< ಯೋಬನು 8 >

1 ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:
পরে শূহীয় বিলদদ উত্তর দিল এবং বলল,
2 “ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ? ನೀನು ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ.
“কতদিন তুমি এইসব কথা বলবে? কতদিন তোমার মুখের কথা ঝড়ো বাতাসের মত বয়ে চলবে?
3 ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?
ঈশ্বর কি ন্যায়বিচার পরিবর্তন করবেন? সর্বশক্তিমান কি ধার্মিকতার পরিবর্তন করবেন?
4 ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು.
তোমার সন্তানরা তাঁর বিরুদ্ধে পাপ করেছে; আমরা জানি তা, তিনি তাদেরকে তাদের পাপের হাতে সমর্পণ করেছেন।
5 ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, ಸರ್ವಶಕ್ತರಿಗೆ ಬಿನ್ನಹ ಮಾಡು.
কিন্তু যদি তুমি স্বযত্নে ঈশ্বরকে ডাক এবং তোমার অনুরোধ সর্বশক্তিমানের সামনে রাখো।
6 ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು.
যদি তুমি শুদ্ধ এবং সরল হও; তাহলে তিনি অবশ্যই তোমার জন্য কাজ করবেন এবং তোমায় পুরস্কৃত করবেন একটি বাড়ি দিয়ে যা সত্যিই তোমারই হবে।
7 ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು.
এমনকি যদিও তোমার শুরু ছোট ছিল, তবুও তোমার শেষ অবস্থা খুব ভালো হবে।
8 “ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.
আমি প্রার্থনা করি, আগেকার লোকেদেরকে জিজ্ঞাসা কর; আমাদের পূর্বপুরুষ যা আবিষ্কার করেছেন তা শিখতে যত্ন কর।
9 ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ.
আমরা গতকাল জন্মেছি এবং কিছুই জানি না কারণ আমাদের আয়ু পৃথিবীতে ছায়ার মত।
10 ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?
১০তারা কি তোমায় শেখাবে না এবং বলবে না? তারা কি তাদের হৃদয় থেকে কথা বলবে না?
11 ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ?
১১জলাভূমি ছাড়া কি নলখাগড়া বাড়তে পারে? জল ছাড়া কি উলুখাগড়া বাড়তে পারে?
12 ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು.
১২যখন সেগুলো সতেজ থাকে, তা কাটা হয় না, তারা অন্য যে কোন ঘাসের থেকে আগে শুকিয়ে যায়।
13 ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.
১৩যারা ঈশ্বরকে ভুলে যায় তাদের রাস্তাও সেই রকম, অধার্ম্মিক লোকের আশা নষ্ট হবে,
14 ಅಂಥವರ ಭರವಸೆಯು ಭಂಗವಾಗುವುದು; ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು.
১৪তাদের যাদের আস্থা ভেঙে যায় এবং তাদের যাদের বিশ্বাস দুর্বল যেমন একটা মাকড়সার জালের মত।
15 ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು.
১৫সেই রকম লোক নিজের বাড়ির ওপর নির্ভর করবে, কিন্তু তা দাঁড়াবে না; সে শক্ত করে ধরবে, কিন্তু তা টিকবে না।
16 ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.
১৬সূর্য্যের নিচে সে সতেজ এবং তার কান্ড পুরো বাগানে ছড়িয়ে পরে।
17 ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, ಕಲ್ಲುಗಳ ನಡುವೆ ನುಗ್ಗುತ್ತವೆ.
১৭তার শিকড় পাথরের ঢিবি জড়িয়ে ধরে; পাথরের মধ্যে তারা ভালো জায়গা খোঁজে।
18 ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು.
১৮কিন্তু যদি এই লোকটি নিজের জায়গায় ধ্বংস হয়, তাহলে সেই জায়গা তাকে অস্বীকার করবে এবং বলবে, আমি কখনও তোমায় দেখিনি।
19 ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು.
১৯দেখ, এই হয় সেই রকম ব্যক্তির আচরণের আনন্দ, অন্য উদ্ভিদ সেই একই মাটি থেকে অঙ্কুরিত হবে তার জায়গায়।
20 “ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.
২০দেখ, ঈশ্বর নিরীহ মানুষকে তাড়িয়ে দেবেন না; না তিনি পাপীদের হাত গ্রহণ করবেন।
21 ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು.
২১তিনি এখনও তোমার মুখ হাঁসিতে পূর্ণ করবেন, তোমার ঠোঁট আনন্দে পূর্ণ করবেন।
22 ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”
২২যারা তোমায় ঘৃণা করবে তারা লজ্জায় পরবে; পাপীদের তাঁবু আর থাকবে না।”

< ಯೋಬನು 8 >