< ಯೋವೇಲನು 3 >

1 “ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,
כִּי הִנֵּה בַּיָּמִים הָהֵמָּה וּבָעֵת הַהִיא אֲשֶׁר אשוב אָשִׁיב אֶת־שְׁבוּת יְהוּדָה וִירוּשָׁלָֽ͏ִם׃
2 ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.
וְקִבַּצְתִּי אֶת־כָּל־הַגּוֹיִם וְהוֹרַדְתִּים אֶל־עֵמֶק יְהֽוֹשָׁפָט וְנִשְׁפַּטְתִּי עִמָּם שָׁם עַל־עַמִּי וְנַחֲלָתִי יִשְׂרָאֵל אֲשֶׁר פִּזְּרוּ בַגּוֹיִם וְאֶת־אַרְצִי חִלֵּֽקוּ׃
3 ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.
וְאֶל־עַמִּי יַדּוּ גוֹרָל וַיִּתְּנוּ הַיֶּלֶד בַּזּוֹנָה וְהַיַּלְדָּה מָכְרוּ בַיַּיִן וַיִּשְׁתּֽוּ׃
4 “ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
וְגַם מָה־אַתֶּם לִי צֹר וְצִידוֹן וְכֹל גְּלִילוֹת פְּלָשֶׁת הַגְּמוּל אַתֶּם מְשַׁלְּמִים עָלָי וְאִם־גֹּמְלִים אַתֶּם עָלַי קַל מְהֵרָה אָשִׁיב גְּמֻלְכֶם בְּרֹאשְׁכֶֽם׃
5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.
אֲשֶׁר־כַּסְפִּי וּזְהָבִי לְקַחְתֶּם וּמַֽחֲמַדַּי הַטֹּבִים הֲבֵאתֶם לְהֵיכְלֵיכֶֽם׃
6 ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.
וּבְנֵי יְהוּדָה וּבְנֵי יְרוּשָׁלִַם מְכַרְתֶּם לִבְנֵי הַיְּוָנִים לְמַעַן הַרְחִיקָם מֵעַל גְּבוּלָֽם׃
7 “ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.
הִנְנִי מְעִירָם מִן־הַמָּקוֹם אֲשֶׁר־מְכַרְתֶּם אֹתָם שָׁמָּה וַהֲשִׁבֹתִי גְמֻלְכֶם בְּרֹאשְׁכֶֽם׃
8 ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.
וּמָכַרְתִּי אֶת־בְּנֵיכֶם וְאֶת־בְּנֽוֹתֵיכֶם בְּיַד בְּנֵי יְהוּדָה וּמְכָרוּם לִשְׁבָאיִם אֶל־גּוֹי רָחוֹק כִּי יְהוָה דִּבֵּֽר׃
9 ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧಕ್ಕೆ ಇದನ್ನು ಸಿದ್ಧಮಾಡಿರಿ; ಶೂರರನ್ನು ಎಬ್ಬಿಸಿರಿ; ಯುದ್ಧಭಟರೆಲ್ಲರು ಸಮೀಪಿಸಿ ಬರಲಿ.
קִרְאוּ־זֹאת בַּגּוֹיִם קַדְּשׁוּ מִלְחָמָה הָעִירוּ הַגִּבּוֹרִים יִגְּשׁוּ יַֽעֲלוּ כֹּל אַנְשֵׁי הַמִּלְחָמָֽה׃
10 ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ.
כֹּתּוּ אִתֵּיכֶם לַֽחֲרָבוֹת וּמַזְמְרֹֽתֵיכֶם לִרְמָחִים הַֽחַלָּשׁ יֹאמַר גִּבּוֹר אָֽנִי׃
11 ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ.
עוּשׁוּ וָבֹאוּ כָֽל־הַגּוֹיִם מִסָּבִיב וְנִקְבָּצוּ שָׁמָּה הַֽנְחַת יְהוָה גִּבּוֹרֶֽיךָ׃
12 ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.
יֵעוֹרוּ וְיַעֲלוּ הַגּוֹיִם אֶל־עֵמֶק יְהֽוֹשָׁפָט כִּי שָׁם אֵשֵׁב לִשְׁפֹּט אֶת־כָּל־הַגּוֹיִם מִסָּבִֽיב׃
13 ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.
שִׁלְחוּ מַגָּל כִּי בָשַׁל קָצִיר בֹּאֽוּ רְדוּ כִּֽי־מָלְאָה גַּת הֵשִׁיקוּ הַיְקָבִים כִּי רַבָּה רָעָתָֽם׃
14 ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.
הֲמוֹנִים הֲמוֹנִים בְּעֵמֶק הֶֽחָרוּץ כִּי קָרוֹב יוֹם יְהוָה בְּעֵמֶק הֶחָרֽוּץ׃
15 ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.
שֶׁמֶשׁ וְיָרֵחַ קָדָרוּ וְכוֹכָבִים אָסְפוּ נָגְהָֽם׃
16 ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.
וַיהוָה מִצִּיּוֹן יִשְׁאָג וּמִירוּשָׁלִַם יִתֵּן קוֹלוֹ וְרָעֲשׁוּ שָׁמַיִם וָאָרֶץ וַֽיהוָה מַֽחֲסֶה לְעַמּוֹ וּמָעוֹז לִבְנֵי יִשְׂרָאֵֽל׃
17 ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.
וִֽידַעְתֶּם כִּי אֲנִי יְהוָה אֱלֹהֵיכֶם שֹׁכֵן בְּצִיּוֹן הַר־קָדְשִׁי וְהָיְתָה יְרוּשָׁלִַם קֹדֶשׁ וְזָרִים לֹא־יַֽעַבְרוּ־בָהּ עֽוֹד׃
18 ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.
וְהָיָה בַיּוֹם הַהוּא יִטְּפוּ הֶהָרִים עָסִיס וְהַגְּבָעוֹת תֵּלַכְנָה חָלָב וְכָל־אֲפִיקֵי יְהוּדָה יֵלְכוּ מָיִם וּמַעְיָן מִבֵּית יְהוָה יֵצֵא וְהִשְׁקָה אֶת־נַחַל הַשִּׁטִּֽים׃
19 ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.
מִצְרַיִם לִשְׁמָמָה תִֽהְיֶה וֶאֱדוֹם לְמִדְבַּר שְׁמָמָה תִּֽהְיֶה מֵֽחֲמַס בְּנֵי יְהוּדָה אֲשֶׁר־שָׁפְכוּ דָם־נָקִיא בְּאַרְצָֽם׃
20 ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.
וִיהוּדָה לְעוֹלָם תֵּשֵׁב וִירוּשָׁלַ͏ִם לְדוֹר וָדֽוֹר׃
21 ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ? ಇಲ್ಲ, ನಾನು ಎಂದಿಗೂ ಬಿಡುವುದಿಲ್ಲ.
וְנִקֵּיתִי דָּמָם לֹֽא־נִקֵּיתִי וַֽיהוָה שֹׁכֵן בְּצִיּֽוֹן׃ 73 4 4 4

< ಯೋವೇಲನು 3 >