< ಯೋಬನು 34 >

1 ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ:
וַיַּ֥עַן אֱלִיה֗וּא וַיֹּאמַֽר׃
2 ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ಪಂಡಿತರೇ, ನನಗೆ ಕಿವಿಗೊಡಿರಿ.
שִׁמְע֣וּ חֲכָמִ֣ים מִלָּ֑י וְ֝יֹדְעִ֗ים הַאֲזִ֥ינוּ לִֽי׃
3 ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
כִּי־אֹ֭זֶן מִלִּ֣ין תִּבְחָ֑ן וְ֝חֵ֗ךְ יִטְעַ֥ם לֶאֱכֹֽל׃
4 ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
מִשְׁפָּ֥ט נִבְחֲרָה־לָּ֑נוּ נֵדְעָ֖ה בֵינֵ֣ינוּ מַה־טֹּֽוב׃
5 “ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.
כִּֽי־אָ֭מַר אִיֹּ֣וב צָדַ֑קְתִּי וְ֝אֵ֗ל הֵסִ֥יר מִשְׁפָּטִֽי׃
6 ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.”
עַל־מִשְׁפָּטִ֥י אֲכַזֵּ֑ב אָנ֖וּשׁ חִצִּ֣י בְלִי־פָֽשַׁע׃
7 ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿಯುವಂತೆ ಅಪಹಾಸ್ಯ ಮಾಡುತ್ತಿದ್ದಾನೆ.
מִי־גֶ֥בֶר כְּאִיֹּ֑וב יִֽשְׁתֶּה־לַּ֥עַג כַּמָּֽיִם׃
8 ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ.
וְאָרַ֣ח לְ֭חֶבְרָה עִם־פֹּ֣עֲלֵי אָ֑וֶן וְ֝לָלֶ֗כֶת עִם־אַנְשֵׁי־רֶֽשַׁע׃
9 “ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”
כִּֽי־אָ֭מַר לֹ֣א יִסְכָּן־גָּ֑בֶר בִּ֝רְצֹתֹ֗ו עִם־אֱלֹהִֽים׃
10 “ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.
לָכֵ֤ן ׀ אַ֥נֲשֵׁ֥י לֵבָ֗ב שִׁמְע֫וּ לִ֥י חָלִ֖לָה לָאֵ֥ל מֵרֶ֗שַׁע וְשַׁדַּ֥י מֵעָֽוֶל׃
11 ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.
כִּ֤י פֹ֣עַל אָ֭דָם יְשַׁלֶּם־לֹ֑ו וּֽכְאֹ֥רַח אִ֝֗ישׁ יַמְצִאֶֽנּוּ׃
12 ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.
אַף־אָמְנָ֗ם אֵ֥ל לֹֽא־יַרְשִׁ֑יעַ וְ֝שַׁדַּ֗י לֹֽא־יְעַוֵּ֥ת מִשְׁפָּֽט׃
13 ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?
מִֽי־פָקַ֣ד עָלָ֣יו אָ֑רְצָה וּמִ֥י שָׂ֝֗ם תֵּבֵ֥ל כֻּלָּֽהּ׃
14 ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ,
אִם־יָשִׂ֣ים אֵלָ֣יו לִבֹּ֑ו רוּחֹ֥ו וְ֝נִשְׁמָתֹ֗ו אֵלָ֥יו יֶאֱסֹֽף׃
15 ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.”
יִגְוַ֣ע כָּל־בָּשָׂ֣ר יָ֑חַד וְ֝אָדָ֗ם עַל־עָפָ֥ר יָשֽׁוּב׃
16 “ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.
וְאִם־בִּ֥ינָה שִׁמְעָה־זֹּ֑את הַ֝אֲזִ֗ינָה לְקֹ֣ול מִלָּֽי׃
17 ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?
הַאַ֬ף שֹׂונֵ֣א מִשְׁפָּ֣ט יַחֲבֹ֑ושׁ וְאִם־צַדִּ֖יק כַּבִּ֣יר תַּרְשִֽׁיעַ׃
18 ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?
הַאֲמֹ֣ר לְמֶ֣לֶךְ בְּלִיָּ֑עַל רָ֝שָׁ֗ע אֶל־נְדִיבִֽים׃
19 ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.
אֲשֶׁ֤ר לֹֽא־נָשָׂ֨א ׀ פְּנֵ֥י שָׂרִ֗ים וְלֹ֣א נִכַּר־שֹׁ֖ועַ לִפְנֵי־דָ֑ל כִּֽי־מַעֲשֵׂ֖ה יָדָ֣יו כֻּלָּֽם׃
20 ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”
רֶ֤גַע ׀ יָמֻתוּ֮ וַחֲצֹ֪ות לָ֥יְלָה יְגֹעֲשׁ֣וּ עָ֣ם וְיַעֲבֹ֑רוּ וְיָסִ֥ירוּ אַ֝בִּ֗יר לֹ֣א בְיָֽד׃
21 “ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.
כִּי־עֵ֭ינָיו עַל־דַּרְכֵי־אִ֑ישׁ וְֽכָל־צְעָדָ֥יו יִרְאֶֽה׃
22 ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.
אֵֽין־חֹ֖שֶׁךְ וְאֵ֣ין צַלְמָ֑וֶת לְהִסָּ֥תֶר שָׁ֝֗ם פֹּ֣עֲלֵי אָֽוֶן׃
23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.
כִּ֤י לֹ֣א עַל־אִ֭ישׁ יָשִׂ֣ים עֹ֑וד לַהֲלֹ֥ךְ אֶל־אֵ֝֗ל בַּמִּשְׁפָּֽט׃
24 ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.
יָרֹ֣עַ כַּבִּירִ֣ים לֹא־חֵ֑קֶר וַיַּעֲמֵ֖ד אֲחֵרִ֣ים תַּחְתָּֽם׃
25 ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.
לָכֵ֗ן יַ֭כִּיר מַעְבָּֽדֵיהֶ֑ם וְהָ֥פַךְ לַ֝֗יְלָה וְיִדַּכָּֽאוּ׃
26 ಅವರ ದುಷ್ಟತನಕ್ಕಾಗಿ ದೇವರು ಎಲ್ಲರು ನೋಡುವಂತೆ ಅವರನ್ನು ಶಿಕ್ಷಿಸುವರು.
תַּֽחַת־רְשָׁעִ֥ים סְפָקָ֗ם בִּמְקֹ֥ום רֹאִֽים׃
27 ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.
אֲשֶׁ֣ר עַל־כֵּ֭ן סָ֣רוּ מֵֽאַחֲרָ֑יו וְכָל־דְּ֝רָכָ֗יו לֹ֣א הִשְׂכִּֽילוּ׃
28 ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.
לְהָבִ֣יא עָ֭לָיו צַֽעֲקַת־דָּ֑ל וְצַעֲקַ֖ת עֲנִיִּ֣ים יִשְׁמָֽע׃
29 ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?
וְה֤וּא יַשְׁקִ֨ט ׀ וּמִ֥י יַרְשִׁ֗עַ וְיַסְתֵּ֣ר פָּ֭נִים וּמִ֣י יְשׁוּרֶ֑נּוּ וְעַל־גֹּ֖וי וְעַל־אָדָ֣ם יָֽחַד׃
30 ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”
מִ֭מְּלֹךְ אָדָ֥ם חָנֵ֗ף מִמֹּ֥קְשֵׁי עָֽם׃
31 “ಒಂದು ವೇಳೆ, ಯಾರಾದರೂ ದೇವರಿಗೆ, ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ.
כִּֽי־אֶל־אֵ֭ל הֶאָמַ֥ר נָשָׂ֗אתִי לֹ֣א אֶחְבֹּֽל׃
32 ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.
בִּלְעֲדֵ֣י אֶ֭חֱזֶה אַתָּ֣ה הֹרֵ֑נִי אִֽם־עָ֥וֶל פָּ֝עַ֗לְתִּי לֹ֣א אֹסִֽיף׃
33 ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.”
הַֽמֵעִמְּךָ֬ יְשַׁלְמֶ֨נָּה כִּֽי־מָאַ֗סְתָּ כִּי־אַתָּ֣ה תִבְחַ֣ר וְלֹא־אָ֑נִי וּֽמַה־יָדַ֥עְתָּ דַבֵּֽר׃
34 “ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ ಜ್ಞಾನಿಗಳೂ ನಿನ್ನ ವಿಷಯವಾಗಿ:
אַנְשֵׁ֣י לֵ֭בָב יֹ֣אמְרוּ לִ֑י וְגֶ֥בֶר חָ֝כָ֗ם שֹׁמֵ֥עַֽ לִֽי׃
35 ‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು.
אִ֭יֹּוב לֹא־בְדַ֣עַת יְדַבֵּ֑ר וּ֝דְבָרָ֗יו לֹ֣א בְהַשְׂכֵּֽיל׃
36 ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ.
אָבִ֗י יִבָּחֵ֣ן אִיֹּ֣וב עַד־נֶ֑צַח עַל־תְּ֝שֻׁבֹ֗ת בְּאַנְשֵׁי־אָֽוֶן׃
37 ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”
כִּ֥י יֹ֘סִ֤יף עַֽל־חַטָּאתֹ֣ו פֶ֭שַׁע בֵּינֵ֣ינוּ יִסְפֹּ֑וק וְיֶ֖רֶב אֲמָרָ֣יו לָאֵֽל׃ ס

< ಯೋಬನು 34 >