< ಯೋಹಾನನು 11 >

1 ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
U igun wa ba yo ni Lazaru, a lo'a hi indji u Baitanya, ni gbu ba Mariyamu ni vayi ma Marta.
2 ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
Mariyamu wa gban yen ni Bachi na se za ma ni futu ma, wa vayi Lazaru si lo'a.
3 ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.
Imri vayi maba ton ba adu hi ni Yesu, andi, “Bachi, ya, indji wa'u son si to.”
4 ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.
Wawo, na tre, “Lilo mba ni nji hi kwu na nitu gbere san rji ni ndu vren Rji ndu fe gbere san ni tu ma.”
5 ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.
Yesu ni son Marta, ni vayi ma vren wa ni Lazaru.
6 ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.
Wa a wo ndi Lazaru silo'a, na kri ti ivi hari ni bubu wa ahe.
7 ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು.
Ni kogon ki, wa hla, ni almajere ma, “Biri ki hi ni Yahudiya ngari.”
8 ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.
U almajere ba hla niwu, “Mala, Yahudawa bari si wa ndi ba ta ni tita, u la ni son k'ma hi ni ki?
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ.
Yesu tre niba, andi inton u kpan rji ana awa wulon don ha na? Indji wa a zren ni ri, ana kubu zana, ni wa asi to kpan u gbungbulu yi.
10 ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ,” ಎಂದು ಉತ್ತರಕೊಟ್ಟರು.
Indji wa ni zren ni chu, ani kubu za nitu wa ikpan na he na.
11 ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.
A tre kpe biyi ni kogon biyi, a hla ni bawu, “Ikpan mbu Lazaru a si kru nna, mi si hi bubu shime lunde ni na.
12 ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು.
U almajere ba hla niwu, “Bachi, ani ta si kruna, e ani shime ni nna'a.”
13 ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.
Yesu si tre ni tu kwu Lazaru u ba si nda asi tre nitu kruna u kusimu.
14 ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.
U Yesu a mamla hla ni bawu ndi, “Lazaru kwu.
15 ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.
Mi ngyiri ni tubi, niwa mina he na ni ndu kpanyeme. Biri ki hi niwu.”
16 ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.
Toma, wa ba yo ndi vren u hlen hen, a hla ni mburualmajere ba ndu baba hi ngame na hi kwu ni Yesu.”
17 ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.
Wa Yesu aye, u wa ye to Lazaru ati za'a ni be ye.
18 ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.
Baitanya ahe whewhre ni Urushalima, avi zren fifie me ni tsutsu mba.
19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.
Yahudawa gbugbuwu ba ye ni ye chiMaryamu mba Marta ni kwu Lazaru.
20 ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.
Wa Marta wo andi Yesu ni ye, na luhi ni ndu wawu hi same wu'a u Maryamu a son zu ni miko.
21 ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.
Marta hla ni Yesu, “Bachi, una he nita ni lalon mu, vayi mu ana kwu na.”
22 ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.
Zizan me mi to ikpe wa u bre Rji ani no'u.”
23 ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.
Yesu hla niwu, vayi me ni ta shime.
24 ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.
U Marta hla niwu, “Mi to ani ta shime chachu klekle.”
25 ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.
Yesu hla niwu, “Ime yi mi ta shime u klekle, Ime yi mi re (iviri), indji wa a kpanyeme ni me, ani ta kwu, ani ta shime;
26 ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ, (aiōn g165)
ni indji wa ahe ni re (iviri), na kpanyeme ni me, ana kwu na; u kpanyeme ni wa?” (aiōn g165)
27 ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.
U wa hla niwu, “E, Bachi, mi kpanyeme andi iwuyi u Almasihu, Vren Rji, iwa ani ye ni gbungbulu'a.
28 ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.
Ni wa a hla naki, na kma hi ni vayi ma Maryamu, na yo ti gigran, na hla, “Mala ye ri ye, na ni yo.”
29 ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.
Wa a wo naki, wa lunde gbagbla hi niwu.
30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.
Yesu na ri ni vi gbu'a rina, ahe ni bubu wa Iwa ka same ni wu'a.
31 ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.
Ni Yahudawa wa ba he baba Maryamu biwa ba ye chi ba ni kwu'a, bato lu rju ni miko gbagbla me, u ba lu hu, ni ban andi a rju ni bubu yi ni nyu be.
32 ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.
Wa a ka ri ni bubu wa Yesu he'a na ka Joku niwu ni za ma, na hla, “Bachi, una he nita, vayimuy ana kwu na.”
33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,
Wa Yesu ato'u si yi, ni Yahudawa biwa ba hu'a, i wa kpere ni Ruhu na lo ni suron;
34 “ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು ಯೇಸುವಿಗೆ, “ಸ್ವಾಮೀ, ಬಂದು ನೋಡಿರಿ,” ಎಂದರು.
iwa tre, bika yo ni ntsen? “U ba hla niwu, “Bachi, ye to.”
35 ಯೇಸು ಕಣ್ಣೀರಿಟ್ಟರು.
Yesu yi.
36 ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.
U Yahudawa ba ba hla ndi, “toh yanda ani son Lazaru!”
37 ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.
Ba mba ba tre, “Wawu igu yi wa a ya no indji u fyen to bubu'a, ani na ya u gu hi bubu kwu na?
38 ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.
Yesu he ni mi si lo suron ni tu ma, na hi ni be'a. Ibe'a a he ni ko fron tita u ba ka he ni tita.
39 ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.
U Yesu tre, “Ban tita yi rju.” Marta vayi Lazaru wa a kwu a, a hla ni Yesu, “Bachi, zizan ikon kmo a gla ye niwa a ti ivi nzah ni kwu.
40 ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.
Yesu hla niwu, mina hla niwu ikpe wa u kpanyeme u to nikon u Rji'a na?
41 ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
U ba ban tita rju, Yesu zun shishi na tre, “Iti, mi ngyiri niwu niwa u wo me.”
42 ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.
Mi to wa u wo me ni ton wawu, nitu son yi wa gyen klan kagon mu yi mi tre wa, ni ndu ba kpanyeme andi ahi wuyi u ton me.”
43 ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.
Ni wa a tre kle, na tre gbame, Lazaru rju”
44 ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.
U ndji wa a kwu'a a lu rju, u za ma ni wo ma ba he ni lilo'o ni pri, shishima he ni kika ni gbanjan nklon. Yesu hla bawu, “Bika siwu, ndu hi.”
45 ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.
Gbugbuwu ni mi Yahudawa wa ba ye ni Maryamu ba to ikpe wa Yesu ti'a u ba kpanyeme niwu.
46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.
U bari ba kma hi naka hla ni Farisawa ikpe wa Yesu a ti'a.
47 ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
U Firistoci bi nigon,'a ni Farisawa ba yo indji bi kpanchi'a shuti buburi, u ba tre, ageri kita?” igu yi ani ti gban bi babran.
48 ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.
Ki ta kadon naki, indji ba kpa'u nyeme, Romawa ba ye kpa bubu mbu, ni ndji mbu.
49 ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.
Naki, iri ni mi mba kayatas kena wa ndi ahi kikle Firist ni se kima, a hla bawu, “Bi na to kpe na.
50 ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.
Bi na mla ya a bi zan ni ndu indji riri kwu ni tu indji, ni wa indji wawu ba sutuna.”
51 ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ
A hla ki, ana nitu ma kankrji ma na, ani tu iwa a hi kikle Firist, a to tsu ndi Yesu ni yi ni kwu ni tu ndji;
52 ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ana nitu indji kankrji na, anitu ndu ba shi imri Irji ti ni buburi biwa ba lu vra kagon.
53 ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.
Rji ni chachu ki na lu ni tsikpa bubu wa ndu ba wu Yesu.
54 ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.
Rji ni ki Yesu na la ni zren ni rira ni mi Yahudawa na. Wa ala kma hi ni kalan ri whiwhre ni miji ni gburi wa ba yo Ifraimu. Ni mu a son ni almajere ma.
55 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
Igan u ru gran (indji ketarewa) u Yahudawa a tewhre, gbugbu ba hi Urushalima rji ni klan meme'a hi ri ndu ivi idiri ni ndu ba kati tsatsra.
56 ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
U lu ri wa Yesu, na ni tre ni kpa mba niwa ba kri ni ni hekeli andi, “Angye bi ki rhimre? Ana ye ni idin na?
57 ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
Kikle Firist ni Farisawa ba yo du andi ko ni zen wa ba to Yesu ba ka ye hla ni ndu ba vu.

< ಯೋಹಾನನು 11 >