< ಯೋಬನು 4 >

1 ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:
וַ֭יַּעַן אֱלִיפַ֥ז הַֽתֵּימָנִ֗י וַיֹּאמַֽר׃
2 “ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?
הֲנִסָּ֬ה דָבָ֣ר אֵלֶ֣יךָ תִּלְאֶ֑ה וַעְצֹ֥ר בְּ֝מִלִּ֗ין מִ֣י יוּכָֽל׃
3 ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.
הִ֭נֵּה יִסַּ֣רְתָּ רַבִּ֑ים וְיָדַ֖יִם רָפֹ֣ות תְּחַזֵּֽק׃
4 ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.
כֹּ֖ושֵׁל יְקִימ֣וּן מִלֶּ֑יךָ וּבִרְכַּ֖יִם כֹּרְעֹ֣ות תְּאַמֵּֽץ׃
5 ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.
כִּ֤י עַתָּ֨ה ׀ תָּבֹ֣וא אֵלֶ֣יךָ וַתֵּ֑לֶא תִּגַּ֥ע עָ֝דֶ֗יךָ וַתִּבָּהֵֽל׃
6 ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ?
הֲלֹ֣א יִ֭רְאָתְךָ כִּסְלָתֶ֑ךָ תִּ֝קְוָתְךָ֗ וְתֹ֣ם דְּרָכֶֽיךָ׃
7 “ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?
זְכָר־נָ֗א מִ֤י ה֣וּא נָקִ֣י אָבָ֑ד וְ֝אֵיפֹ֗ה יְשָׁרִ֥ים נִכְחָֽדוּ׃
8 ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.
כַּאֲשֶׁ֣ר רָ֭אִיתִי חֹ֣רְשֵׁי אָ֑וֶן וְזֹרְעֵ֖י עָמָ֣ל יִקְצְרֻֽהוּ׃
9 ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;
מִנִּשְׁמַ֣ת אֱלֹ֣והַ יֹאבֵ֑דוּ וּמֵר֖וּחַ אַפֹּ֣ו יִכְלֽוּ׃
10 ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ.
שַׁאֲגַ֣ת אַ֭רְיֵה וְקֹ֣ול שָׁ֑חַל וְשִׁנֵּ֖י כְפִירִ֣ים נִתָּֽעוּ׃
11 ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.
לַ֭יִשׁ אֹבֵ֣ד מִבְּלִי־טָ֑רֶף וּבְנֵ֥י לָ֝בִ֗יא יִתְפָּרָֽדוּ׃
12 “ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.
וְ֭אֵלַי דָּבָ֣ר יְגֻנָּ֑ב וַתִּקַּ֥ח אָ֝זְנִ֗י שֵׁ֣מֶץ מֽ͏ֶנְהֽוּ׃
13 ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ
בִּ֭שְׂעִפִּים מֵחֶזְיֹנֹ֣ות לָ֑יְלָה בִּנְפֹ֥ל תַּ֝רְדֵּמָ֗ה עַל־אֲנָשִֽׁים׃
14 ಭಯವೂ ನಡುಕವೂ ನನ್ನನ್ನು ಹಿಡಿದು, ನನ್ನ ಎಲ್ಲಾ ಎಲುಬುಗಳನ್ನು ನಡುಗಿಸಿತು.
פַּ֣חַד קְ֭רָאַנִי וּרְעָדָ֑ה וְרֹ֖ב עַצְמֹותַ֣י הִפְחִֽיד׃
15 ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು.
וְ֭רוּחַ עַל־פָּנַ֣י יַחֲלֹ֑ף תְּ֝סַמֵּ֗ר שַֽׂעֲרַ֥ת בְּשָׂרִֽי׃
16 ಆ ಆತ್ಮ ನಿಂತಿದ್ದರೂ ಅದು ಏನೆಂದು ನನಗೆ ತಿಳಿಯಲಿಲ್ಲ. ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು:
יַעֲמֹ֤ד ׀ וְֽלֹא־אַכִּ֬יר מַרְאֵ֗הוּ תְּ֭מוּנָה לְנֶ֣גֶד עֵינָ֑י דְּמָמָ֖ה וָקֹ֣ול אֶשְׁמָֽע׃
17 ‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ?
הַֽ֭אֱנֹושׁ מֵאֱלֹ֣והַ יִצְדָּ֑ק אִ֥ם מֵ֝עֹשֵׂ֗הוּ יִטְהַר־גָּֽבֶר׃
18 ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,
הֵ֣ן בַּ֭עֲבָדָיו לֹ֣א יַאֲמִ֑ין וּ֝בְמַלְאָכָ֗יו יָשִׂ֥ים תָּהֳלָֽה׃
19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?
אַ֤ף ׀ שֹׁכְנֵ֬י בָֽתֵּי־חֹ֗מֶר אֲשֶׁר־בֶּעָפָ֥ר יְסֹודָ֑ם יְ֝דַכְּא֗וּם לִפְנֵי־עָֽשׁ׃
20 ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ.
מִבֹּ֣קֶר לָעֶ֣רֶב יֻכַּ֑תּוּ מִבְּלִ֥י מֵ֝שִׂ֗ים לָנֶ֥צַח יֹאבֵֽדוּ׃
21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’
הֲלֹא־נִסַּ֣ע יִתְרָ֣ם בָּ֑ם יָ֝מ֗וּתוּ וְלֹ֣א בְחָכְמָֽה׃

< ಯೋಬನು 4 >