< ಯೋಬನು 40 >

1 ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು:
ಇದಲ್ಲದೆ ಯೆಹೋವನು ಯೋಬನಿಗೆ,
2 “ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”
“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.
3 ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ,
ಆಗ ಯೋಬನು ಯೆಹೋವನಿಗೆ ಉತ್ತರವಾಗಿ,
4 “ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.
“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.
5 ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.
ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.
6 ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ:
ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
7 “ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು.
“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
8 “ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?
ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
9 ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?
ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?
10 ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.
೧೦ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.
11 ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.
೧೧ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
12 ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು.
೧೨ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.
13 ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು.
೧೩ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.
14 ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.
೧೪ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.
15 “ನಾನು ನಿನ್ನ ಹಾಗೆ ಸೃಷ್ಟಿಮಾಡಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ.
೧೫ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.
16 ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ!
೧೬ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.
17 ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ.
೧೭ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.
18 ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ.
೧೮ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.
19 ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ.
೧೯ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.
20 ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ.
೨೦ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;
21 ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ.
೨೧ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.
22 ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.
೨೨ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.
23 ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.
೨೩ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.
24 ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ?
೨೪ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು.

< ಯೋಬನು 40 >