< ಯೋಬನು 5 >

1 “ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ?
קְֽרָא־נָ֭א הֲיֵ֣שׁ עוֹנֶ֑ךָּ וְאֶל־מִ֖י מִקְּדֹשִׁ֣ים תִּפְנֶֽה׃
2 ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.
כִּֽי־לֶֽ֭אֱוִיל יַהֲרָג־כָּ֑עַשׂ וּ֝פֹתֶ֗ה תָּמִ֥ית קִנְאָֽה׃
3 ಮೂಢನು ಬೇರೂರುವುದನ್ನು ನಾನು ನೋಡಿದೆನು, ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು.
אֲֽנִי־רָ֭אִיתִי אֱוִ֣יל מַשְׁרִ֑ישׁ וָאֶקּ֖וֹב נָוֵ֣הוּ פִתְאֹֽם׃
4 ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.
יִרְחֲק֣וּ בָנָ֣יו מִיֶּ֑שַׁע וְיִֽדַּכְּא֥וּ בַ֝שַּׁ֗עַר וְאֵ֣ין מַצִּֽיל׃
5 ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.
אֲשֶׁ֤ר קְצִיר֨וֹ ׀ רָ֘עֵ֤ב יֹאכֵ֗ל וְאֶֽל־מִצִּנִּ֥ים יִקָּחֵ֑הוּ וְשָׁאַ֖ף צַמִּ֣ים חֵילָֽם׃
6 ಮಣ್ಣಿನಿಂದ ಕಷ್ಟಗಳು ಹುಟ್ಟುವುದಿಲ್ಲ; ಭೂಮಿಯಿಂದ ತೊಂದರೆ ಮೊಳೆಯುವುದಿಲ್ಲ.
כִּ֤י ׀ לֹא־יֵצֵ֣א מֵעָפָ֣ר אָ֑וֶן וּ֝מֵאֲדָמָ֗ה לֹא־יִצְמַ֥ח עָמָֽל׃
7 ಆದರೂ ಕಿಡಿಗಳು ಹಾರುವ ಪ್ರಕಾರವೇ, ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ.
כִּֽי־אָ֭דָם לְעָמָ֣ל יוּלָּ֑ד וּבְנֵי־רֶ֝֗שֶׁף יַגְבִּ֥יהוּ עֽוּף׃
8 “ನಾನು ನೀನಾಗಿದ್ದರೆ ದೇವರಿಗೇ ಬೇಡಿಕೊಳ್ಳುತ್ತಿದ್ದೆ; ನನ್ನ ವಿಷಯವನ್ನು ದೇವರ ಮುಂದೆಯೇ ಇಡುತ್ತಿದ್ದೆ.
אוּלָ֗ם אֲ֭נִי אֶדְרֹ֣שׁ אֶל־אֵ֑ל וְאֶל־אֱ֝לֹהִ֗ים אָשִׂ֥ים דִּבְרָתִֽי׃
9 ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ.
עֹשֶׂ֣ה גְ֭דֹלוֹת וְאֵ֣ין חֵ֑קֶר נִ֝פְלָא֗וֹת עַד־אֵ֥ין מִסְפָּֽר׃
10 ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ.
הַנֹּתֵ֣ן מָ֭טָר עַל־פְּנֵי־אָ֑רֶץ וְשֹׁ֥לֵֽחַ מַ֝יִם עַל־פְּנֵ֥י חוּצֽוֹת׃
11 ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.
לָשׂ֣וּם שְׁפָלִ֣ים לְמָר֑וֹם וְ֝קֹדְרִ֗ים שָׂ֣גְבוּ יֶֽשַׁע׃
12 ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.
מֵ֭פֵר מַחְשְׁב֣וֹת עֲרוּמִ֑ים וְֽלֹא־תַעֲשֶׂ֥ינָה יְ֝דֵיהֶ֗ם תּוּשִׁיָּֽה׃
13 ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.
לֹכֵ֣ד חֲכָמִ֣ים בְּעָרְמָ֑ם וַעֲצַ֖ת נִפְתָּלִ֣ים נִמְהָֽרָה׃
14 ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.
יוֹמָ֥ם יְפַגְּשׁוּ־חֹ֑שֶׁךְ וְ֝כַלַּ֗יְלָה יְֽמַשְׁשׁ֥וּ בַֽצָּהֳרָֽיִם׃
15 ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.
וַיֹּ֣שַׁע מֵ֭חֶרֶב מִפִּיהֶ֑ם וּמִיַּ֖ד חָזָ֣ק אֶבְיֽוֹן׃
16 ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು.
וַתְּהִ֣י לַדַּ֣ל תִּקְוָ֑ה וְ֝עֹלָ֗תָה קָ֣פְצָה פִּֽיהָ׃
17 “ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.
הִנֵּ֤ה אַשְׁרֵ֣י אֱ֭נוֹשׁ יוֹכִחֶ֣נּֽוּ אֱל֑וֹהַּ וּמוּסַ֥ר שַׁ֝דַּ֗י אַל־תִּמְאָֽס׃
18 ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ.
כִּ֤י ה֣וּא יַכְאִ֣יב וְיֶחְבָּ֑שׁ יִ֝מְחַ֗ץ וְיָדָ֥יו תִּרְפֶּֽינָה׃
19 ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
בְּשֵׁ֣שׁ צָ֭רוֹת יַצִּילֶ֑ךָּ וּבְשֶׁ֓בַע ׀ לֹא־יִגַּ֖ע בְּךָ֣ רָֽע׃
20 ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು.
בְּ֭רָעָב פָּֽדְךָ֣ מִמָּ֑וֶת וּ֝בְמִלְחָמָ֗ה מִ֣ידֵי חָֽרֶב׃
21 ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; ನಾಶ ಬಂದಾಗ ನೀನು ಭಯಪಡುವುದಿಲ್ಲ.
בְּשׁ֣וֹט לָ֭שׁוֹן תֵּחָבֵ֑א וְֽלֹא־תִירָ֥א מִ֝שֹּׁ֗ד כִּ֣י יָבֽוֹא׃
22 ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.
לְשֹׁ֣ד וּלְכָפָ֣ן תִּשְׂחָ֑ק וּֽמֵחַיַּ֥ת הָ֝אָ֗רֶץ אַל־תִּירָֽא׃
23 ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.
כִּ֤י עִם־אַבְנֵ֣י הַשָּׂדֶ֣ה בְרִיתֶ֑ךָ וְחַיַּ֥ת הַ֝שָּׂדֶ֗ה הָשְׁלְמָה־לָֽךְ׃
24 ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.
וְֽ֭יָדַעְתָּ כִּי־שָׁל֣וֹם אָהֳלֶ֑ךָ וּֽפָקַדְתָּ֥ נָ֝וְךָ וְלֹ֣א תֶחֱטָֽא׃
25 ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ.
וְֽ֭יָדַעְתָּ כִּי־רַ֣ב זַרְעֶ֑ךָ וְ֝צֶאֱצָאֶ֗יךָ כְּעֵ֣שֶׂב הָאָֽרֶץ׃
26 ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ.
תָּב֣וֹא בְכֶ֣לַח אֱלֵי־קָ֑בֶר כַּעֲל֖וֹת גָּדִ֣ישׁ בְּעִתּֽוֹ׃
27 “ಇದನ್ನು ನಾವು ಪರಿಶೋಧಿಸಿದ್ದೇವೆ; ಇದು ಸತ್ಯವಾದದ್ದು, ಇದನ್ನು ನೀನು ಕೇಳಿ ತಿಳಿದುಕೋ, ಇದನ್ನು ನೀನು ಅನ್ವಯಿಸು.”
הִנֵּה־זֹ֭את חֲקַרְנ֥וּהָ כֶּֽן־הִ֑יא שְׁ֝מָעֶ֗נָּה וְאַתָּ֥ה דַֽע־לָֽךְ׃ פ

< ಯೋಬನು 5 >