< ಯೋಹಾನನು 12 >
1 ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.
越節前六天,耶穌來到伯達尼,就是耶穌從死者中喚起納匝祿的地方。
2 ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.
有人在那裡為他擺設了晚宴,瑪爾大伺候,而納匝祿也是和耶穌一起坐席的一位。
3 ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.
那時,瑪利亞拿了一斤極珍貴的純「拿爾多」香液,敷抹了耶穌的腳,並用自己的頭髮擦乾,屋裏便充滿了香液的氣味。
4 ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು,
那要負賣耶穌的依斯加略猶達斯──即他的一個門徒──便說:
5 “ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.
「為什麼不把這香液去賣三白塊「德納」,施捨給窮人呢?」
6 ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.
他說這話,並不是因為他關心窮人,只因為他是個賊,掌管錢囊,常偷取其中所存放的。
7 ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.
耶穌就說: 「由她罷!這原是她我安葬之日而保存的。
8 ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.
你們常有窮人和你們在一起;至於我,你們卻不常。」
9 ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.
有許多猶太人聽說耶穌在那裏,就來了,不但是為耶穌,也是為看他從死者中所喚起的拉匝祿。
10 ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.
為此,司祭長議決連拉匝祿也要殺掉,
11 ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.
因為有許多猶太人為了拉匝祿的緣故,離開他們,而信從了耶穌。
12 ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,
第二天來過節的群眾,聽說耶穌來到耶路撒冷,
13 ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.
便拿了棕櫚枝,出去迎接他,喊說: 「賀三納!因上主之名而來的,以色列的君王應受稱頌。」
14 ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:
耶穌找了一匹小驢,就騎上去,正如經上所記載的:
15 “ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.
「熙雍女子,不要害怕! 你的君王騎著驢駒來了! 」
16 ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.
起初他的門徒也沒明白有這些事,然而,當耶穌受光榮以後,他們才想起這些話是指著他而記載的。為此,他們就這樣對他做了。
17 ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.
當耶穌叫拉匝祿從墳墓中出來,由死者中喚起他時,那時同他在一起的眾人,都為所見的作證;
18 ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.
因此,有一群人去迎接他,因為他們聽說他行了這個神跡;
19 ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.
於是法利賽人便彼此說: 「看,你們一無所成!瞧,全世界都跟他去了。」
20 ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.
在那些上來過節,崇拜天主的人中,有些希臘人。
21 ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.
他們來到加利肋亞貝特賽達人斐理伯前,請求他說: 「先生! 我們願拜見耶穌。」
22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು.
斐理伯就去告訴安德肋,然後安德肋和斐理伯便來告訴耶穌。
23 ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.
耶穌開口向他們說: 「人子要受光榮的時辰到了。
24 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.
我實實在在告訴你們:一粒麥子如果不落在地裏死了,仍只是一粒;如果死了,才結出許多子粒來。
25 ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು. (aiōnios )
愛惜自己性命的,必要喪失性命;在現世憎恨自己性命的,必要保存性命入於永生。 (aiōnios )
26 ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.
誰若事奉我,就當跟隨我;如此,我在那裡,我的僕人也要在那裡;誰若事奉我,我父必要尊重他。
27 “ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?
現在我心神煩亂,我可說什麼呢?我說: 父啊!救我脫離這時辰罷?但正是為此,我才到了這時辰。
28 ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.
父啊!光榮你的名罷! 」當時有聲音來自天上: 「我已光榮了我的名,我還要光榮。」
29 ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.
在場聽見的群眾,便說: 「這是打雷。」另有人說: 「是天使同他說話。」
30 ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.
耶穌回答說: 「這聲音不是為我而來,而是為你們。
31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.
現在就是這世界應受審判的時候,現這世界的元首就要被趕出去;
32 ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.
至於我,當我從地上被舉起來時,便要吸引眾人來歸向我。」
33 ತಾವು ಎಂಥಾ ಮರಣದಿಂದ ಸಾಯಬೇಕಾಗಿದೆ ಎಂದು ಸೂಚಿಸಿ ಇದನ್ನು ಹೇಳಿದರು.
他說這話,是要表明他要以怎樣的死而死。
34 ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು. (aiōn )
於是群眾回答他說: 「我們從法律知道: 默西亞要存留到永遠;你怎麼說: 人子必須被舉起呢?這個人子是誰?」 (aiōn )
35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.
耶穌遂給他們說:「光在你們中間還有片刻。你們趁著還有光的時候,應該行走,免得黑暗籠罩了你們。那在黑暗中行走的,不知道往那裏去。
36 ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.
幾時你們還有光,應當信從光,好成為光明之子。」耶穌講完了這些話,就躲開他們隱藏去了。
37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.
耶穌雖然在他們面前行了這麼多的神跡,他們仍然不信不他;
38 ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.
這正應驗了依撒意亞先知所說的話: 『上主! 有誰會相信我們的報道呢?上主的手臂又向誰顯示了出來呢?』
39 ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:
他們不能信,因為依撒意亞又說過:
40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”
『上主使他們瞎了眼,使他們硬了心,免得他們眼睛看見,心裏覺悟而悔改,使我治好他們。』
41 ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.
依撒意亞因為看見了他的光榮,所以指著講了這話。
42 ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.
事雖如此,但在首領中,仍有許多人信從了耶穌,只為了法利賽人而不敢明認,免得被逐出會堂,
43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
因為他們喜愛世人的光榮,勝過天主的光榮。
44 ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.
耶穌說: 「信我的,不是信我,而是信那派遣我來的;
45 ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.
看見我的,也就是看見那派遣我來的。
46 ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
我身為光明,來到了世界上,使凡信我的,不留在黑暗中。
47 “ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.
無論誰,若聽我的話而不遵行,我不審判他,因為我不是為審判世界而來,乃是為拯救世界。
48 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.
拒絕我,及不接受我話的,自有審判他的: 就是我所說的話,要在末日審判他。
49 ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.
因為我沒有憑我自己說話,而是派遣我來的父,他給我出了命,叫我該說什麼,該講什麼。
50 ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು. (aiōnios )
我知道他的命令就是永生;所以,我所講論的,全是依照父對我所說的而講論的。」 (aiōnios )