< ಯೋಬನು 42 >
1 ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:
ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:
2 “ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.
“ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.
3 ‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ.
‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ.
4 “ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ.
“ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ.
5 ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.
ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.
6 ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.
ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.
7 ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.
ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.
8 ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.
9 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು.
ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು.
10 ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.
11 ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.
ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.
12 ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.
ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.
13 ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು.
ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು.
14 ಯೋಬನು ಮೊದಲನೆಯವಳಿಗೆ ಯೆಮೀಮಳೆಂದೂ ಎರಡನೆಯವಳಿಗೆ ಕೆಚೀಯಳೆಂದೂ ಮೂರನೆಯವಳಿಗೆ ಕೆರೆನ್ ಹಪ್ಪೂಕ್ ಎಂದೂ ಹೆಸರಿಟ್ಟನು.
ಯೋಬನು ಮೊದಲನೆಯವಳಿಗೆ ಯೆಮೀಮಳೆಂದೂ ಎರಡನೆಯವಳಿಗೆ ಕೆಚೀಯಳೆಂದೂ ಮೂರನೆಯವಳಿಗೆ ಕೆರೆನ್ ಹಪ್ಪೂಕ್ ಎಂದೂ ಹೆಸರಿಟ್ಟನು.
15 ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು.
ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು.
16 ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.
ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.
17 ಅನಂತರ ಯೋಬನು, ದಿನತುಂಬಿದ ಮುದುಕನಾಗಿ ಸತ್ತನು.
ಅನಂತರ ಯೋಬನು, ದಿನತುಂಬಿದ ಮುದುಕನಾಗಿ ಸತ್ತನು.