< ಯೋವೇಲನು 2 >

1 ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.
תִּקְע֨וּ שׁוֹפָ֜ר בְּצִיּ֗וֹן וְהָרִ֙יעוּ֙ בְּהַ֣ר קָדְשִׁ֔י יִרְגְּז֕וּ כֹּ֖ל יֹשְׁבֵ֣י הָאָ֑רֶץ כִּֽי־בָ֥א יוֹם־יְהוָ֖ה כִּ֥י קָרֽוֹב׃
2 ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.
י֧וֹם חֹ֣שֶׁךְ וַאֲפֵלָ֗ה י֤וֹם עָנָן֙ וַעֲרָפֶ֔ל כְּשַׁ֖חַר פָּרֻ֣שׂ עַל־הֶֽהָרִ֑ים עַ֚ם רַ֣ב וְעָצ֔וּם כָּמֹ֗הוּ לֹ֤א נִֽהְיָה֙ מִן־הָ֣עוֹלָ֔ם וְאַֽחֲרָיו֙ לֹ֣א יוֹסֵ֔ף עַד־שְׁנֵ֖י דּ֥וֹר וָדֽוֹר׃
3 ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.
לְפָנָיו֙ אָ֣כְלָה אֵ֔שׁ וְאַחֲרָ֖יו תְּלַהֵ֣ט לֶֽהָבָ֑ה כְּגַן־עֵ֨דֶן הָאָ֜רֶץ לְפָנָ֗יו וְאַֽחֲרָיו֙ מִדְבַּ֣ר שְׁמָמָ֔ה וְגַם־פְּלֵיטָ֖ה לֹא־הָ֥יְתָה לּֽוֹ׃
4 ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ. ಸವಾರರ ಹಾಗೆಯೇ ಓಡುತ್ತವೆ.
כְּמַרְאֵ֥ה סוּסִ֖ים מַרְאֵ֑הוּ וּכְפָרָשִׁ֖ים כֵּ֥ן יְרוּצֽוּן׃
5 ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
כְּק֣וֹל מַרְכָּב֗וֹת עַל־רָאשֵׁ֤י הֶֽהָרִים֙ יְרַקֵּד֔וּן כְּקוֹל֙ לַ֣הַב אֵ֔שׁ אֹכְלָ֖ה קָ֑שׁ כְּעַ֣ם עָצ֔וּם עֱר֖וּךְ מִלְחָמָֽה׃
6 ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.
מִפָּנָ֖יו יָחִ֣ילוּ עַמִּ֑ים כָּל־פָּנִ֖ים קִבְּצ֥וּ פָארֽוּר׃
7 ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.
כְּגִבּוֹרִ֣ים יְרֻצ֔וּן כְּאַנְשֵׁ֥י מִלְחָמָ֖ה יַעֲל֣וּ חוֹמָ֑ה וְאִ֤ישׁ בִּדְרָכָיו֙ יֵֽלֵכ֔וּן וְלֹ֥א יְעַבְּט֖וּן אֹרְחוֹתָֽם׃
8 ಒಂದು ಇನ್ನೊಂದನ್ನು ನೂಕುವುದಿಲ್ಲ. ಅವುಗಳಲ್ಲಿ ಪ್ರತಿಯೊಂದು ತನ್ನ ತನ್ನ ದಾರಿಯಲ್ಲಿ ಮುನ್ನಡೆಯುತ್ತವೆ. ತಮ್ಮ ಸ್ಥಾನಗಳನ್ನು ಬಿಟ್ಟುಕೊಡದೆ ಯುದ್ಧ ಮಾಡುತ್ತವೆ.
וְאִ֤ישׁ אָחִיו֙ לֹ֣א יִדְחָק֔וּן גֶּ֥בֶר בִּמְסִלָּת֖וֹ יֵֽלֵכ֑וּן וּבְעַ֥ד הַשֶּׁ֛לַח יִפֹּ֖לוּ לֹ֥א יִבְצָֽעוּ׃
9 ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತವೆ. ಗೋಡೆಯ ಮೇಲೆ ಓಡುತ್ತವೆ. ಅವು ಮನೆಗಳನ್ನು ಹತ್ತಿ, ಕಳ್ಳನ ಹಾಗೆ ಕಿಟಿಕಿಗಳಿಂದ ಪ್ರವೇಶಿಸುತ್ತವೆ.
בָּעִ֣יר יָשֹׁ֗קּוּ בַּֽחוֹמָה֙ יְרֻצ֔וּן בַּבָּתִּ֖ים יַעֲל֑וּ בְּעַ֧ד הַחַלּוֹנִ֛ים יָבֹ֖אוּ כַּגַּנָּֽב׃
10 ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.
לְפָנָיו֙ רָ֣גְזָה אֶ֔רֶץ רָעֲשׁ֖וּ שָׁמָ֑יִם שֶׁ֤מֶשׁ וְיָרֵ֙חַ֙ קָדָ֔רוּ וְכוֹכָבִ֖ים אָסְפ֥וּ נָגְהָֽם׃
11 ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?
וַֽיהוָ֗ה נָתַ֤ן קוֹלוֹ֙ לִפְנֵ֣י חֵיל֔וֹ כִּ֣י רַ֤ב מְאֹד֙ מַחֲנֵ֔הוּ כִּ֥י עָצ֖וּם עֹשֵׂ֣ה דְבָר֑וֹ כִּֽי־גָד֧וֹל יוֹם־יְהוָ֛ה וְנוֹרָ֥א מְאֹ֖ד וּמִ֥י יְכִילֶֽנּוּ׃
12 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”
וְגַם־עַתָּה֙ נְאֻם־יְהוָ֔ה שֻׁ֥בוּ עָדַ֖י בְּכָל־לְבַבְכֶ֑ם וּבְצ֥וֹם וּבְבְכִ֖י וּבְמִסְפֵּֽד׃
13 ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
וְקִרְע֤וּ לְבַבְכֶם֙ וְאַל־בִּגְדֵיכֶ֔ם וְשׁ֖וּבוּ אֶל־יְהוָ֣ה אֱלֹֽהֵיכֶ֑ם כִּֽי־חַנּ֤וּן וְרַחוּם֙ ה֔וּא אֶ֤רֶךְ אַפַּ֙יִם֙ וְרַב־חֶ֔סֶד וְנִחָ֖ם עַל־הָרָעָֽה׃
14 ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?
מִ֥י יוֹדֵ֖עַ יָשׁ֣וּב וְנִחָ֑ם וְהִשְׁאִ֤יר אַֽחֲרָיו֙ בְּרָכָ֔ה מִנְחָ֣ה וָנֶ֔סֶךְ לַיהוָ֖ה אֱלֹהֵיכֶֽם׃ פ
15 ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.
תִּקְע֥וּ שׁוֹפָ֖ר בְּצִיּ֑וֹן קַדְּשׁוּ־צ֖וֹם קִרְא֥וּ עֲצָרָֽה׃
16 ಜನರನ್ನು ಕೂಡಿಸಿರಿ; ಸಭೆಯನ್ನು ಪವಿತ್ರಗೊಳಿಸಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳಗಿಂದಲೂ ಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.
אִסְפוּ־עָ֞ם קַדְּשׁ֤וּ קָהָל֙ קִבְצ֣וּ זְקֵנִ֔ים אִסְפוּ֙ עֽוֹלָלִ֔ים וְיֹנְקֵ֖י שָׁדָ֑יִם יֵצֵ֤א חָתָן֙ מֵֽחֶדְר֔וֹ וְכַלָּ֖ה מֵחֻפָּתָֽהּ׃
17 ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”
בֵּ֤ין הָאוּלָם֙ וְלַמִּזְבֵּ֔חַ יִבְכּוּ֙ הַכֹּ֣הֲנִ֔ים מְשָׁרְתֵ֖י יְהוָ֑ה וְֽיֹאמְר֞וּ ח֧וּסָה יְהוָ֣ה עַל־עַמֶּ֗ךָ וְאַל־תִּתֵּ֨ן נַחֲלָתְךָ֤ לְחֶרְפָּה֙ לִמְשָׁל־בָּ֣ם גּוֹיִ֔ם לָ֚מָּה יֹאמְר֣וּ בָֽעַמִּ֔ים אַיֵּ֖ה אֱלֹהֵיהֶֽם׃
18 ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು, ತಮ್ಮ ಜನರನ್ನು ಕನಿಕರಿಸುವರು.
וַיְקַנֵּ֥א יְהוָ֖ה לְאַרְצ֑וֹ וַיַּחְמֹ֖ל עַל־עַמּֽוֹ׃
19 ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.
וַיַּ֨עַן יְהוָ֜ה וַיֹּ֣אמֶר לְעַמּ֗וֹ הִנְנִ֨י שֹׁלֵ֤חַ לָכֶם֙ אֶת־הַדָּגָן֙ וְהַתִּיר֣וֹשׁ וְהַיִּצְהָ֔ר וּשְׂבַעְתֶּ֖ם אֹת֑וֹ וְלֹא־אֶתֵּ֨ן אֶתְכֶ֥ם ע֛וֹד חֶרְפָּ֖ה בַּגּוֹיִֽם׃
20 “ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.
וְֽאֶת־הַצְּפוֹנִ֞י אַרְחִ֣יק מֵעֲלֵיכֶ֗ם וְהִדַּחְתִּיו֮ אֶל־אֶ֣רֶץ צִיָּ֣ה וּשְׁמָמָה֒ אֶת־פָּנָ֗יו אֶל־הַיָּם֙ הַקַּדְמֹנִ֔י וְסֹפ֖וֹ אֶל־הַיָּ֣ם הָאַֽחֲר֑וֹן וְעָלָ֣ה בָאְשׁ֗וֹ וְתַ֙עַל֙ צַחֲנָת֔וֹ כִּ֥י הִגְדִּ֖יל לַעֲשֽׂוֹת׃
21 ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.
אַל־תִּֽירְאִ֖י אֲדָמָ֑ה גִּ֣ילִי וּשְׂמָ֔חִי כִּֽי־הִגְדִּ֥יל יְהוָ֖ה לַעֲשֽׂוֹת׃
22 ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
אַל־תִּֽירְאוּ֙ בַּהֲמ֣וֹת שָׂדַ֔י כִּ֥י דָשְׁא֖וּ נְא֣וֹת מִדְבָּ֑ר כִּֽי־עֵץ֙ נָשָׂ֣א פִרְי֔וֹ תְּאֵנָ֥ה וָגֶ֖פֶן נָתְנ֥וּ חֵילָֽם׃
23 ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.
וּבְנֵ֣י צִיּ֗וֹן גִּ֤ילוּ וְשִׂמְחוּ֙ בַּיהוָ֣ה אֱלֹֽהֵיכֶ֔ם כִּֽי־נָתַ֥ן לָכֶ֛ם אֶת־הַמּוֹרֶ֖ה לִצְדָקָ֑ה וַיּ֣וֹרֶד לָכֶ֗ם גֶּ֛שֶׁם מוֹרֶ֥ה וּמַלְק֖וֹשׁ בָּרִאשֽׁוֹן׃
24 ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.
וּמָלְא֥וּ הַגֳּרָנ֖וֹת בָּ֑ר וְהֵשִׁ֥יקוּ הַיְקָבִ֖ים תִּיר֥וֹשׁ וְיִצְהָֽר׃
25 “ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.
וְשִׁלַּמְתִּ֤י לָכֶם֙ אֶת־הַשָּׁנִ֔ים אֲשֶׁר֙ אָכַ֣ל הָֽאַרְבֶּ֔ה הַיֶּ֖לֶק וְהֶחָסִ֣יל וְהַגָּזָ֑ם חֵילִי֙ הַגָּד֔וֹל אֲשֶׁ֥ר שִׁלַּ֖חְתִּי בָּכֶֽם׃
26 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
וַאֲכַלְתֶּ֤ם אָכוֹל֙ וְשָׂב֔וֹעַ וְהִלַּלְתֶּ֗ם אֶת־שֵׁ֤ם יְהוָה֙ אֱלֹ֣הֵיכֶ֔ם אֲשֶׁר־עָשָׂ֥ה עִמָּכֶ֖ם לְהַפְלִ֑יא וְלֹא־יֵבֹ֥שׁוּ עַמִּ֖י לְעוֹלָֽם׃
27 ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.
וִידַעְתֶּ֗ם כִּ֣י בְקֶ֤רֶב יִשְׂרָאֵל֙ אָ֔נִי וַאֲנִ֛י יְהוָ֥ה אֱלֹהֵיכֶ֖ם וְאֵ֣ין ע֑וֹד וְלֹא־יֵבֹ֥שׁוּ עַמִּ֖י לְעוֹלָֽם׃ ס
28 “ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.
וְהָיָ֣ה אַֽחֲרֵי־כֵ֗ן אֶשְׁפּ֤וֹךְ אֶת־רוּחִי֙ עַל־כָּל־בָּשָׂ֔ר וְנִבְּא֖וּ בְּנֵיכֶ֣ם וּבְנֽוֹתֵיכֶ֑ם זִקְנֵיכֶם֙ חֲלֹמ֣וֹת יַחֲלֹמ֔וּן בַּח֣וּרֵיכֶ֔ם חֶזְיֹנ֖וֹת יִרְאֽוּ׃
29 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು.
וְגַ֥ם עַל־הָֽעֲבָדִ֖ים וְעַל־הַשְּׁפָח֑וֹת בַּיָּמִ֣ים הָהֵ֔מָּה אֶשְׁפּ֖וֹךְ אֶת־רוּחִֽי׃
30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
וְנָֽתַתִּי֙ מֽוֹפְתִ֔ים בַּשָּׁמַ֖יִם וּבָאָ֑רֶץ דָּ֣ם וָאֵ֔שׁ וְתִֽימֲר֖וֹת עָשָֽׁן׃
31 ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
הַשֶּׁ֙מֶשׁ֙ יֵהָפֵ֣ךְ לְחֹ֔שֶׁךְ וְהַיָּרֵ֖חַ לְדָ֑ם לִפְנֵ֗י בּ֚וֹא י֣וֹם יְהוָ֔ה הַגָּד֖וֹל וְהַנּוֹרָֽא׃
32 ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.
וְהָיָ֗ה כֹּ֧ל אֲשֶׁר־יִקְרָ֛א בְּשֵׁ֥ם יְהוָ֖ה יִמָּלֵ֑ט כִּ֠י בְּהַר־צִיּ֨וֹן וּבִירוּשָׁלִַ֜ם תִּֽהְיֶ֣ה פְלֵיטָ֗ה כַּֽאֲשֶׁר֙ אָמַ֣ר יְהוָ֔ה וּבַ֨שְּׂרִידִ֔ים אֲשֶׁ֥ר יְהוָ֖ה קֹרֵֽא׃

< ಯೋವೇಲನು 2 >