עלומיו׃
26 ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.
יעתר אל אלוה וירצהו וירא פניו בתרועה וישב לאנוש צדקתו׃
27 ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,
ישר על אנשים ויאמר חטאתי וישר העויתי ולא שוה לי׃
28 ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’
פדה נפשי מעבר בשחת וחיתי באור תראה׃
29 “ನೋಡು, ದೇವರು ಎರಡು ಸಾರಿಯಲ್ಲದೆ, ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು.
הן כל אלה יפעל אל פעמים שלוש עם גבר׃
30 ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು.
להשיב נפשו מני שחת לאור באור החיים׃
31 “ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು. ಮೌನವಾಗಿದ್ದು ಕೇಳು, ಈಗ ನಾನು ಮಾತನಾಡುತ್ತೇನೆ.
הקשב איוב שמע לי החרש ואנכי אדבר׃
32 ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.
אם יש מלין השיבני דבר כי חפצתי צדקך׃
33 ಇಲ್ಲವಾದರೆ ನಾನು ಹೇಳುವುದನ್ನು ಕೇಳು; ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.”
אם אין אתה שמע לי החרש ואאלפך חכמה׃

< ಯೋಬನು 33 >