< ಯೋಬನು 36 >
1 ಎಲೀಹು ಮುಂದುವರಿದು ಹೇಳಿದ್ದೇನೆಂದರೆ:
Alò, Élihu te kontinye. Li te di:
2 “ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.
Tann mwen yon ti kras, e mwen va montre ou; jiska prezan, gen anpil bagay ankò pou di sou pati Bondye.
3 ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು.
M ap prale chache lespri m soti byen lwen; mwen va fè prèv ladwati a Kreyatè mwen an.
4 ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ.
Paske anverite, pawòl mwen yo pa fo. Yon ki pafè nan konesans se avèk ou.
5 “ನೋಡು, ದೇವರು ಸರ್ವಶಕ್ತರು, ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ.
Gade byen, Bondye pwisan, men li pa meprize pèsòn; Li pwisan nan fòs konprann pa Li.
6 ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ.
Li pa konsève lavi a mechan yo, men Li bay jistis a aflije yo.
7 ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.
Li pa retire zye Li sou moun ladwati yo; men avèk wa ki chita sou twòn yo, li bay yo chèz jis pou tout tan, e yo leve wo.
8 ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,
Si yo mare ak gwo fè, e mare nèt nan kòd aflije yo,
9 ದೇವರು ಅವರ ಕೃತ್ಯವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು.
konsa, Li fè yo konnen travay yo, ak transgresyon yo; ke yo te leve tèt yo wo ak orgèy.
10 ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.
Li ouvri zòrèy yo pou yo ka instwi, e pase lòd pou yo retounen, kite inikite a.
11 ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.
Si yo tande e sèvi Li, yo va fè dènye jou yo nan abondans, e ane pa yo va ranpli ak rejwisans.
12 ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.
Men si yo pa tande, yo va peri pa nepe; yo va mouri san konesans.
13 “ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.
Men enkwayan yo ranmase lakòlè; yo refize kriye sekou lè L mare yo.
14 ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.
Yo mouri nan jenès yo, e lavi yo vin pèdi pami pwostitiye tanp yo.
15 ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.
Li delivre aflije yo nan afliksyon yo, e ouvri zòrèy yo nan tan opresyon yo.
16 “ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.
Wi, anverite Li t ap mennen ou lwen bouch gwo twoub la, pou ou jwenn yon plas ki laj, e san limit. Konsa, sa ki plase sou tab ou, ta plen ak grès.
17 ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ.
Men ou te ranpli ak jijman sou mechan yo; se jijman ak jistis ki te posede ou.
18 ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.
Pa kite riches ou mennen ou nan lakòlè, ni pa kite gwosè sa a kap vèse sou tab fè ou vire akote.
19 ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?
Èske richès ou yo ta fè ou envite gwo twoub la? Oswa èske tout fòs pwisans ou ta ka anpeche l rive?
20 ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.
Pa fè lanvi pou lannwit, moman an ke moun koupe retire nèt sou plas yo.
21 ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.
Fè atansyon; pa vire kote mal la, paske ou te chwazi sa a olye afliksyon an.
22 “ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?
Gade byen, Bondye byen wo nan pouvwa Li. Ki pwofesè ki tankou Li?
23 ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?
Se kilès ki te dirije L pou pran chemen Li an? Epi kilès ki ka di L ‘Ou antò a?’
24 ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.
Sonje ke ou dwe leve zèv Li yo wo, sa yo sou sila moun te konn chante yo.
25 ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ.
Tout moun konn wè sa. Lòm gade l soti lwen.
26 ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.
Gade byen, Bondye leve wo, men nou pa konnen Li. Fòs kantite ane Li yo pa kab dekouvri menm.
27 “ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.
Konsa, Li rale fè monte gout dlo yo. Yo fòme fè lapli ki sòti nan vapè,
28 ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ.
ke nwaj yo fè vide desann. Yo vin lage sou lòm an fòs kantite.
29 ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?
Èske pèsòn kab konprann jan nwaj yo vin gaye, ak tonnè k ap gwonde anwo plafon tant Li an?
30 ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ.
Gade byen, Li gaye limyè Li toupatou Li. Li kouvri fon lanmè yo.
31 ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.
Paske se avèk sa a ke li jije pèp yo. Li bay yo manje an gran kantite.
32 ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.
Li kouvri men Li ak eklè la, e pase lòd pou l frape sou mak la.
33 ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ.
Bri li deklare prezans Li; menm tout bèt yo konnen sa k ap vin rive a.